ಇತ್ತೀಚಿನ ಸುದ್ದಿ
ಸಿಟಿ ಬಸ್ ಕಂಡೆಕ್ಟರ್ ನಿಂದ ಸಾರ್ವಜನಿಕವಾಗಿ ಅವಾಚ್ಯ ನಿಂದನೆ: ವಕೀಲೆಯಿಂದ ದೂರು ದಾಖಲು
10/10/2023, 14:31
ಮಂಗಳೂರು(reporterkarnataka.com): ಸಾರ್ವಜನಿಕರ ಮುಂದೆ ಅವಾಚ್ಯ ಶಬ್ದಗಳಿಂದ ಬಸ್ ನಿರ್ವಾಹಕ ನಿಂದಿಸಿದ್ದಾನೆ ಎಂದು ವಕೀಲೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದು, ಕೇಸು ದಾಖಲಾಗಿದೆ.
ವೃತ್ತಿಯಲ್ಲಿ ವಕೀಲೆಯಾಗಿರುವ ಮಹಿಳೆಯೊಬ್ಬರು ಪಿವಿಎಸ್ ಸರ್ಕಲ್ ಬಳಿ ಬೋಂದೆಲ್ ನಿಂದ ಸ್ಟೆಟ್ ಬ್ಯಾಂಕ್ ಗೆ ತೆರಳು ಆಶೆಲ್ ರೂಟ್ ನಂಬರ್ 19 ಬಸ್ ನ್ನು ಹತ್ತಲು ಹೋಗಿದ್ದಾರೆ. ಈ ವೇಳೆ ಬಸ್ ಡ್ರೈವರ್ ಏಕಾಏಕಿ ಬಸ್ ನ್ನು ಚಲಾಯಿಸಿದ್ದು, ಮಹಿಳೆ ರಸ್ತೆಗೆ ಬೀಳುವ ವೇಳೆ ಬಸ್ ನ ನಿರ್ವಾಹಕ ಮಹಿಳೆಯ ಕೈಯನ್ನು ಹಿಡಿದು ಎಳೆದು ಬಸ್ ನಲ್ಲಿದ್ದ ಸಾರ್ವಜನಿಕರ ಎದುರೇ ” ನೀವು ಮುಸ್ಲಿಂ ಹೆಂಗಸರಿಗೆ ತುಂಬಾ ಅಹಂಕಾರ ಬೇಕಾದರೆ ನಮ್ಮ ಬಸ್ಸಲ್ಲಿ ಬರಬೇಕು ಇಲ್ಲದಿದ್ದರೆ ಇಳಿಯಬೇಕು ಎಂದು ” ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ಕುರಿತಂತೆ ವಕೀಲೆ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ಬಗ್ಗೆ ಬಸ್ ಚಾಲಕ ಮತ್ತು ಕಂಡೆಕ್ಟರ್ ವಿರುದ್ಧ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.