1:48 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಸಿಎಂ ಪುತ್ರ ವಿಜಯೇಂದ್ರ ದಿಢೀರ್ ದೆಹಲಿಗೆ ದೌಡು: ಹಾಗಾದರೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿತ್ತೇ? 

01/06/2021, 14:01

ಬೆಂಗಳೂರು(reporterkarnataka news): ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ಎಸ್. ವಿಜಯೇಂದ್ರ ಅವರು ಮಂಗಳವಾರ ದಿಢೀರನೆ ದೆಹಲಿಗೆ ತೆರಳಿದ್ದಾರೆ. ಬಿಜೆಪಿ ಹೈಕಮಾಂಡ್ ಅವರಿಗೆ ಬುಲಾವ್ ನೀಡಿತ್ತಾ? ಅಥವಾ ವಿಜಯೇಂದ್ರ ಅವರೇ ಹೈಕಮಾಂಡ್ ಭೇಟಿಗೆ ತೆರಳಿದ್ದಾರಾ? ಎನ್ನುವುದು ಇನ್ನು ಸ್ಪಷ್ಟವಾಗಿಲ್ಲ.

ಇಂದು ಮುಂಜಾನೆ 5.30ಕ್ಕೆ ವಿಜಯೇಂದ್ರ ಅವರು ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ. ದೆಹಲಿ ಯಾತ್ರೆ ಬಗ್ಗೆ ಯಾವುದೇ ಮಾಹಿತಿ ನೀಡದೆ ಸಿಎಂ ಪುತ್ರ ತೆರಳಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ವಿರುದ್ಧ ರಾಜ್ಯ ಬಿಜೆಪಿ ನಾಯಕರು ಮೇಲಿಂದ ಮೇಲೆ ಬಿಜೆಪಿ ವರಿಷ್ಠರಿಗೆ ದೂರು ನೀಡುತ್ತಲೇ ಬಂದಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್ ಅವರಂತು ದಿನಾ ಬೆಳಗಾದರೆ ಯಡಿಯೂರಪ್ಪ ವಿರುದ್ಧ ಹಲ್ಲು ಮಸೆಯುತ್ತಲೇ ಇರುತ್ತಾರೆ. ಸಚಿವ ಈಶ್ವರಪ್ಪ ಅವರು ಕೂಡ ಇತ್ತೀಚೆಗೆ ಸಿಎಂ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಸಚಿವ ಸಿ.ಪಿ. ಯೋಗೀಶ್ವರ್ ಮೊನ್ನೆ ಮೊನ್ನೆ ದೆಹಲಿಗೆ ಹೋಗಿ ವರಿಷ್ಠರ ಮನೆಯ ಗೇಟು ನೋಡಿ ಬಂದಿದ್ದಾರೆ. ಇವೆಲ್ಲದರ ನಡುವೆ ಇದೀಗ ಸಿಎಂ ಪುತ್ರ ವಿಜಯೇಂದ್ರ ಅವರೇ ದೆಹಲಿಗೆ ತೆರಳಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಉಂಟುಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು