7:04 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಸಿ.ಎಂ.ಇಬ್ರಾಹಿಂ ಕಾಂಗ್ರೆಸ್‌ನಲ್ಲೇ ಮುಂದುವರಿಯುತ್ತಾರೆ ಎಂದ ಯು.ಟಿ.ಖಾದರ್ !

31/01/2022, 18:06

ಮಂಗಳೂರು (ReporterKarnataka.Com) ಸಿ.ಎಂ.ಇಬ್ರಾಹಿಂ ಅವರು ನಮ್ಮ ಹಿರಿಯ ನಾಯಕರಾಗಿದ್ದು, ಕಾಂಗ್ರೆಸ್ ಪಕ್ಷಕ್ಕೆ ಸಾಕಷ್ಟು ಕೊಡುಗೆ ನೀಡಿದ್ದು, ಮುಂದೆಯೂ ಕಾಂಗ್ರೆಸ್‌ನಲ್ಲೇ ಇರುತ್ತಾರೆ ಎಂದು ವಿಪಕ್ಷ ಉಪನಾಯಕ ಯು.ಟಿ.ಖಾದರ್ ತಿಳಿಸಿದ್ದಾರೆ.

ಕಾಂಗ್ರೆಸ್ ಹಿರಿಯ ಮುಖಂಡ ಬಿ.ಜನಾರ್ಧನ ಪೂಜಾರಿಯವರ ಆಶೀರ್ವಾದ ಪಡೆದ ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಸಿ.ಎಂ.ಇಬ್ರಾಹಿಂ ಕೊಡುಗೆ ಅತಿ ಅಗತ್ಯವಾಗಿದೆ. ದೇಶ-ರಾಜ್ಯದ ಜತೆಗೆ ಜನಸಾಮಾನ್ಯರಿಗೆ ವಿರೋಧವಾಗಿರುವ ಬಿಜೆಪಿ ಸರಕಾರವನ್ನು ಕಿತ್ತೊಗೆಯುವುದು ನಮ್ಮ ಪ್ರಮುಖ ಉದ್ದೇಶವಾಗಿದೆ.

ಉಪನಾಯಕನ ಸ್ಥಾನದ ಕುರಿತು ಹಿಂದೆಯೇ ಚರ್ಚೆಯಾಗಿತ್ತು. ಸಿ.ಎಂ.ಇಬ್ರಾಹಿಂ ಅವರ ವಿಚಾರಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ತಾನು ಸಣ್ಣ ವಯಸ್ಸಿನಿಂದಲೂ ಕಾಂಗ್ರೆಸ್‌ನಲ್ಲಿ ಬೇರೆ ಬೇರೆ ಸ್ಥಾನಗಳನ್ನು ಅಲಂಕರಿಸಿ ಶಾಸಕನಾಗಿ, ಸಚಿವನಾಗಿ ಪ್ರಮುಖ ಇಲಾಖೆಗಳನ್ನು ಪ್ರಮಾಣಿಕನಾಗಿ ಕೆಲಸ ಮಾಡಿದ ಕಾರಣ ಈ ಸ್ಥಾನ ಲಭಿಸಿದೆ ಎಂದರು.

ಈ ಸಂದರ್ಭದಲ್ಲಿ ಜಿ.ಪಂ.ಮಾಜಿ ಸದಸ್ಯ ಉಮ್ಮರ್ ಫಾರೂಕ್ ಫರಂಗಿಪೇಟೆ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್, ಬಂಟ್ವಾಳ ಬ್ಲಾಕ್ ಅಧ್ಯಕ್ಷ ಬೇಬಿ ಕುಂದರ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಕಾನ್ ಬಂಟ್ವಾಳ, ಪುದು ಗ್ರಾ.ಪಂ.ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಇರಾ ಗ್ರಾ.ಪಂ.ಮಾಜಿ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ, ಜಿಲ್ಲಾ ಕಾಂಗ್ರೆಸ್ ಒಬಿಸಿ ಘಟಕದ ಉಪಾಧ್ಯಕ್ಷ ದಿನೇಶ್ ಪೂಜಾರಿ, ಜಬ್ಬಾರ್ ಬೋಳಿಯಾರ್, ಮಜೀದ್ ಫರಂಗಿಪೇಟೆ, ಇಟ್ಬಾಲ್ ಸುಜೀರ್ ಮೊದಲಾದವರಿದ್ದರು.ಬಳಿಕ ಮಾಜಿ ಸಚಿವ ಬಿ.ರಮಾನಾಥ ರೈ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು