7:46 AM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಚುನಾವಣೆ ನೀತಿ ಸಂಹಿತೆ: ಚಳ್ಳಕೆರೆ ಚಕ್ ಪೋಸ್ಟ್ ಬಳಿ ಬಸ್ಸಿನಲ್ಲಿ ಸಾಗಿಸುತ್ತಿದ್ದ 39.15 ಲಕ್ಷ ರೂ. ವಶ

21/03/2024, 23:07

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪೊಲೀಸರು ಚಿತ್ರದುರ್ಗದ ಚಳ್ಳಕೆರೆ ಬಳಿ 39.15 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ.
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಚಳ್ಳಕೆರೆಯ ಕೆಇಬಿ ಚಕ್ ಪೋಸ್ಟ್ ಬಳಿ ಬಸ್ ನಲ್ಲಿ‌ ಸಾಗಿಸುತ್ತಿದ್ದ 1.15 ಲಕ್ಷ ರೂಪಾಯಿಯನ್ನು ಪೊಲೀಸರು ಪರಿಶೀಲಿಸಿ ವಶಕ್ಕೆ ಪಡೆದಿದ್ದಾರೆ.
ಹಣ ಸಾಗಿಸುತ್ತಿದ್ದ ವ್ಯಕ್ತಿ ಅಕ್ಕಿ ಮಿಲ್ ನಲ್ಲಿ ಕೆಲಸ ಮಾಡುತ್ತಿದ್ದ ಗೋಪಿನಾಥ್ ಎಂದು ತಿಳಿದು ಬಂದಿದೆ. ಈತ ಚಳ್ಳಕೆರೆಯಿಂದ ಚಿತ್ರದುರ್ಗಕ್ಕೆ ಬರುತ್ತಿದ್ದಾಗ ಬಸ್ ನಿಲ್ಲಿಸಿ ತಪಾಸಣೆ ನಡೆಸಿದಾಗ ಪೊಲೀಸರು ಹಣ ವಶಪಡಿಸಿಕೊಂಡಿದ್ದಾರೆ. ಚಳ್ಳಕೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ ನಾಯಕನಹಟ್ಟಿ ಕ್ರಾಸ್ ಬಳಿ ಇರುವ ಚಕ್ ಪೋಸ್ಟ್ ನ ಪೊಲೀಸರು ಪರಿಶೀಲಿಸಿ 38 ಲಕ್ಷ ಹಣವನ್ನು ಜಪ್ತಿ ಮಾಡಿಕೊಂಡಿದ್ದಾರೆ. ಹಣವು ಚಳ್ಳಕೆರೆಯ ಬ್ಯಾಂಕ್ ಆಫ್ ಬರೋಡಾದಿಂದ ನಗದೀಕರಿಸಲಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಘದ ಯೋಜನೆಗಾಗಿ ಗ್ರಾಮಸ್ಥರು ಬ್ಯಾಂಕಿನಿಂದ ಬಿಡಿಸಿಕೊಂಡು ಬರುವಾಗ ಚಕ್ ಪೋಸ್ಟ್ ಸಿಬ್ಬಂದಿಗಳು ವಶಕ್ಕೆ ಪಡೆದಿದ್ದು, ತಹಶೀಲ್ದಾರ್ ಮತ್ತು ಆದಾಯ ತೆರಿಗೆ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು