1:26 PM Saturday4 - October 2025
ಬ್ರೇಕಿಂಗ್ ನ್ಯೂಸ್
Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ…

ಇತ್ತೀಚಿನ ಸುದ್ದಿ

ಕೋಟೆಕಾರ್ ಬೀದಿಬದಿ ವ್ಯಾಪಾರಸ್ಥರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಸಿಐಟಿಯು ಒತ್ತಾಯ

05/04/2025, 09:39

ಮಂಗಳೂರು(reporterkarnataka.com):ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿರುವ ನೂರಾರು ಸಂಖ್ಯೆಯ ಬೀದಿಬದಿ ವ್ಯಾಪಾರಸ್ಥರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿಕೊಡಬೇಕೆಂದು CITU ಸಂಯೋಜಿತ ದ.ಕ.ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘವು ಕೋಟೆಕಾರ್ ಪಟ್ಟಣ ಪಂಚಾಯತ್ ಆಡಳಿತವನ್ನು ಒತ್ತಾಯಿಸಿದೆ.


ಈ ಬಗ್ಗೆ ಸಂಘದ ಉನ್ನತ ಮಟ್ಟದ ನಿಯೋಗವೊಂದು ಪಂಚಾಯತ್ ನ ಮುಖ್ಯಾಧಿಕಾರಿಗಳನ್ನು ಭೇಟಿಯಾಗಿ ಮನವಿಯನ್ನು ಅರ್ಪಿಸಿತು.
ಕೋಟೆಕಾರ್ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನೂರಾರು ಸಂಖ್ಯೆಯ ಬೀದಿಬದಿ ವ್ಯಾಪಾರಸ್ಥರು ತಮ್ಮ‌ಪಾಡಿಗೆ ಬದುಕು ಕಟ್ಟಿಕೊಂಡು ದಿನಕಳೆಯುತ್ತಿದ್ದಾರೆ. ಅದರಲ್ಲಿ ಕೋಟೆಕಾರ್ ಬೀರಿ ಜಂಕ್ಷನ್ ಬಳಿ ಕಳೆದ ಹಲವಾರು ವರ್ಷಗಳಿಂದ ದೈನಂದಿನ ಬದುಕಿಗಾಗಿ ಬಡ ಬೀದಿಬದಿ ವ್ಯಾಪಾರಸ್ಥರು ವ್ಯಾಪಾರ ಮಾಡಿಕೊಂಡು ಬರುತ್ತಿದ್ದು, ಅವರಿಗೆ ಕೋಟೆಕಾರ್ ಪಟ್ಟಣ ಪಂಚಾಯತ್ ವತಿಯಿಂದ ಬೀದಿಬದಿ ವ್ಯಾಪಾರಸ್ಥರ ಸಂರಕ್ಷಣೆ ಮತ್ತು ನಿಯಂತ್ರಣ ಕಾಯಿದೆ 2014 ಮತ್ತು ಕರ್ನಾಟಕ ಬೀದಿ ವ್ಯಾಪಾರ ಅಧಿನಿಯಮದಂತೆ ಐಡಿ ಕಾರ್ಡ್ ಮತ್ತು ಪ್ರಮಾಣ ಪತ್ರ ನೀಡಲಾಗಿರುತ್ತದೆ.ಆದರೆ ಅವರು ವ್ಯಾಪಾರ ಮಾಡುವ ಪಕ್ಕದಲ್ಲೇ ನೂತನ ಕಟ್ಟಡವೊಂದು ಉದ್ಘಾಟನೆಗೊಂಡಿದ್ದು, ಇದರಿಂದಾಗಿ ಬಡ ವ್ಯಾಪಾರಸ್ಥರಿಗೆ ವ್ಯಾಪಾರ ಮಾಡದಂತೆ ತಡೆ ಒಡ್ಡಲಾಗಿದೆ. ನೂತನ ಕಟ್ಟಡದ ನೆಲಮಾಳಿಗೆಯಲ್ಲಿ ಬಾಡಿಗೆ ಆಧಾರಿತ ವ್ಯಾಪಾರ ಮಾಡಲೂ ಕೂಡ ಅಸಾಧ್ಯವಾಗಿದೆ ಎಂದು ಸಂಘವು ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಬಡ ಬೀದಿಬದಿ ವ್ಯಾಪಾರಸ್ಥರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಸ್ಥಳೀಯ ಪಟ್ಟಣ ಪಂಚಾಯತ್ ಸೂಕ್ತ ವ್ಯವಸ್ಥೆ ಮಾಡಿಕೊಡಬೇಕು, ಕೋಟೆಕಾರ್ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿರುವ ಎಲ್ಲಾ ಬೀದಿಬದಿ ವ್ಯಾಪಾರಸ್ಥರ ಸರ್ವೇ ನಡೆಸಿ ಪಟ್ಟಿ ರೆಡಿ ಮಾಡಬೇಕು,ಅವರೆಲ್ಲರಿಗೂ ಸರಕಾರದ ಗುರುತುಚೀಟಿ, ಸಾಲ ಸೌಲಭ್ಯ ಸೇರಿದಂತೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಕೊಡಬೇಕೆಂದು ಸಂಘವು ಪಟ್ಟಣ ಪಂಚಾಯತ್ ಆಡಳಿತವನ್ನು ಆಗ್ರಹಿಸಿದೆ.
ನಿಯೋಗದಲ್ಲಿ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷರಾದ ಸುನಿಲ್ ಕುಮಾರ್ ಬಜಾಲ್, ಸಂಘದ ತಲಪಾಡಿ ವಲಯ ಕಾರ್ಯದರ್ಶಿ ವಿನಾಯಕ ಶೆಣೈ,ಸಂಘದ ತಲಪಾಡಿ ವಲಯ ಮುಖಂಡರಾದ ಕಲಂದರ್, ಸಲೀಂ, ನವಾಜ್, ಮಹಮ್ಮದ್ ಹಸನ್, ರವಿರಾಜ್, ಬಶೀರ್, ಇಬ್ರಾಹಿಂ, ಹುಸೈನಾರ್, ಸುಬ್ರಹ್ಮಣ್ಯ, ಶಂಭು, ಇಸಾಕ್, ಶಾಂತಿ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು