5:24 PM Tuesday30 - December 2025
ಬ್ರೇಕಿಂಗ್ ನ್ಯೂಸ್
ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ

ಇತ್ತೀಚಿನ ಸುದ್ದಿ

ಕ್ಲಬ್ ಹೌಸ್ ನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ ಸಂಭ್ರಮ: ಪಿಎಂ ಬದುಕಿನ ಕಿರುಹೊತ್ತಿಗೆ ಬಿಡುಗಡೆ

16/09/2021, 21:50

ಮಂಗಳೂರು(reporterkarnataka.com): ಸೆಪ್ಟೆಂಬರ್ 17 ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ. ದೇಶದ ಪ್ರಧಾನಿಯ ಜನ್ಮದಿನದ ಆಚರಣೆಗೆ ಈಗಾಗಲೇ ಸಿದ್ಧತೆಗಳು ಶುರುವಾಗಿದೆ. ಗುಜರಾತು ಸೇರಿದಂತೆ ದೇಶಾದ್ಯಂತ ಭಾರೀ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಇನ್ನು ಬಿಜೆಪಿ ಕಾರ್ಯಕರ್ತರು, ಸಂಘಟನೆಯ ಕಾರ್ಯಕರ್ತರು ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ಸೋಶಿಯಲ್ ಮಿಡಿಯಾಗಳಲ್ಲಿ ಹೊಸ ಹೊಸ ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳಲಿದ್ದಾರೆ.

ಇದೇ ಸೆಪ್ಟೆಂಬರ್ 17 ರ ಸಂಜೆ 7.30 ಕ್ಕೆ ಮೋದಿಜಿ ಹುಟ್ಟುಹಬ್ಬವನ್ನು ಕ್ಲಬ್ ಹೌಸ್ ನಲ್ಲಿ ಆಚರಣೆ ಮಾಡಲಾಗುತ್ತದೆ. ಈ ಕಾರ್ಯಕ್ರಮದ ವಿಶೇಷ ಅತಿಥಿಯಾಗಿ ಮೈಸೂರು ಸಂಸದ ಪ್ರತಾಪ್ ಸಿಂಹ ಭಾಗವಹಿಸಲಿದ್ದಾರೆ. ಮತ್ತೊಂದು ವಿಶೇಷದ ಸಂಗತಿಯೆಂದರೆ ಪ್ರತಾಪ್ ಸಿಂಹ ಮೋದಿಯವರ ಕುರಿತು ಪುಸ್ತಕವೊಂದನ್ನು ರಚಿಸಿದ್ದಾರೆ. ಮೋದಿ ಬದುಕು ಮತ್ತು ಪ್ರಧಾನಿಯಾದ ನಂತರ ನೆಡೆದ ಘಟನೆಗಳನ್ನಾಧರಿಸಿದ ಹೊತ್ತಿಗೆಯ ಕುರಿತು ಮಾತಾಡಲಿದ್ದಾರೆ. 

ಇನ್ನು ಇದೇ ಕ್ಲಬ್ ಹೌಸ್ ಕಾರ್ಯಕ್ರಮದಲ್ಲಿ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರನಂದ ಸ್ವಾಮೀಜಿ ಸಾನಿಧ್ಯವಹಿಸಿ ಆಶೀರ್ವಚನ ನೀಡಲಿದ್ದಾರೆ. ಈ ಕಾರ್ಯಕ್ರಮದ ನಿರೂಪಣೆಯನ್ನ ರಮ್ಯ ವಸಿಷ್ಟ ಅವರು ವಹಿಸಲಿದ್ದಾರೆ. ಪ್ರಾಸ್ತವಿಕ ಭಾಷಣವನ್ನ ಪವನ್ ಕುಮಾರ್ ಅವರು ಮಾಡಲಿದ್ದಾರೆ. ಮೋದಿಯವರ ಹುಟ್ಟುಹಬ್ಬದ ದಿನದ ನಡೆಯುವ ಈ ಕಾರ್ಯಕ್ರಮಕ್ಕೆ ನೀವು ಕಿವಿಯಾಗಲಿದ್ದೀರಿ ತಾನೇ?

ಕಾರ್ಯಕ್ರಮದಲ್ಲಿ ಭಾಗವಹಿಸಲು ಈ ಲಿಂಕ್ ಬಳಸಿ
https://www.clubhouse.com/join/gdkgVotP/Nu40X1H7/xn741evR

ಇತ್ತೀಚಿನ ಸುದ್ದಿ

ಜಾಹೀರಾತು