1:25 PM Friday5 - December 2025
ಬ್ರೇಕಿಂಗ್ ನ್ಯೂಸ್
New Delhi | ಬೆಳ್ಳಿ ವಸ್ತು, ಆಭರಣಗಳಿಗಿನ್ನು BIS ಹಾಲ್‌ಮಾರ್ಕ್‌, HUID ಕಡ್ಡಾಯ ರಾಜ್ಯ ಸರಕಾರ ಅನ್ನದಾತ ರೈತನ ಬಗ್ಗೆ ಕಾಳಜಿ ವಹಿಸುತ್ತಿಲ್ಲ: ಮಾಜಿ ಗೃಹ ಸಚಿವ… ವಿಶೇಷ ಚೇತನರು ಇನ್ನು ವಿಮಾನವೇರುವುದು ಸುಲಭ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಮೊಬಿಲಿಟಿ… ಕೊಡಗಿನಲ್ಲಿ ಮುಂದುವರಿದ ಆನೆ- ಮಾನವ ಸಂಘರ್ಷ: ಕುಶಾಲನಗರ ಬಳಿ ರೈಲ್ವೆ ಬ್ಯಾರಿಕೇಡ್ ಮುರಿದ… ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ

ಇತ್ತೀಚಿನ ಸುದ್ದಿ

ಕಲರ್ಸ್ ಕನ್ನಡ ಚಾನೆಲ್ ನಲ್ಲಿ ಮತ್ತೆರೆಡು ಹೊಸ ಧಾರಾವಾಹಿಗಳು: ‘ವಧು’ ಮತ್ತು ‘ಯಜಮಾನ’ ಆರಂಭ

29/01/2025, 16:21

ಮಂಗಳೂರು(reporterkarnataka.com): ಕನ್ನಡ ವೀಕ್ಷಕರ ಮನಸಿಗೆ ಲಗ್ಗೆಯಿಡುವ ಕತೆಗಳನ್ನು ಹೇಳುತ್ತಾ ಬಂದಿರುವ ಕಲರ್ಸ್ ಕನ್ನಡ ಚಾನೆಲ್, ಇದೀಗ ಮತ್ತೆರೆಡು ಹೊಸ ಧಾರಾವಾಹಿಗಳನ್ನು ನಿಮ್ಮ ಮುಂದೆ ತರಲು ಸಜ್ಜಾಗಿದೆ. ‘ವಧು’ ಮತ್ತು ‘ಯಜಮಾನ’ ದೈನಿಕ ಧಾರಾವಾಹಿಗಳು ಜ,27ರಂದು ಜೋಡಿ ಕತೆಗಳಾದ ಡಿವೋರ್ಸ್ ಲಾಯರ್ ಮದುವೆ ಕತೆ ‘ವಧು’ ರಾತ್ರಿ 9.30ಕ್ಕೆ ಪ್ರಸಾರವಾಗಲಿದೆ. ಕಾಂಟ್ರಾಕ್ಟ್ ಮದುವೆಯ ಕತೆ ‘ಯಜಮಾನ’ ರಾತ್ರಿ 10 ಗಂಟೆಗೆ ಪ್ರಸಾರವಾಗಲಿದೆ. ಸಂಬಂಧಗಳನ್ನು ಪ್ರೀತಿಸುವ, ಅಷ್ಟೇ ಗೌರವಿಸುವ ‘ವಧು’ ಒಬ್ಬ ಅವಿವಾಹಿತೆ, ವೃತ್ತಿಯಲ್ಲಿ ಡಿವೋರ್ಸ್ ಲಾಯರ್. ಮನುಷ್ಯ ಸಂಬಂಧಗಳ ಬಗ್ಗೆ ಅವಳಿಗಿರುವ ಗೌರವವೇ ಅವಳನ್ನು ತನ್ನ ವೃತ್ತಿಯಲ್ಲಿ ಹಿಂದುಳಿಯುವಂತೆ ಮಾಡಿದೆ ಅಂದರೂ ತಪ್ಪಾಗದು!. ಗಂಡ ಹೆಂಡತಿ ನಡುವೆ ಬಿರುಕು ಮೂಡಿ ವಿಚ್ಛೇದನ ಕೋರಿ ಬಂದ ಜೋಡಿಗಳ ನಡುವೆ ಸಾಮರಸ್ಯ ಮೂಡಿಸಿ ಅವರನ್ನು ಒಂದು ಮಾಡುವುದರಲ್ಲೇ ಅವಳಿಗೆ ಆಸಕ್ತಿ. ಹೀಗಿರುವಾಗ ಒಂದು ಮಹತ್ವದ ಕೇಸು ಎಲ್ಲವನ್ನೂ ತಲೆಕೆಳಗೆ ಮಾಡುತ್ತದೆ. ಮೋಸ್ಟ್ ಸಕ್ಸಸ್ ಫುಲ್ ಬ್ಯುಸಿನೆಸ್ ಮ್ಯಾನ್ ಸಾರ್ಥಕ್ ದಾಂಪತ್ಯದಲ್ಲಿ ಬಿರುಕುಂಟಾಗಿ, ಪತ್ನಿ ಪ್ರಿಯಾಂಕಾ ಡಿವೋರ್ಸ್ ಕೇಸ್ ಫೈಲ್ ಮಾಡಿದಾಗ ವಧು ಹತ್ತಿರ ಸಹಾಯ ಕೋರಿ ಬರುತ್ತಾನೆ. ಈ ವೇಳೆ ಕತೆ ಕುತೂಹಲಕರ ತಿರುವು ಪಡೆಯುತ್ತದೆ. ಎರಡೂ ಕತೆಗಳು ಆಧುನಿಕ ಬದುಕಿನ ಸಂಬಂಧಗಳ ಹೊಸ ಸಂಕೀರ್ಣತೆಯನ್ನು ಎಳೆಎಳೆಯಾಗಿ ಬಿಡಿಸಿಡುವ ಹೊಸ ಬಗೆಯ ಕತೆಗಳು. ಭಾವನೆಗಳ ಸಂಘರ್ಷವನ್ನು ಅದರ ಮಿತಿಗಳಾಚೆಗೆ ಜಗ್ಗಿ ಪರೀಕ್ಷಿಗೊಳಪಡಿಸುವ ಈ ಎರಡು ಕತೆಗಳು.

ಇತ್ತೀಚಿನ ಸುದ್ದಿ

ಜಾಹೀರಾತು