10:27 PM Sunday30 - March 2025
ಬ್ರೇಕಿಂಗ್ ನ್ಯೂಸ್
PDO | ಮಾದರಿ ಗ್ರಾಮ ಪಂಚಾಯತಿ ನಿರ್ಮಾಣದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ… Bangalore | ಸಬಲೀಕರಣ ಜತೆಗೆ ಮಹಿಳಾ ಸುರಕ್ಷತೆ: ‘ಬಿ.ಸೇಫ್’ ಸಮೀಕ್ಷಾ ವರದಿ ಬಿಡುಗಡೆ Bangalore | ಬೇಡಿಕೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಬ್ಯಾಂಕ್ ನಿವೃತ್ತರ ಒಕ್ಕೂಟಗಳ… MSIL | ಸರಕಾರಿ, ಖಾಸಗಿ ಉತ್ಪನ್ನಗಳ ಮಾರಾಟ, ಖರೀದಿಗೆ ನೆರವಾಗಲಿದೆ ಇ ಪೋರ್ಟಲ್‌ Chikkamagaluru | ಬಾಲ ಹಿಡಿದು ಎತ್ತಿದ ಉರಗ ತಜ್ಞರು: ನುಂಗಿದ್ದ 10 ಮೊಟ್ಟೆಗಳನ್ನು… Speaker Talking | ವಿಧಾನ ಸೌಧಕ್ಕೆ ವರ್ಣರಂಜಿತ ದೀಪಾಲಂಕಾರ; ಯಾವಾಗ ಉದ್ಘಾಟನೆ?; ಸ್ಪೀಕರ್… ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ: ಹಾಲು ದರ ಏರಿಕೆಗೆ ಕೇಂದ್ರ… ಕೋಲಾರ ಜಿಲ್ಲೆಯಲ್ಲಿ ಸುಮಾರು 10 ಸಾವಿರ ಎಕರೆ ಅರಣ್ಯ ಭೂಮಿ ಒತ್ತುವರಿ; ತೇರಹಳ್ಳಿ… Protest in Delhi | ‘ಉದ್ಯೋಗ ಕೊಡಿ ಅಥವಾ ಅಧಿಕಾರ ತ್ಯಜಿಸಿ’: ಕೇಂದ್ರ… Medical College | ಗದಗ ಮೆಡಿಕಲ್ ಕಾಲೇಜಿಗೆ ಕೆ.ಎಚ್. ಪಾಟೀಲ್ ಹೆಸರು: ರಾಜ್ಯ…

ಇತ್ತೀಚಿನ ಸುದ್ದಿ

ಗುಜರಾತಿನಿಂದ ಆರಂಭಗೊಂಡ ಸಿಐಎಸ್‍ಎಫ್ ಕೋಸ್ಟಲ್ ಸೈಕ್ಲೋಥಾನ್: ಕಡಲನಗರಿ ಮಂಗಳೂರಿನಲ್ಲಿ ಭವ್ಯ ಸ್ವಾಗತ, ಬೀಳ್ಕೊಡುಗೆ

27/03/2025, 20:40

ಮಂಗಳೂರು(reporterkarnataka.com): ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ವತಿಯಿಂದ ಭಾರತದ ಪೂರ್ವ ಮತ್ತು ಪಶ್ಚಿಮ ಕರಾವಳಿ ಉದ್ದಕ್ಕೂ ಸಂಚರಿಸುತ್ತಿರುವ ಸೈಕಲ್ ರ್ಯಾಲಿ ‘ಸಿಐಎಸ್‍ಎಫ್ ಕೋಸ್ಟಲ್ ಸೈಕ್ಲೋಥಾನ್-2025’ ಬುಧವಾರ ಸಂಜೆ ಮಂಗಳೂರಿಗೆ ಆಗಮಿಸಿದಾಗ ಆಕರ್ಷಕ ಸ್ವಾಗತ ನೀಡಲಾಯಿತು.


ಪಣಂಬೂರು ಬೀಚ್‍ನಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರ ನೇತೃತ್ವದಲ್ಲಿ ಸಿಐಎಸ್‍ಎಫ್ ಯೋಧರಿಗೆ ಸ್ವಾಗತಿಸಲಾಯಿತು. ಸಿಐಎಸ್‍ಎಫ್ ಕೋಸ್ಟಲ್ ಸೈಕ್ಲೋಥಾನ್-2025 ಅನ್ನು ಮಾರ್ಚ್ 7ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅವರು ಗುಜರಾತ್‍ನಲ್ಲಿ ಚಾಲನೆ ನೀಡಿದ್ದರು. ದೇಶದ ಪಶ್ಚಿಮ ತೀರದಲ್ಲಿ ಗುಜರಾತ್‍ನಿಂದ ಹಾಗೂ ಪೂರ್ವ ತೀರದಲ್ಲಿ ಪಶ್ಚಿಮ ಬಂಗಾಳದಿಂದ ಕನ್ಯಾಕುಮಾರಿವರೆಗೆ ಸೈಕಲ್ ರ್ಯಾಲಿ ಸಾಗಲಿದೆ. ಈಸ್ಟ್ ಕೋಸ್ಟ್ ತಂಡವು ಪಶ್ಚಿಮ ಬಂಗಾಳದ ಬಖಾಲಿ ಬೀಚ್‍ನಿಂದ 2778 ಕಿಲೋಮೀಟರ್ ಹಾಗೂ ವೆಸ್ಟ್ ಕೋಸ್ಟ್ ತಂಡವು ಲಖ್ಪತ್ ಫೋರ್ಟ್ (ಗುಜರಾತ್) ನಿಂದ 3775 ಕಿಲೋಮೀಟರ್ ದೂರವನ್ನು ಕ್ರಮಿಸಲಿದೆ.
ಈ ಸೈಕ್ಲೋಥಾನ್ ಭಾರತದ ಸಂಪೂರ್ಣ ಕರಾವಳಿ ಒಟ್ಟು 6,553 ಕಿ.ಮೀ. ಮಾರ್ಗದಲ್ಲಿ ಶ್ರೀಮಂತ ಸಾಂಸ್ಕøತಿಕ ಮತ್ತು ಪರಂಪರೆಯ ವೈವಿಧ್ಯತೆಯನ್ನು ಪ್ರದರ್ಶಿಸುವ 11 ರಾಜ್ಯಗಳಲ್ಲಿ ಸಾಗಲಿವೆ.
ಬುಧವಾರ ಸಂಜೆ ಸೈಕಲ್ ರ್ಯಾಲಿಯು ಮಂಗಳೂರು ನಗರಕ್ಕೆ ಆಗಮಿಸಿತು. ಸೈಕಲ್‍ನಲ್ಲಿ ಆಗಮಿಸಿದ ಯೋಧರನ್ನು ಸ್ವಾಗತಿಸಲು ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಹುಲಿವೇಷ ನೃತ್ಯ, ಚಂಡೆ ವಾದ್ಯ ಮೇಳ, ಭರತನಾಟ್ಯ, ಜನಪದ ನೃತ್ಯಗಳು ಸೇರಿದಂತೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಯೋಧರನ್ನು ಆಕರ್ಷಿಸಿದವು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್, ಪೊಲೀಸ್ ಅಧೀಕ್ಷಕ ಯತೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಸಿಐಎಸ್‍ಎಫ್ ಡಿಐಜಿ ಆರ್. ಪೊನ್ನಿ, ಕೋಸ್ಟ್‍ಗಾರ್ಡ್ ಡಿಐಜಿ ಮುಹಮ್ಮದ್ ಶಹನವಾಝ್, ಸಿಐಎಸ್‍ಎಫ್ ಅಧಿಕಾರಿಗಳಾದ ವಿ.ಎಂ. ಜೋಷಿ, ಆರ್.ಪಿ. ಪಾಠಕ್, ಅನೂಪ್ ಸಿನ್ಹಾ ಮತ್ತಿತರರು ಉಪಸ್ಥಿತರಿದ್ದರು.
ಗುರುವಾರ ಬೆಳಿಗ್ಗೆ 6:30ಕ್ಕೆ ಸಿಐಎಸ್‍ಎಫ್ ಕೋಸ್ಟಲ್ ಸೈಕ್ಲೋಥಾನ್ ಪಣಂಬೂರು ಬೀಚ್‍ನಿಂದ ಕನ್ಯಾಕುಮಾರಿ ಕಡೆಗೆ ತಮ್ಮ ಪ್ರಯಾಣವನ್ನು ಮುಂದುವರಿಸಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು, ಪೊಲೀಸ್ ಕಮೀಷನರ್ ಉಪಸ್ಥಿತರಿದ್ದು, ರ್ಯಾಲಿಯನ್ನು ಬೀಳ್ಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು