1:07 PM Monday17 - March 2025
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರ ಕೊಟ್ಟಿರುವುದು ಸಾಲ, ನಮ್ಮ ಪಾಲಿನ ಅನುದಾನವಲ್ಲ: ಸದನದಲ್ಲಿ ಸಿಎಂ ಸಿದ್ದರಾಮಯ್ಯ… ಲೋಕಸಭೆ ಚುನಾವಣೆ ನಂತ್ರ ಗ್ಯಾರಂಟಿ ಯೋಜನೆ ನಿಂತೋಗುತ್ತೆ ಎಂದು ಅಪಪ್ರಚಾರ ಮಾಡಿದ್ರಲ್ಲಾ, ನಿಂತೋಯ್ತೇನ್ರೀ:… Ex CM | ಬೆಳೆ ಹಾನಿಗೊಳಗಾದ ಪ್ರತಿ ರೈತರ ಜಮೀನು ಸಮೀಕ್ಷೆ ಮಾಡಿ:… ಮಳವಳ್ಳಿಯಲ್ಲಿ ಕಲುಷಿತ ಆಹಾರ ಸೇವಿಸಿ ವಿದ್ಯಾರ್ಥಿ ಸಾವು: ಅಧಿಕಾರಿಗಳಿಂದ ಮಾಹಿತಿ ಪಡೆದ ಕೇಂದ್ರ… ಬಂಟ್ವಾಳದಲ್ಲಿ ಪ್ರಾಂತೀಯ ಹಿಂದೂ ರಾಷ್ಟ್ರ ಅಧಿವೇಶ ಶಂಖನಾದದೊಂದಿಗೆ ಆರಂಭ ನಿಡುವಾಳೆ ರಾಮೇಶ್ವರ ದೇವಾಲಯಕ್ಕೆ ನಟ ರಮೇಶ್ ಅರವಿಂದ್ ಕುಟುಂಬ ಸಮೇತ ಭೇಟಿ: ವಿಶೇಷ… Govt Land Encroachment | ಬೆಂಗಳೂರು ನಗರದ ವಿವಿಧೆಡೆ 59.63 ಕೋಟಿ ಮೌಲ್ಯದ… PWD Minister | ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಆಗಮನ-ನಿರ್ಗಮನ ಮಾರ್ಗ ಮುಚ್ಚಿಲ್ಲ:… Home Minister | ರಾಜ್ಯದ ಎಲ್ಲ ಪೊಲೀಸ್ ಸಿಬ್ಬಂದಿಗಳಿಗೆ ಸೈಬರ್ ತರಬೇತಿ: ಗೃಹ… Forest Minister | ಬೇಲೂರು ಬಳಿ ಕಾಡಾನೆ ದಾಳಿಗೆ ಮಹಿಳೆ ಸಾವು; 3…

ಇತ್ತೀಚಿನ ಸುದ್ದಿ

ಲೋಕಸಭೆ ಚುನಾವಣೆ ನಂತ್ರ ಗ್ಯಾರಂಟಿ ಯೋಜನೆ ನಿಂತೋಗುತ್ತೆ ಎಂದು ಅಪಪ್ರಚಾರ ಮಾಡಿದ್ರಲ್ಲಾ, ನಿಂತೋಯ್ತೇನ್ರೀ: ಬಿಜೆಪಿಗೆ ಸಿಎಂ ಪ್ರಶ್ನೆ

17/03/2025, 13:04

ಬೆಂಗಳೂರು(reporterkarnataka.com): ಲೋಕಸಭಾ ಚುನಾವಣೆ ನಂತರದಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುವುದು ಎಂದು ಸುಳ್ಳು ಆರೋಪ, ಅಪಪ್ರಚಾರ ಮಾಡಿದಿರಿ. ಜನರಿಗೆ ಈ ಕಾರ್ಯಕ್ರಮಗಳ ಸತ್ಯಾಸತ್ಯತೆ ಗೊತ್ತಿದೆ. ಫಲಾನುಭವಿಗಳಿಗೆ ಇದರಿಂದ ಪ್ರಯೋಜನವಾಗಿದೆ. ಜೂನ್ 11, 2023 ರಿಂದ 410 ಕೋಟಿ ಜನ ಶಕ್ತಿ ಯೋಜನೆಯಡಿ ಓಡಾಡಿದ್ದಾರೆ. ನೀವು ಎಷ್ಟೇ ಸುಳ್ಳು ಹೇಳಿದರೂ ಉಪಚುನಾವಣೆಯಲ್ಲಿ ಮೂರು ಸ್ಥಾನಗಳನ್ನು ಸೋತಿದ್ದೀರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಿಮ್ಮ ಟೀಕೆ, ಆಪಾದನೆಗಳು ಮಾಡಿದ ನಂತರ ಉಪಚುನಾವಣೆಗಳು ನಡೆದಿವೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟ ಗೆದ್ದಿದ್ದ ಚನ್ನಪಟ್ಟಣ ಕ್ಷೇತ್ರದಲ್ಲಿ 25 ಸಾವಿರಕ್ಕೂ ಹೆಚ್ಚು ಅಂತರದಿಂದ ಗೆದ್ದಿದ್ದೇವೆ. ಶಿಗ್ಗಾಂವಿ ಕ್ಷೇತ್ರದಲ್ಲಿ13 ಸಾವಿರ ಅಂತರದಿಂದ ಹಾಗೂ ಸಂಡೂರು ಕ್ಷೇತ್ರದಲ್ಲಿ 9 ಸಾವಿರ ಅಂತರದಲ್ಲಿ ಗೆದ್ದಿದ್ದೇವೆ. ಮೂರೂ ಕಡೆ ಮಕಾಡೆ ಮಲಗಿದಿರಿ ನೀವು. ಜನರನ್ನು ಮೂರ್ಖರನ್ನಾಗಿಸಲು ಪ್ರಯತ್ನಿಸಿದರೆ ಸಾಧ್ಯವಿಲ್ಲ ಎಂದು ಸಿಎಂ ನುಡಿದರುಮ ಎರಡು ಬಾರಿ ಅಧಿಕಾರ ಮಾಡಿರುವ ನೀವು ಜನರ ಆಶೀರ್ವಾದದಿಂದ ಗೆದ್ದಿದ್ದೀರೇ? ಆಪರೇಶನ್ ಕಮಲ ಮಾಡಿ 18 ಕ್ಷೇತ್ರಗಳನ್ನು ಗೆದ್ದಿರಿ ಎಂದು ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರನ್ನು ಟೀಕಿಸಿದರು.
ಬಸವರಾಜ ಬೊಮ್ಮಾಯಿ ಅವರ ಮಗನ ವಿರುದ್ಧ ಗೆಲ್ಲಬೇಕಾದರೆ ಎಲ್ಲಾ ಜಾತಿ ಜನರು ಮತ ನೀಡಿದ್ದರಿಂದ ನಾವು ಗೆದ್ದಿದ್ದೇವೆ. ನಾವು ಅಪರೇಶನ್ ಕಾಂಗ್ರೆಸ್ ಮಾಡಿಲ್ಲ. ನಾವು ಗ್ಯಾರಂಟಿ ಕೊಡದೇ ಹೋಗಿದ್ದರೆ ಬಡವರು ಮತ ಹಾಕುತ್ತಿರಲಿಲ್ಲ . ಮಧ್ಯವರ್ತಿಗಳಿಲ್ಲದೇ ನೇರವಾಗಿ ಫಲಾನುಭವಿಗಳ ಖಾತೆಗೆ ತಲುಪುವ ಈ ಯೋಜನೆಗಳು ಬಡವರ ಬದುಕಿಗೆ ಭರವಸೆ ನೀಡಿವೆ.

ಇತ್ತೀಚಿನ ಸುದ್ದಿ

ಜಾಹೀರಾತು