12:20 AM Wednesday13 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಚುನಾವಣೆ ಮೂಲಕ ಜೆಡಿಎಸ್ ನೂತನ ರಾಜ್ಯಾಧ್ಯಕ್ಷರ ಆಯ್ಕೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

12/01/2025, 22:34

*ಬೆಂಗಳೂರಿನಲ್ಲಿ ಜೆಡಿಎಸ್ ಮಹತ್ವದ ಸಭೆ; ಹೆಚ್.ಡಿ.ದೇವೇಗೌಡರು ಭಾಗಿ*

*ಸಂಕ್ರಾಂತಿ ಬಳಿಕ ಜೆಡಿಎಸ್ ಇರಲ್ಲ ಎಂದಿದ್ದ ಎಂ.ಬಿ.ಪಾಟೀಲ್ ಗೆ ತಿರುಗೇಟು ಕೊಟ್ಟ HDK*

*ಅಹಿಂದಾ ಅಹಿಂದಾ ಎನ್ನುವ ಸಿಎಂ ಅಹಿಂದಾ ವರ್ಗಕ್ಕೆ ಏನು ಮಾಡಿದ್ದಾರೆ?*


ಬೆಂಗಳೂರು(reporterkarnataka.com):
ಜೆಡಿಎಸ್ ರಾಜ್ಯಾಧ್ಯಕ್ಷರ ಆಯ್ಕೆಯನ್ನು ಮುಂದಿನ ಏಪ್ರಿಲ್ ತಿಂಗಳ ಒಳಗೆ ಚುನಾವಣೆ ಮೂಲಕ ನಡೆಸುವ ನಿರ್ಧಾರವನ್ನು ಜೆಡಿಎಸ್ ಕೈಗೊಂಡಿದೆ ಎಂದು ಕೇಂದ್ರ ಸಚಿವರು ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಆದರೆ, ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕು ಎಂಬ ಬಗ್ಗೆ ಈ ಸಭೆಯಲ್ಲಿ ಚರ್ಚೆ ಆಗಿಲ್ಲ ಎಂದು ಸಚಿವರು ನುಡಿದರು.
ಜತೆಗೆ; ಪಕ್ಷದ ದ್ವೈವಾರ್ಷಿಕ ಸಾಂಸ್ಥಿಕ ಚುನಾವಣೆ, ಸದಸ್ಯತ್ವ ಅಭಿಯಾನವನ್ನು ಚುರುಕುಗೊಳಿಸುವುದು, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ತಯಾರಿ ಹಾಗೂ ಪಕ್ಷ ಸಂಘಟನೆ ವಿಷಯಗಳ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ಮಾಡಲಾಗಿದೆ ಎಂದು ಅವರು ಹೇಳಿದರು.
ಮುಖಂಡರ ಸಭೆಯ ನಂತರ ಸಚಿವರು ಮಾಧ್ಯಮಗಳ ಜತೆ ಮಾತನಾಡಿದರು.
ಮುಂದಿನ ಏಪ್ರಿಲ್ ಒಳಗೆ ರಾಜ್ಯದ ಘಟಕದ ಅಧ್ಯಕ್ಷ ಸ್ಥಾನವನ್ನು ಚುನಾವಣೆ ಮೂಲಕ ಆಯ್ಕೆ ಮಾಡುವ ತೀರ್ಮಾನ ಆಗಿದೆ. ಪಕ್ಷದ ಸಂಘಟನೆ ಬಗ್ಗೆ ಪಕ್ಷದ ನಾಯಕರಿಗೆ ಕಠಿಣವಾಗಿಯೇ ಹೇಳಿದ್ದೇನೆ. ಯಾರು ಪ್ರಾಮಾಣಿಕವಾಗಿ ಪಕ್ಷದ ಸಂಘಟನೆಗೆ ದುಡಿಯುತ್ತಾರೋ ಅಂಥವರಿಗೆ ಆದ್ಯತೆ ಕೊಡುತ್ತೇವೆ. ನಾನು ಕೂಡ ಪಕ್ಷ ಸಂಘಟನೆಯಲ್ಲಿ ನಿಯಮಿತವಾಗಿ ತೊಡಗಿಸಿಕೊಳ್ಳುತ್ತೇನೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾದ ಮೇಲೆ ರಾಜ್ಯದಲ್ಲಿ ನಾಯಕತ್ವ ಶೂನ್ಯ ಉಂಟಾಗಿದೆ ಎಂದು ಹೇಳಲಾಗುತ್ತಿದೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಚಿವರು; ವಾರದಲ್ಲಿ ನಾಲ್ಕು ದಿನ ನವದೆಹಲಿಯ ಸಚಿವಾಲಯದಲ್ಲಿ ಕೆಲಸ ಮಾಡುತ್ತೇನೆ. ಒಂದು ಅಥವಾ ಎರಡು ದಿನ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವಾಲಯದ ಕಾರ್ಖಾನೆಗಳಿಗೆ ಭೇಟಿ ಕೊಡುತ್ತೇನೆ. ಉಳಿದ ಸಮಯವನ್ನು ಪಕ್ಷದ ಕೆಲಸಕ್ಕೆ ಮೀಸಲಿಡುತ್ತೇನೆ. ಪಕ್ಷದ ಸಂಘಟನೆ, ಸಭೆ, ಪ್ರವಾಸ, ಮಂಡ್ಯ ಕ್ಷೇತ್ರಕ್ಕೆ ಭೇಟಿ ಇತ್ಯಾದಿಗಳ ಬಗ್ಗೆ ವೇಳಾಪಟ್ಟಿ ಸಿದ್ಧ ಮಾಡಿಕೊಂಡಿದ್ದೇನೆ. ಇನ್ನು ಮುಂದೆ ಅದರಂತೆಯೇ ಕೆಲಸ ಮಾಡುತ್ತೇನೆ ಎಂದು ಸಚಿವರು ಹೇಳಿದರು.
ಸಾರ್ವಜನಿಕ ಉದ್ಯಮಿಗಳು ಅಭದಾಯಕವಲ್ಲ ಎನ್ನುವ ಮಾತಿದೆ. ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಆ ಕಾರ್ಖಾನೆಗಳು ಲಾಭ ಮಾಡಬಲ್ಲವು ಎಂಬುದನ್ನು ತೋರಿಸುತ್ತೇನೆ ಎಂದು ಕುಮಾರಸ್ವಾಮಿ ಅವರು ಒತ್ತಿ ಹೇಳಿದರು.
*ಸಚಿವ ಎಂ.ಬಿ.ಪಾಟೀಲ್ ವಿರುದ್ಧ ಕಿಡಿ:*
ಕಾಂಗ್ರೆಸ್ ಪಕ್ಷ ಜೆಡಿಎಸ್ ಶಾಸಕರನ್ನು ಆಪರೇಷನ್ ಮಾಡುತ್ತಿದೆ, ಜೆಡಿಎಸ್ ನಲ್ಲಿ ಗಡಗಡ, ಸಂಕ್ರಾಂತಿ ನಂತರ ಜೆಡಿಎಸ್ ಇರುವುದೇ ಇಲ್ಲ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಸಚಿವರೇ.. ಮೊದಲು ನಿಮ್ಮ ಪಕ್ಷದ ಕಥೆ ನೋಡಿಕೊಳ್ಳಿ. ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ಕಾಂಗ್ರೆಸನ್ನು ದೂರ ಇಟ್ಟು ಏಕಾಂಗಿಯಾಗಿ ಚುನಾವಣೆ ಎದುರಿಸುತ್ತಿದೆ. ಇಂಡಿ ಕೂಟವನ್ನು ವಿಸರ್ಜನೆ ಮಾಡಿ ಎಂದು ಓಮರ್ ಅಬ್ದುಲ್ಲಾ ಹೇಳುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ನಾವು ಏಕಾಂಗಿಯಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಎದುರಿಸುತ್ತೇವೆ ಎಂದು ಶಿವಸೇನೆ ಹೇಳುತ್ತಿದೆ. ಅಲ್ಲೆಲ್ಲಾ ಎಲ್ಲಿದೆ ಕಾಂಗ್ರೆಸ್? ನಿಮ್ಮ ಪಕ್ಷದ ಒಳಗೆ ಏನಾಗುತ್ತಿದೆ ಎನ್ನುವುದನ್ನು ಮೊದಲು ನೋಡಿಕೊಳ್ಳಿ. ಪಾಟೀಲರೇ.. ನಿಮ್ಮ ಪಕ್ಷದ ತಟ್ಟೆಯಲ್ಲಿಯೇ ಹೆಗ್ಗಣ ಸತ್ತು ಬಿದ್ದಿದೆ ಎಂದು ಕುಮಾರಸ್ವಾಮಿ ಅವರು ಟಾಂಗ್ ಕೊಟ್ಟರು.
ನಮಗೆ, ನಮ್ಮ ಕುಟುಂಬಕ್ಕೆ ಸೋಲು ಗೆಲುವು ಹೊಸದೇನಲ್ಲ. ಸೋತಾಗ ಕುಗ್ಗಿಲ್ಲ, ಗೆದ್ದಾಗ ಹಿಗ್ಗಿಲ್ಲ ಎಂದ ಅವರು; ನಮ್ಮ ಪಕ್ಷ ಗಟ್ಟಿಯಾಗಿದೆ. ಅದನ್ನು ಸಹಿಸುವುದು ಕಾಂಗ್ರೆಸ್ ಪಕ್ಷಕ್ಕೆ ಆಗುತ್ತಿಲ್ಲ. ಅದಕ್ಕೆ ಇಷ್ಟೆಲ್ಲಾ ನಾಟಕ ಆಡುತ್ತಿದೆ. ಅದರ ಆಟ ನಡೆಯುವುದಿಲ್ಲ ಎಂದು ಸಚಿವರು ಎಚ್ಚರಿಕೆ ಕೊಟ್ಟರು.
*ಜಾತಿಗಣತಿ; ಸಿಎಂ ವಿರುದ್ಧ HDK ಕೆಂಡ*
ಕಾಂತರಾಜ್ ವರದಿ ಸರ್ಕಾರದ ಕೈ ಸೇರಿ ಎಷ್ಟು ವರ್ಷವಾಯಿತು? ಜಾತಿಗಳ ಸಮಸ್ಯಗಳಿಗೆ ಏನು ಪರಿಹಾರ ಕೊಟ್ಟಿದ್ದಾರೆ ಇವರು. ಏಳು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇದ್ದಾರಲ್ಲವೇ? ಅಹಿಂದಾ ನಾಯಕರು, ಬೇರೆ ಸಮಾಜಗಳ ಮಾತಿರಲಿ, ಅಹಿಂದಾ ವರ್ಗಕ್ಕೆ ಅವರು ಏನು ಮಾಡಿದ್ದಾರೆ. ಇಷ್ಟು ದಿನ ಅಧಿಕಾರದಲ್ಲಿ ಇದ್ದರೂ ಇವರು ಇನ್ನೂ ಅಹಿಂದಾ ಅಹಿಂದಾ ಎಂದು ಹೇಳುತ್ತಿದ್ದಾರೆ. ಕೇವಲ ರಾಜಕೀಯಕ್ಕಾಗಿ ಸಿದ್ದರಾಮಯ್ಯ ಅವರು ಈ ಸಮುದಾಯವನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.
ರಾಹುಲ್ ಗಾಂಧಿ ಹೋದ ಕಡೆ, ಬಂದ ಕಡೆ ಜಾತಿಗಣತಿ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಕೇಂದ್ರ ಸರಕಾರವೇ ಜಾತಿ ಗಣತಿಗೆ ತೀರ್ಮಾನ ಮಾಡಿದೆ. ಹೀಗಿದ್ದ ಮೇಲೆ ರಾಜ್ಯ ಸರಕಾರ ಕೇಂದ್ರದ ವರದಿ ಬರುವ ತನಕ ಕಾಯಲಿ. ರಾಜ್ಯದಲ್ಲಿ ಈಗಾಗಲೇ ಆಗಿರುವ ಜಾತಿಗಣತಿ ವರದಿ ದೋಷಪೂರಿತವಾಗಿದೆ. ಗಣತಿ ಆಗಿ ಹತ್ತು ವರ್ಷಗಳು ಮೀರಿದೆ. ರಾಜ್ಯದಲ್ಲಿ ಹಣಕ್ಕೆ ಬರವಿಲ್ಲ. ರಾಜ್ಯ ಸರಕಾರವೇ ಹೊಸದಾಗಿ ಇನ್ನೊಂದು ಜಾತಿ ಜನಗಣತಿ ಮಾಡಲಿ. ಜನರಿಂದ ಹಣವನ್ನು ಯಥೇಚ್ಛವಾಗಿ ಸುಲಿಗೆ ಮಾಡುತ್ತಿದ್ದೀರಿ. ಗಂಜಿ ಕೇಂದ್ರಗಳಿಗಾಗಿ ಬಾಯಿ ಬಿಟ್ಟುಕೊಂಡು ಕಾಯುತ್ತಾ ಕೂತಿರುವರು ಕೆಲವರು ಇರುತ್ತಾರಲ್ಲವೇ.. ಅವರನ್ನೇ ಸೇರಿಸಿ ಇನ್ನೊಂದು ಇನ್ನೊಂದು ಸಮಿತಿ ಮಾಡಿ ಜಾತಿಗಣತಿ ಮಾಡಿ ಎಂದು ಸಿಎಂಗೆ ಟಾಂಗ್ ಕೊಟ್ಟರು ಕುಮಾರಸ್ವಾಮಿ ಅವರು.

ಇತ್ತೀಚಿನ ಸುದ್ದಿ

ಜಾಹೀರಾತು