12:08 AM Sunday23 - November 2025
ಬ್ರೇಕಿಂಗ್ ನ್ಯೂಸ್
ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ… ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ

ಇತ್ತೀಚಿನ ಸುದ್ದಿ

ಸಿಎಂ ತಂಗಿದ್ದ ಹೋಟೆಲ್ ಗೆ ಯುವ ಕಾಂಗ್ರೆಸ್ ಮುತ್ತಿಗೆ, ಕಪ್ಪು ಬಾವುಟ ಪ್ರದರ್ಶನ: ಪೊಲೀಸ್ ಕಮಿಷನರ್ ತಲೆದಂಡ?

12/04/2022, 19:20

ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಂಗಿದ್ದ ನಗರದ ಖಾಸಗಿ ಹೋಟೆಲ್ ವೊಂದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿ ಕಪ್ಪು ಬಾವುಟ ಪ್ರದರ್ಶಿಸಿದ ಘಟನೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿದ್ದು, ಮಂಗಳೂರು ಪೊಲೀಸ್ ಕಮಿಷನರ್ ತಲೆದಂಡವಾಗುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.

ಪ್ರಕರಣದ ಕುರಿತು ಮಾಹಿತಿ ರಾಜ್ಯ ಗೃಹ ಇಲಾಖೆಗೆ ಈಗಾಗಲೇ ರವಾನೆಯಾಗಿದೆ. ಗೃಹ ಸಚಿವ ಅರಗ ಜ್ಞಾನೇಂದ್ರ ಹಾಗೂ ಗೃಹ ಸಚಿವಾಲಯ ಈ ಕುರಿತು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಲ್ಲಿ ವಿವರಣೆ ಕೇಳಿದೆ ಎಂದು ತಿಳಿದು ಬಂದಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಂಗಿದ್ದ ಹೋಟೆಲ್ ಗೆ ಕಪ್ಪು ಬಾವುಟ ಜತೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿರುವುದನ್ನು ಸ್ಥಳೀಯ ಪೊಲೀಸ್ ಇಲಾಖೆಯ

ಭದ್ರತಾ ಲೋಪವೆಂದು ಪರಿಗಣಿಸಲಾಗುತ್ತದೆ ಎನ್ನಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಹೊಟೇಲಿನ ಬಾಗಿಲವರೆಗೆ ತಲುಪುವ ತನಕ ಪೊಲೀಸರಿಗೆ ಯಾವುದೇ ಸುಳಿವು ದೊರಕಿರಲಿಲ್ಲ.

ಕಾಂಗ್ರೆಸ್ ಕಾರ್ಯಕರ್ತರು ಹೋಟೆಲ್ ಗೆ ಮುತ್ತಿಗೆ ಹಾಕುವ ಬಗ್ಗೆ ಮಾಹಿತಿ ಸಂಗ್ರಹಿಸುವಲ್ಲಿ ರಾಜ್ಯ ಗುಪ್ತಚರ ಇಲಾಖೆ ಕೂಡ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಅಥವಾ ಗುಪ್ತಚರ ಇಲಾಖೆಯ ಮುಖ್ಯಸ್ಥರ ತಲೆದಂಡವಾಗುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ರಿಪೋರ್ಟರ್ ಕರ್ನಾಟಕಕ್ಕೆ ಮಾಹಿತಿ ಲಭಿಸಿದೆ.

ಜಿಲ್ಲಾ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಿಥುನ್ ರೈ ಅವರ ನೇತೃತ್ವದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದ ರಾಷ್ಟ್ರಕವಿ ಡಾ. ಗೋವಿಂದ ಪೈ ಸರ್ಕಲ್ ಬಳಿಯಿರುವ ಹೋಟೆಲ್ ಗೆ ಮುತ್ತಿಗೆ ಹಾಕಿ ಕಪ್ಪು ಬಾವುಟ ಪ್ರದರ್ಶಿಸಿ ಧಿಕ್ಕಾರ ಕೂಗಿದ್ದರು. ಯಾವುದೇ ಸೂಚನೆ ಇಲ್ಲದೆ ಮುತ್ತಿಗೆ ನಡೆಸಿರುವುದರಿಂದ ಭದ್ರತಾ ಸಿಬ್ಬಂದಿಗಳು ಸ್ವಲ್ಪ ಹೊತ್ತು ವಿಚಲಿತರಾದರು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸ್ ಸಿಬ್ಬಂದಿಗಳು ಕಾಂಗ್ರೆಸ್ ಕಾರ್ಯಕರ್ತರು ಹೋಟೆಲ್ ಗೆ ನುಗ್ಗುವುದನ್ನು ತಡೆದರು. ನಂತರ ಪ್ರತಿಭಟನಾಕಾರರನ್ನು ಬಂಧಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು