6:59 PM Thursday27 - November 2025
ಬ್ರೇಕಿಂಗ್ ನ್ಯೂಸ್
ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ… Bhadravathi | ಪತಿಯ ಕಿರುಕುಳ: ಡೆತ್ ನೋಟ್ ಬರೆದು ನಾಲೆಗೆ ಹಾರಿ ನವ… ವಿದ್ಯುತ್ ಲಿಂಕ್ ಲೈನ್‌ ಸ್ಥಾಪಿಸಿ, ಸಮರ್ಪಕ ವಿದ್ಯುತ್ ಪೂರೈಕೆಗೆ ಆದ್ಯತೆ: ಸಚಿವ ಕೆ.ಜೆ.ಜಾರ್ಜ್ ಹೂವುಗಳ ಹರಾಜು ಪ್ರಕ್ರಿಯೆ ಮಾದರಿಯಲ್ಲಿ ಔಷಧೀಯ ಗಿಡಮೂಲಿಕೆಗಳ ಹರಾಜು ಅವಶ್ಯಕ: ಮುಖ್ಯ ಕಾರ್ಯದರ್ಶಿ… ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ…

ಇತ್ತೀಚಿನ ಸುದ್ದಿ

ವಿಶ್ವಕಪ್ ಗೆದ್ದ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ, ಏಷ್ಯನ್ ಬ್ಯಾಡ್ಮಿಂಟನ್ ನಲ್ಲಿ ಬೆಳ್ಳಿ ಗೆದ್ದ ಲಕ್ಷ್ಯಗೆ ಸಿಎಂ ಅಭಿನಂದನೆ

27/11/2025, 18:56

*ಇಬ್ಬರಿಗೂ ತಲಾ ಐದು ಲಕ್ಷ ಬಹುಮಾನ ಘೋಷಿಸಿ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ*

ಬೆಂಗಳೂರು(reporterkarnataka.com): ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ತಂಡದ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ ಹಾಗೂ ಚೈನಾದಲ್ಲಿ ನಡೆದ ಕಿರಿಯರ ಏಷ್ಯನ್ ಬ್ಯಾಡ್ಮಿಂಟನ್ ಸಿಂಗಲ್ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಗೆದ್ದ ಲಕ್ಷ್ಯ ರಾಜೇಶ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಅಭಿನಂಧಿಸಿ ಸನ್ಮಾನ ಮಾಡಿ ತಲಾ ಐದು ಲಕ್ಷ ರೂ ಪ್ರೋತ್ಸಾಹ ಧನ ಘೋಷಿಸಿದರು.‌
ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ಗೋವಿಂದರಾಜು ಅವರ ನೇತೃತ್ವದಲ್ಲಿ ತಮ್ಮನ್ನು ಭೇಟಿಯಾದ ಇಬ್ಬರೂ ಪಟುಗಳಿಗೆ ಶುಭಾಶಯ ಕೋರಿದ ಮುಖ್ಯಮಂತ್ರಿಗಳು ರಾಜ್ಯಕ್ಕೆ ಮತ್ತು ದೇಶಕ್ಕೆ ಉತ್ತಮ ಹೆಸರು ತರುವ ನಿಟ್ಟಿನಲ್ಲಿ ಇನ್ನಷ್ಟು ಸಾಧನೆ ಮಾಡುವಂತೆ ಹಾರೈಸಿದರು.


ಇಬ್ಬರೂ ಪಟುಗಳಿಗೆ ತಲಾ ಐದು ಲಕ್ಷದ ಚೆಕ್ ವಿತರಿಸುವಂತೆ ಸರ್ಕಾರದ ಅಪರ ಮುಖ್ಯಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿಗಳು ಸೂಚಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಾರ್ಯದರ್ಶಿ ರಾಜೇಶ್ ಮತ್ತು ತರಬೇತುದಾರರಾದ ಬಿ.ಎನ್.ಸುಧಾಕರ್ ಅವರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು