1:27 AM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಸಿಕೆಪಿಯಲ್ಲಿ ಬೆಂಗಳೂರು ಆರ್ಟ್ಸ್‌ ಅಂಡ್‌ ಕ್ರಾಪ್ಟ್ಸ್‌ ಮೇಳಕ್ಕೆ ಚಾಲನೆ: ಹ್ಯಾಂಡ್ ಮೇಡ್ ಜ್ಯುವೆಲ್ಲರಿ ಸಹಿತ 80ಕ್ಕೂ ಅಧಿಕ ಮಳಿಗೆ

18/02/2022, 21:34

ಬೆಂಗಳೂರು(reporterkarnataka.com): ನಗರದ ಚಿತ್ರಕಲಾ ಪರಿಷತ್ತಿಗೆ ಮತ್ತೆ ಬಂದಿವೆ ಬಗೆ‌ ಬಗೆಯ ಕರಕುಶಲ ವಸ್ತುಗಳು. ವೈವಿಧ್ಯಮಯ ಸೀರೆಗಳು, ಗೃಹಾಲಂಕಾರಿಕ ವಸ್ತುಗಳು, ಚಪ್ಪಲಿ, ಬ್ಯಾಗ್ ಇತ್ಯಾದಿಗಳು ಬೆಂಗಳೂರು ಆರ್ಟ್ಸ್‌ ಆಂಡ್‌ ಕ್ರಾಫ್ಟ್ಸ್‌ ಮೇಳದಲ್ಲಿ ಗ್ರಾಹಕರನ್ನು ಸೆಳೆಯುತ್ತಿವೆ.


ನಟಿಯರು ಮತ್ತು ರೂಪದರ್ಶಿಗಳಾದ ಚಂದನಾ ರಾಘವೇಂದ್ರ ಹಾಗೂ ಅಶ್ವಿನಿ ಅವರು ಶುಕ್ರವಾರ ಮೇಳಕ್ಕೆ ಚಾಲನೆ ನೀಡಿದರು.


ಚಂದನಾ ರಾಘವೇಂದ್ರ ಮಾತನಾಡಿ, ಬೆಂಗಳೂರು ಆರ್ಟ್ ಆಂಡ್ ಕ್ರಾಫ್ಟ್ ಮೇಳದಲ್ಲಿ ನಾನಾ ರೀತಿಯ ಗೃಹಾಲಂಕಾರಿಕ ವಸ್ತುಗಳು, ಕೃತಕ ಆಭರಣಗಳು, ಬೆಡ್ ಸ್ಪ್ರೆಡ್ ಗಳು ಮತ್ತಿತರ ವಸ್ತುಗಳು ಸಿಗಲಿವೆ. 

ಇಲ್ಲಿ ಮಧ್ಯವರ್ತಿಗಳ ಹಾವಳಿಯಿಲ್ಲದೆ ಕಲಾವಿದರಿಂದ ನೇರವಾಗಿ ಗ್ರಾಹಕರಿಗೆ ಗುಣಮಟ್ಟದ ವಸ್ತುಗಳು ಸಿಗಲಿವೆ. 

ಫೆ. 27 ರವರೆಗೆ ಮೇಳ ನಡೆಯಲಿದೆ. ಹೆಚ್ಚಿನ  ಸಂಖ್ಯೆಯಲ್ಲಿ ಗ್ರಾಹಕರು ಬಂದು ತಮಗೆ ಬೇಕಾದ ವಸ್ತುಗಳನ್ನು ಖರೀದಿಸುವ ಮೂಲಕ ಕಲಾವಿದರನ್ನು ಪ್ರೋತ್ಸಾಹಿಸೋಣ  ಎಂದರು. 

ಕಿರುತೆರೆ ನಟಿ ಅಶ್ವಿನಿ ಮಾತನಾಡಿ, ಮೇಳ ನೋಡಲು ತುಂಬಾ ಖುಷಿ ಆಗ್ತಿದೆ. ಬಗೆ ಬಗೆಯ ಸೀರೆಗಳು, ಆಕರ್ಷಕ ಕರಕುಶಲ ವಸ್ತುಗಳು, ಹ್ಯಾಂಡ್ ಮೇಡ್ ಜ್ಯುವೆಲ್ಲರಿಗಳು ಹೀಗೆ ಎಲ್ಲವೂ ಒಂದಕ್ಕಿಂತ ಒಂದು ಭಿನ್ನವಾಗಿದ್ದು, ಖರೀದಿಸಲು ಯೋಗ್ಯವಾಗಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮೇಳದಲ್ಲಿ 80ಕ್ಕೂ ಹೆಚ್ಚು ಅಂಗಡಿಗಳಿದ್ದು ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕಲಾವಿದರ ಕಲಾಕೃತಿಗಳು ಹಾಗೂ ಉತ್ಪನ್ನಗಳು ನೇರವಾಗಿ ಗ್ರಾಹಕರಿಗೆ ತಲುಪಲಿವೆ.  ತರಹೇವಾರಿ ಕರಕುಶಲ ವಸ್ತುಗಳು, ಆಟಿಕೆಗಳು, ಉಡುಪುಗಳು ಸೇರಿದಂತೆ ರಾಜಧಾನಿ ಬೆಂಗಳೂರಿನ ಜನತೆಗೆ ಮುದ ನೀಡುವಂತಹ ಉತ್ಪನ್ನಗಳು ಒಂದೇ ಸೂರಿನಡಿ ದೊರೆಯುತ್ತವೆ. ಮನೆಯನ್ನು ಅಲಂಕಾರ ಮಾಡುವ ಉತ್ಪನ್ನಗಳು, ಹ್ಯಾಂಡ್‍ಲೂಂಗಳು, ಕರಕುಶಲ ವಸ್ತುಗಳು, ಬಟ್ಟೆ, ಮರದ ಆಟಿಕೆಗಳು, ಹೆಂಗಳೆಯರ ಆಕರ್ಷಣೆಗೆಂದು ಆಭರಣಗಳು, ಬೆಡ್ ಲೈನೆನ್, ಕಲಾಕೃತಿಗಳು, ಪೀಠೋಪಕರಣಗಳು, ಮ್ಯಾಟ್‍ಗಳು, ಪಿಂಗಾಣಿ ವಸ್ತುಗಳು ಸೇರಿದಂತೆ ನೂರಾರು ಬಗೆಯ ಉತ್ಪನ್ನಗಳು ಈ ಪ್ರದರ್ಶನದಲ್ಲಿರಲಿವೆ.

ಇತ್ತೀಚಿನ ಸುದ್ದಿ

ಜಾಹೀರಾತು