8:11 PM Tuesday25 - November 2025
ಬ್ರೇಕಿಂಗ್ ನ್ಯೂಸ್
ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ ನಾನೇ 5 ವರ್ಷ ಸಿಎಂ ಎಂದು ಎದೆಬಡಿದುಕೊಳ್ಳುವ ಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು: ಬಸವರಾಜ…

ಇತ್ತೀಚಿನ ಸುದ್ದಿ

ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ ಉದ್ಯೋಗ: ಮುಖ್ಯಮಂತ್ರಿ ಘೋಷಣೆ

25/11/2025, 20:07

*ಹೊರ ರಾಜ್ಯದ ಪಟುಗಳಿಗೆ ತಲಾ 2 ಲಕ್ಷ ನಗದು: ಸಿ.ಎಂ ಘೋಷಣೆ*

ಬೆಂಗಳೂರು(reporterkarnataka.com): ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿಗಳು,
ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.
ಕಾವೇರಿ ನಿವಾಸದಲ್ಲಿ ಕ್ರಿಕೆಟ್ ತಂಡದ ಪ್ರತೀ ಆಟಗಾರರನ್ನು ವೈಯುಕ್ತಿಕವಾಗಿ ಅಭಿನಂಧಿಸಿ, ಸನ್ಮಾನಿಸಿದ ಬಳಿಕ ಮುಖ್ಯಮಂತ್ರಿಗಳು ಈ ಘೋಷಣೆ ಮಾಡಿದರು.
ಹಾಗೆಯೇ ಭಾರತ ತಂಡದ ಇತರೆ ರಾಜ್ಯಗಳನ್ನು ಪ್ರತಿ‌ನಿಧಿಸುವ ತಂಡದ ಆಟಗಾರರಿಗೆ ತಲಾ 2 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿದ್ದಾರೆ.


ತಂಡದಲ್ಲಿದ್ದ ಇತರೆ ರಾಜ್ಯಗಳ 13 ಆಟಗಾರ್ತಿಯರಿಗೂ ತಲಾ 2 ಲಕ್ಷ ರೂಪಾಯಿ ನಗದು ಬಹುಮಾನ ಸಿಗಲಿದೆ.
ತಂಡದ ನಾಯಕಿ, ತುಮಕೂರಿನ ಶಿರಾ ಮೂಲದ ದೀಪಿಕಾ ಅವರ ನಾಯಕತ್ವ ಮತ್ತು ಆಟದ ವೈಖರಿಯನ್ನು ಸಿಎಂ ವಿಶೇಷವಾಗಿ ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಮಾಜ ಕಲ್ಯಾಣ ಸಚಿವರಾದ ಎಚ್.ಸಿ. ಮಹದೇವಪ್ಪ ಹಾಗೂ ಉನ್ನತ ಶಿಕ್ಷಣ ಸಚಿವರಾದ ಎಂ.ಸಿ. ಸುಧಾಕರ್, ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಉಪಸ್ಥಿತರಿದ್ದು, ಆಟಗಾರ್ತಿಯರಿಗೆ ಶುಭ ಹಾರೈಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು