8:22 PM Wednesday12 - March 2025
ಬ್ರೇಕಿಂಗ್ ನ್ಯೂಸ್
Central v/s State | ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನಿಲುವು: ಸಿಎಂ… Education | ಗುಣಮಟ್ಟದ, ಕೌಶಲ್ಯಾಧಾರಿತ ಶಿಕ್ಷಣ ನೀಡುವುದು ಸರ್ಕಾರದ ಗುರಿ: ಸಚಿವ ಡಾ.ಎಂ.ಸಿ… ಗ್ಯಾರಂಟಿ ಅನುಷ್ಠಾನ ಸಮಿತಿ ರಚನೆಗೆ ಬಿಜೆಪಿ ವಿರೋಧ; ಇದು ಸಂವಿಧಾನ ವಿರೋಧಿ: ಪ್ರತಿಪಕ್ಷ… Global warming | ಹೆಚ್ಚುತ್ತಿರುವ ತಾಪಮಾನ: ಮೈಸೂರು ಝೂ ಪ್ರಾಣಿಗಳಿಗೆ ವಾಟರ್ ಜೆಟ್,… ರಂಜಾನ್ ಮಾಸ: ಸಮೋಸಕ್ಕೆ ಭಾರೀ ಡಿಮಾಂಡ್; ಪ್ರತಿದಿನ 15 ಸಾವಿರಕ್ಕೂ ಹೆಚ್ಚು ಮಾರಾಟ ರೈತರ ಐಪಿ ಸೆಟ್‌ಗಳಿಗೆ ಹೆಚ್ಚುವರಿ 2 ತಾಸು ವಿದ್ಯುತ್‌ ಪೂರೈಕೆ ಬಗ್ಗೆ ಸರಕಾರ… Higher Education | ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಗುಣಮಟ್ಟ ಹೆಚ್ಚಿಸಲು ಆದ್ಯತೆ::ಉನ್ನತ ಶಿಕ್ಷಣ ಸಚಿವ… APMC BILL | ಎಪಿಎಂಸಿ ನಿಯಂತ್ರಣಕ್ಕೆ ಇ-ಫ್ಲಾಟ್ಫಾರಂಗಳು ತಿದ್ದುಪಡಿ ವಿಧೇಯಕ: ವಿಧಾನಸಭೆ ಅನುಮೋದನೆ Power For Farmers | ಕೃಷಿ ಪಂಪ್ ಸೆಟ್ ಗಳಿಗೆ 7 ಗಂಟೆಗಳ… Education | ಶಿಕ್ಷಣ ಇಲಾಖೆಯಲ್ಲಿ ಶೇ. 80ರಷ್ಟು ಹುದ್ದೆಗಳ ಭರ್ತಿಗೆ ಕ್ರಮ: ಸಚಿವ…

ಇತ್ತೀಚಿನ ಸುದ್ದಿ

CM Clarification | ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ

12/03/2025, 19:58

*ರಾಜ್ಯ ಮತ್ತು ಜಿಲ್ಲಾ, ತಾಲ್ಲೂಕು ಗ್ಯಾರಂಟಿ ಜಾರಿ ಸಮಿತಿಗಳಲ್ಲಿ ಬದಲಾವಣೆ ಇಲ್ಲ: ಸಿಎಂ*

*ಅಧಿವೇಶನ ಮುಗಿಯುತ್ತಿದ್ದಂತೆ ಈ ಬಗ್ಗೆ ಸಭೆ ಕರೆದು ತಕರಾರುಗಳನ್ನು ಪರಿಹರಿಸಲಾಗುವುದು: ಸಿಎಂ*

ಬೆಂಗಳೂರು(reporterkarnataka.com): ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ, ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದರು.


ಅಧಿವೇಶನ ಮುಗಿಯುತ್ತಿದ್ದಂತೆ ಈ ಬಗ್ಗೆ ಸಭೆ ಕರೆದು ತಕರಾರುಗಳನ್ನು ಪರಿಹರಿಸಲಾಗುವುದು ಎಂದರು.
ಅಧಿಕಾರಕ್ಕೆ ಬಂದಾಗ ಪಕ್ಷದ ಕಾರ್ಯಕರ್ತರಿಗೆ ಅಧಿಕಾರದಲ್ಲಿ ಅವಕಾಶ ನೀಡುವುದು ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಮಹಾರಾಷ್ಟ್ರದಲ್ಲಿ ಎಲ್ಲಾ ಶಾಸಕರ ಕಚೇರಿಗೂ ಆರೆಸ್ಸೆಸ್ ಕಾರ್ಯಕರ್ತರನ್ನು ನೇಮಿಸಿಕೊಳ್ಳುತ್ತಿರುವುದನ್ನು ಉಲ್ಲೇಖಿಸಿದರು.
ತಾಲ್ಲೂಕುಗಳಲ್ಲಿ ಶಾಸಕರ ಘನತೆಗೆ, ಅಧಿಕಾರಕ್ಕೆ ಯಾವುದೇ ಚ್ಯುತಿ ಬರುವುದಿಲ್ಲ. ಈ ಬಗ್ಗೆ ಎಲ್ಲಾ ಜಿಲ್ಲಾಡಳಿತಕ್ಕೂ ಸೂಚನೆ ನೀಡಲಾಗಿದೆ ಎಂದರು.
ರಾಜ್ಯ ಮತ್ತು ಜಿಲ್ಲಾ, ತಾಲ್ಲೂಕು ಗ್ಯಾರಂಟಿ ಜಾರಿ ಸಮಿತಿಗಳಲ್ಲಿ ಬದಲಾವಣೆ ಇಲ್ಲ ಎಂದು ಇದೇ ಸಂದರ್ಭದಲ್ಲಿ ಸಿಎಂ ಸ್ಪಷ್ಟಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು