10:43 PM Friday13 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ಸಿಎಂ-ಡಿಸಿಎಂ ಪರಸ್ಪರ ಬಾವಿಗೆ ತಳ್ಳಲು ನೋಡುತ್ತಿದ್ದಾರೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕೆ

30/11/2025, 20:44

* ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿಗೆ ಡಿಕೆಶಿ, ಸಿದ್ದರಾಮಯ್ಯ ಮುಸುಕಿನ ಗುದ್ದಾಟ

* ಸಿಎಂ ಗಾದಿ ಬಾಡಿದಾಟದಲ್ಲಿ ರಾಜ್ಯದ ಹಿತ, ರೈತರ ಸಂಕಷ್ಟ ಮರೆತ ಸರ್ಕಾರ

ಹುಬ್ಬಳ್ಳಿ(reporterkarnataka.com): “ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ-ಡಿಸಿಎಂ ಇಬ್ಬರೂ ಒಬ್ಬರಿಗೊಬ್ಬರು ಬಾವಿಯಲ್ಲಿ ಕೆಡವಲು ನೋಡುತ್ತಿದ್ದಾರೆ ಅಷ್ಟೇ” ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಟೀಕಿಸಿದರು.
ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡುತ್ತಾ ಸಿಎಂ ಗದ್ದುಗೆ ಗುದ್ದಾಟದ ಬಗ್ಗೆ ಹೀಗೆ ಪ್ರತಿಕ್ರಿಯಿಸಿ, ಇಬ್ಬರೂ ಸಿಎಂ ಮತ್ತು ಅಧಿಕಾರ ಹಂಚಿಕೆ ವಿಚಾರದಲ್ಲಿ ಎಲ್ಲವನ್ನೂ ಹೈಕಮಾಂಡ್ ನಿರ್ಧರಿಸುತ್ತದೆ ಎನ್ನುತ್ತಾರೆ. ಹಾಗಾದರೆ ಇಲ್ಲಿವರು ಬ್ರೇಕ್ ಫಾಸ್ಟ್ ನೆಪದಲ್ಲಿ ಅರ್ಧ ಇಡ್ಲಿ ತಿನ್ನಬೇಕಿತ್ತೇ? ಎಂದು ವ್ಯಂಗ್ಯವಾಡಿದರು.
ಸಿಎಂ ಕುರ್ಚಿಗಾಗಿ ಸಿಎಂ – ಡಿಸಿಎಂ ಮಧ್ಯೆ ಮುಸುಕಿನ ಗುದ್ದಾಟ ನಡೆಯುತ್ತಲೇ ಇದೆ. ಮೇಲ್ನೋಟಕ್ಕೆ ಎಲ್ಲವನ್ನೂ ಹೈಕಮಾಂಡ್ ಹೇಳಿದಂತೆ ಕೇಳುತ್ತೇವೆ ಎನ್ನುತ್ತಿದ್ದಾರೆ. ಆದರೆ ಈರ್ವರೂ ಜಟಾಪಟಿ ಮಾತ್ರ ಬಿಟ್ಟಿಲ್ಲ ಎಂದು ಹೇಳಿದರು.
ಇಬ್ಬರೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಆದರೆ ಕಾಂಗ್ರೆಸ್ ಅಲ್ಲಿ ಖರ್ಗೆ ಅವರದ್ದು ಏನೂ ನಡೆಯುವುದಿಲ್ಲ. ಎಲ್ಲಾ ನಕಲಿ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಅವರದ್ದೇ ಫೈನಲ್. ಹಾಗಾಗಿ ಖರ್ಗೆ ಹೈಕಮಾಂಡ್ ಮೇಲೆ ಎತ್ತಿ ಹಾಕುತ್ತಿದ್ದಾರೆ ಎಂದು ಜೋಶಿ ಹೇಳಿದರು.
ಸಿಎಂ, ಡಿಸಿಎಂ ಒಗ್ಗಟ್ಟಿನ ಮಂತ್ರ ಜಪಿಸುತ್ತಲೇ ಜೈಲಿಗೂ ಹೋಗಿ ಶಾಸಕರ ಬೆಂಬಲ ಕೋರುತ್ತಿದ್ದಾರೆ. ಅಂದರೆ ಸಿಎಂ ಗದ್ದುಗೆ ಜಟಾಪಟಿ ಕಾಂಗ್ರೆಸ್ ನಲ್ಲಿ ಅದೆಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ ಎಂಬುದನ್ನು ತೋರ್ಪಡಿಸುತ್ತದೆ. ಬ್ರೇಕ್ ಫಾಸ್ಟು, ಒಗ್ಗಟ್ಟು ಎಂಬುದೆಲ್ಲಾ ಒಂದು ನಾಟಕ ಎಂದು ಜೋಶಿ ಲೇವಡಿ ಮಾಡಿದರು.
ಒಗ್ಗಟ್ಟು ಒಗ್ಗಟ್ಟು ಎನ್ನುತ್ತಲೇ ಒಬ್ಬರಿಗೊಬ್ಬರು ಬಾವಿಗೆ ತಳ್ಳಲು ನೋಡುತ್ತಿದ್ದಾರೆ. ಸಿಎಂ ಕುರ್ಚಿ ಗುದ್ದಾಟಕ್ಕೆ ಕದನ ವಿರಾಮ ಬಿದ್ದಿಲ್ಲ. ಮುಸುಕಿನ ಗುದ್ದಾಟ ನಡೆದೇ ಇದೆ. ಈ ಬಡಿದಾಟದಲ್ಲಿ ರಾಜ್ಯದ ಹಿತವನ್ನು, ರೈತರ ಸಂಕಷ್ಟ ಸ್ಥಿತಿಯನ್ನು ಮರೆತು ಬಿಟ್ಟಿದ್ದಾರೆ ಸಿಎಂ ಡಿಸಿಎಂ ಎಂದು ಜೋಶಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.

*ಬದಿದಾಟದಲ್ಲಿ ರೈತರ ಮರೆತ ಸರ್ಕಾರ:*
ಸರ್ಕಾರ ಒಳ ಬಡಿದಾಟದಲ್ಲೇ ಹೆಚ್ಚಿದೆ. ಹಾಗಾಗಿ ರೈತರ ಬಗ್ಗೆ, ಯೋಜನೆ ಅನುಷ್ಠಾನ ಬಗ್ಗೆ ಗಮನ ಹರಿಸಿಲ್ಲ ಎಂದು ಆರೋಪಿಸಿದ ಸಚಿವ ಜೋಶಿ, ಸಕ್ಕರೆ ಕಾರ್ಖಾನೆ ಮತ್ತು ಕಬ್ಬು ಬೆಳೆಗಾರರು ಮತ್ತು ಮೆಕ್ಕೆಜೋಳ ವಿಚಾರವಾಗಿ ಕೇಂದ್ರ ಸರ್ಕಾರ ಎಲ್ಲ ತರಹದ ಬೆಂಬಲ ನೀಡಿದೆ. ಅದನ್ನು ಅನುಷ್ಠಾನಕ್ಕೆ ತರಬೇಕಾದ್ದು ರಾಜ್ಯ ಸರ್ಕಾರದ ಕೆಲಸ ಎಂದು ಚಾಟಿ ಬೀಸಿದರು.
ಎಥೆನಾಲ್ ಉತ್ಪಾದನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಉತ್ತಮ ಬೆಲೆಯನ್ನೂ ಕೊಡುತ್ತಿದೆ ಕಬ್ಬು ಬೆಳೆಗಾರರಿಗೆ ಬೆಂಬಲ ಬೆಲೆ ನೀಡಿದೆ. ಮೆಕ್ಕೆಜೋಳಕ್ಕೂ ಬೆಂಬಲ ಬೆಲೆಯಿದೆ. ಹೀಗಿರುವಾಗ ಎಥೆನಾಲ್ ಉತ್ಪಾದನೆಗೆ ಮೆಕ್ಕೆಜೋಳವನ್ನು ಬೆಂಬಲ ಬೆಲೆಯಲ್ಲಿ ಖರೀದಿಸುವಂತೆ ರಾಜ್ಯ ಸರ್ಕಾರ ನೋಡಿಕೊಳ್ಳಬೇಕು. ಡಿಸ್ಟಿಲರಿಗಳು ಅಬಕಾರಿ ಅಡಿಯಲ್ಲಿ ಬರುತ್ತವೆಯಾದ್ದರಿಂದ ಮಾನಿಟರ್ ಮಾಡಬೇಕು ಎಂದು ಜೋಶಿ ಹೇಳಿದರು.

*ಮನ್ ಕಿ ಬಾತ್ ಪ್ರೇರಣೆ:* ಪ್ರಧಾನಿ ನರೇಂದ್ರ ಮೋದಿ ಅವರ “ಮನ್ ಕೀ ಬಾತ್” ಯುವ ಸಮುದಾಯಕ್ಕೆ ಪ್ರೇರಣೆಯಾಗಿದೆ. ಪ್ರತಿ ಬಾರಿಯೂ ಪ್ರಧಾನಿ ಮೋದಿ ಅವರು ದೇಶದೆಲ್ಲೆಡೆಯ ಹೊಸ ಹೊಸ ವಿಚಾರ, ಸಂಗತಿ, ಯೋಜನೆಗಳನ್ನು ಪ್ರಸ್ಥಾಪಿಸುತ್ತಿದ್ದಾರೆ. ಇದು ಎಲ್ಲರಿಗೂ ಪ್ರೇರಣದಾಯಕವಾಗಿದೆ ಎಂದರು.
ನವೀಕರಿಸಬಹುದಾದ ಇಂಧನ ಇಲಾಖೆ ಮುಖೇನ ಸ್ಟಾರ್ಟ್ ಅಪ್ ಗಳಿಗೆ ಕೇಂದ್ರ ಸರ್ಕಾರ ₹ 100 ಕೋಟಿ ಒದಗಿಸಿದೆ. ಹೀಗೆ ಪ್ರತಿಯೊಂದಕ್ಕೂ ಪ್ರಧಾನಿ ಮೋದಿ ಮನ್ ಕೀ ಬಾತ್ ಮೂಲಕ ಉತ್ತೇಜನ, ಪ್ರೇರಣೆ ನೀಡುತ್ತಿದ್ದಾರೆ. ಇದು ಹೆಮ್ಮೆಯ ವಿಚಾರ ಎಂದು ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು