6:45 PM Tuesday7 - January 2025
ಬ್ರೇಕಿಂಗ್ ನ್ಯೂಸ್
ಅರಣ್ಯ ಒತ್ತುವರಿ, ಕಳ್ಳಬೇಟೆ ತಡೆಗೆ ಗರುಡಾಕ್ಷಿ ಅಸ್ತ್ರ: ಆನ್ಲೈನ್ ಎಫ್ಐಆರ್ ವ್ಯವಸ್ಥೆಗೆ ಚಾಲನೆ ರಾಜ್ಯದಲ್ಲಿ ಎಚ್ ಎಂಪಿವಿ ಸೋಂಕು: ಜನರಲ್ಲಿ ಆತಂಕ ಬೇಡ, ಎಚ್ಚರ ಇರಲಿ; ಆರೋಗ್ಯ… ತೀರ್ಥಹಳ್ಳಿಯ ಕಿತ್ತನಗದ್ದೆ ನಾಡ್ತಿಯ ಹೊಳೆಯಲ್ಲಿ ಮರಳು ಮಾಫಿಯ ಜಾಲ ಪತ್ತೆ ಎಲ್ಲ ಎಸ್ಕಾಂ ಸಿಬ್ಬಂದಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ: ಇಂಧನ ಸಚಿವ… ಊಟದಲ್ಲಿ ರಾಜಕೀಯ ಬೆರೆಸಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್ ಮೂಡಿಗೆರೆ: ಹುಲಿ ದಾಳಿಗೆ ಬಾಣಂತಿ ಹಸು ಬಲಿ; ಕರುವಿನ ಆಕ್ರಂಧನ ಬೆಂಗಳೂರು: 22ನೇ ಚಿತ್ರಸಂತೆ ಉದ್ಘಾಟನೆ; ಕಲಾಕೃತಿ ಕೊಂಡು ಕಲಾವಿದರ ಬೆಂಬಲಿಸಲು ಮುಖ್ಯಮಂತ್ರಿ ಕರೆ ವಿರೋಧ ಪಕ್ಷ ಆರೋಪ ಮಾಡಿದರೆ ಸಾಬೀತು ಮಾಡಬೇಕು: ದಾವಣಗೆರೆಯಲ್ಲಿ ಸಿಎಂ ಸಿದ್ದರಾಮಯ್ಯ ಇಡಿ ಅಧಿಕಾರಿಗಳ ಸೋಗಿನಲ್ಲಿ ಮನೆಗೆ ದಾಳಿ ಮಾಡಿ ಲಕ್ಷಾಂತರ ರೂಪಾಯಿ ಲೂಟಿ: ಕಠಿಣ… ಬೆಂಗಳೂರು: ಬೀದಿ ಬದಿ ವ್ಯಾಪಾರ ಮಾಡಲು ಅವಕಾಶವಿರುವ ರಸ್ತೆಗಳನ್ನು ಗುರುತಿಸಲು ಸೂಚನೆ

ಇತ್ತೀಚಿನ ಸುದ್ದಿ

ಚುನಾವಣೆ ದಣಿವು ಆರುವ ಮುನ್ನವೇ ಮತ್ತೆ ಸಮಾಜಮುಖಿ ಕಾರ್ಯಕ್ಕೆ ಫೀಲ್ಡಿಗಿಳಿದ ಪದ್ಮರಾಜ್: ದಿ.ಅನಿಲ್ ಪೂಜಾರಿ ಕುಟುಂಬಕ್ಕೆ ನೆರವಿನ ಹಸ್ತ

06/06/2024, 20:36

ಮಂಗಳೂರು(reporterkarnataka.com):ಲೋಕಸಭೆ ಚುನಾವಣೆಯಲ್ಲಿ ವೀರೋಚಿತ ಸೋಲಿನ ಬಳಿಕವೂ ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿಯಾಗಿದ್ದ ಪದ್ಮರಾಜ್ ಆರ್. ಪೂಜಾರಿ ಮತ್ತೆ ಸಮಾಜಮುಖಿ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ.
ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷರಾದ ಅವರು ಚುನಾವಣೆಯ ದಣಿವು ಆರುವ ಮುನ್ನವೇ ಮತ್ತೆ ಬಡವರ ಕಣ್ಣೀರೊರೆಸುವ ನಿಟ್ಟಿನಲ್ಲಿ ಫಿಲ್ಡಿಗಿಳಿದಿದ್ದಾರೆ.


ಕಷ್ಟದಲ್ಲಿರುವವರಿಗೆ ನೆರವಾಗಬೇಕೆನ್ನುವ ಮನದಾಸೆಯಿಂದ ಇತ್ತೀಚೆಗೆ ನಿಧನರಾದ ಕೊಡಿಪ್ಪಾಡಿ ಗ್ರಾಮದ ಬಟ್ರುಪ್ಪಾಡಿ ನಿವಾಸಿ, ಆಟೋ ಚಾಲಕ ದಿ.ಅನಿಲ್ ಪೂಜಾರಿಯವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಪದ್ಮರಾಜ್ ಸಾಂತ್ವನ ಹೇಳುವುದರ ಜತೆಗೆ, ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಗುರುಬೆಳದಿಂಗಳು ಫೌಂಡೇಶನ್ ಮೂಲಕ ಧನಸಹಾಯ ನೀಡಿ ನಾವು ನಿಮ್ಮೊಂದಿಗೆ ಇದ್ದೇವೆ ಎಂದು ಭರವಸೆಯ ಮಾತು ಹೇಳಿ ಮಾದರಿ ರಾಜಕಾರಣಿಯಾಗಿದ್ದಾರೆ. ಈ ಸಂದರ್ಭದಲ್ಲಿ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ.ರಾಜಾರಾಂ, ಹಿಂದುಳಿದ ವರ್ಗ ಬ್ಲಾಕ್ ಅಧ್ಯಕ್ಷ ಮೋಹನ್ ಗುರ್ಜಿನಡ್ಕ, ಕೊಡಿಪ್ಪಾಡಿ ವಲಯ ಅಧ್ಯಕ್ಷ ಕೇಶವಪೆಲತ್ತಡಿ, ಪ್ರವೀಣ್ ಶೆಟ್ಟಿ ಅಳಕೆಮಜಲು,ನೌಷಾದ್,ಯುವ ಕಾಂಗ್ರೆಸ್‌ ಅಧ್ಯಕ್ಷ ಶ್ರೀಪ್ರಸಾದ್‌ ಪಾಣಾಜೆ, ದಾಮೋದರ ಮುರ,ನಗರಸಭಾ ಸದಸ್ಯ ರಿಯಾಜ್ ಪರ್ಲಡ್ಕ, ಶರತ್ ಕೇಪುಳು, ಯಂಗ್ ಬ್ರಿಗೆಡ್ ರಾಜ್ಯಾಧ್ಯಕ್ಷ ಜುನೈದ್ ಪಿ.ಕೆ, ಮೆಸ್ಕಾಂ ಸಲಹಸ ಸಮಿತಿ ಸದಸ್ಯರಾದ ಚಂದ್ರಶೇಖರ ಕಲ್ಲಗುಡ್ಡೆ, ಚಂದ್ರ ಅರ್ಕ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು