ಇತ್ತೀಚಿನ ಸುದ್ದಿ
ಸಿಎಂ ಬೊಮ್ಮಾಯಿ ಸಮ್ಮುಖ ಚಲನಚಿತ್ರ ನಟ ಶಶಿಕುಮಾರ್, ಮಾಜಿ ಸಂಸದರು, ಐಎಎಸ್ ಅಧಿಕಾರಿ ಸೇರಿದಂತೆ ಹಲವು ಮಂದಿ ಬಿಜೆಪಿ ಸೇರ್ಪಡೆ
04/11/2022, 00:42

ಬೆಂಗಳೂರು(reporterkarnataka.com):ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಉಪಸ್ಥಿತಿಯಲ್ಲಿ ಮಾಜಿ ಸಂಸದರು ಸೇರಿದಂತೆ ಹಲವು ಮಂದಿ ಬಿಜೆಪಿಗೆ ಸೇರ್ಪಡೆಗೊಂಡರು.
ಮಾಜಿ ಸಂಸದ ಮುದ್ದಹನುಮೇಗೌಡ, ಚಲನಚಿತ್ರ ನಟರು ಹಾಗೂ ಮಾಜಿ ಸಂಸದ ಶಶಿಕುಮಾರ್, ಮಾಜಿ ಐಎಎಸ್ ಅಧಿಕಾರಿಗಳಾದ ಬಿ. ಎಚ್. ಅನಿಲ್ ಕುಮಾರ್, ಸೇವಾದಳದ ರಾಜ್ಯ ಉಪಾಧ್ಯಕ್ಷರಾದ ಹನುಮಂತರಾವ್ ಜವಳಿ, ಪ್ರಮುಖರಾದರಮೇಶ ಮುನಿಯಪ್ಪ, ಜಿ. ವೆಂಕಟಾಚಲಯ್ಯ ಅವರು ತಮ್ಮ ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ,
ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್ ಜಿ. ವಿ., ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸಿದ್ದರಾಜು, ರಾಜ್ಯ ಉಪಾಧ್ಯಕ್ಷರಾದ ನಿರ್ಮಲ್ ಕುಮಾರ್ ಸುರಾನ, ಸಚಿವರು, ಶಾಸಕರು ಮತ್ತು ಪ್ರಮುಖರು ಉಪಸ್ಥಿತರಿದ್ದರು.