5:45 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

Karnataka CM | ಸಾಹಿತ್ಯ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ

02/06/2025, 20:35

*ಬಾನು ಮುಷ್ತಾಕ್ ಅವರು ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ: ಇದು ಇಡೀ ಕನ್ನಡ ಜಗತ್ತಿನ ಹೆಮ್ಮೆ: ಸಿಎಂ*

*ಬಾನು ಮುಷ್ತಾಕ್ , ದೀಪಾ ಬಾಸ್ತಿ ಅವರಿಗೆ 10 ಲಕ್ಷ ಪುರಸ್ಕಾರ ಘೋಷಿಸಿದ ಸಿಎಂ*

*ಬಾನು ಅವರ ಕತೆಗಳನ್ನು ಇಂಗ್ಲಿಷ್ ಗೆ ಪ್ರಕಟಿಸಲು, ಅನುವಾದಕ್ಕೆ ಸರ್ಕಾರದ ನೆರವು*

ಬೆಂಗಳೂರು(reporterkarnataka.com): ಸಾಹಿತ್ಯಕ್ಕೆ ಸಮಾಜವನ್ನು ಬೆಸೆಯುವ ಶಕ್ತಿ ಇದೆ. ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬ್ಯಾಂಕ್ವೆಂಟ್ ಹಾಲ್ ನಲ್ಲಿ ಆಯೋಜಿಸಿದ್ದ ಬುಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರ ಸರ್ಕಾರಿ ಅಭಿನಂದನಾ ಕಾರ್ಯಕ್ರಮದಲ್ಲಿ ಬಾನು ಅವರನ್ನು ಅಭಿನಂದಿಸಿ, ಸನ್ಮಾನಿಸಿ ಮಾತನಾಡಿದರು.
ಬಾನು ಮುಷ್ತಾಕ್ ಅವರು ನಮ್ಮ ಭಾಷೆಗೆ ಬುಕರ್ ಒದಗಿಸಿಕೊಡುವ ಮೂಲಕ ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ. ಇದು ಇಡೀ ಕನ್ನಡ ಜಗತ್ತಿನ ಹೆಮ್ಮೆ‌ ಎಂದು ಮೆಚ್ಚುಗೆ ಸೂಚಿಸಿದರು.
ತಮ್ಮ ಕತೆಗಳ ಮೂಲಕ ಮತ್ತು ಅನುವಾದದ ಮೂಲಕ ಕನ್ನಡಕ್ಕೆ ಕೀರ್ತಿ ತಂದ ಬಾನು ಮುಷ್ತಾಕ್ , ದೀಪಾ ಬಾಸ್ತಿ ಅವರಿಗೆ ತಲಾ 10 ಲಕ್ಷ ಪುರಸ್ಕಾರ ನೀಡಲಾಗುವುದು ಎಂದು ಘೋಷಿಸಿದರು.
ಬಾನು ಅವರ ಕತೆಗಳನ್ನು ಇಂಗ್ಲಿಷ್ ಗೆ ಪ್ರಕಟಿಸಲು, ಅನುವಾದಕ್ಕೆ ಸರ್ಕಾರದ ನೆರವು ನೀಡಲಾಗುವುದು ಎಂದು ತಿಳಿಸಿದರು.
ಪತ್ರಕರ್ತೆಯಾಗಿ, ಲೇಖಕಿಯಾಗಿ, ವಕೀಲರಾಗಿ, ಹೋರಾಟಗಾರ್ತಿಯಾಗಿ ಸಮಾಜದಲ್ಲಿ ಗುರುತಿಸಿಕೊಂಡಿರುವುದೇ ಬಾನು ಮುಷ್ತಾಕ್ ಅವರ ಬರವಣಿಗೆಯ ಶಕ್ತಿ ಎಂದು ವಿಶ್ಲೇಷಿಸಿದರು.
ಲಂಕೇಶ್ ಪತ್ರಿಕೆಯಲ್ಲಿ ಪತ್ರಕರ್ತೆಯಾಗಿ ಬರೆಯುತ್ತಲೇ, ವಕೀಲೆಯಾಗಿ ಬಡವರ ಪರ ವಕಾಲತ್ತು ವಹಿಸುತ್ತಾ ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳು ಲಭಿಸಿರುವುದೇ ಬಾನು ಮುಷ್ತಾಕ್ ಅವರ ಬರವಣಿಗೆಗಳಲ್ಲಿ ಸಮಾಜಮುಖಿ ಸತ್ವ ಇದೆ ಎನ್ನುವುದಕ್ಕೆ ಸಾಕ್ಷಿ ಎಂದರು.
ಮುಸ್ಲಿಂ ಸಮುದಾಯದ ಹೆಣ್ಣು‌ಮಕ್ಕಳ ಧ್ವನಿಯಾಗಿ ಮೌಡ್ಯ ವಿರೋಧಿಸಿ ಬರೆಯುವ ಪ್ರಗತಿಪರ ಎದೆಗಾರಿಕೆ ಬಾನು ಅವರಲ್ಲಿದೆ. ಸಾಹಿತ್ಯದ ಮೂಲಕ ಮಾನವೀಯ ಸಂದೇಶ ನೀಡುವ ಜವಾಬ್ದಾರಿ ಬಾನು ಮುಷ್ತಾಕ್ ಅವರು ನಿರ್ವಹಿಸಿದ್ದಾರೆ.
ಕವಿರಾಜಮಾರ್ಗದಲ್ಲಿ ಪರಧರ್ಮ ಮತ್ತು ಪರ ವಿಚಾರಗಳನ್ನು ಸಹಾನುಭೂತಿಯಿಂದ ನೋಡುಬೇಕು ಎಂದು ಕರೆ ನೀಡಿದ್ದರೆ,
ಆದಿ ಕವಿ ಪಂಪ ಅವರು ಮನುಷ್ಯ ಜಾತಿ ತಾನೊಂದೇ ವಲಂ ಎಂದಿದ್ದಾರೆ, ಬಸವಣ್ಣನವರು “ಇವ ನಮ್ಮವ” ಎಂದು ಹೇಳಿದ್ದಾರೆ. ಹೆಣ್ಣಿನ ಧ್ವನಿಯಾದ ಅಕ್ಕಮಹಾದೇವಿ ಅವರೂ ಇದನ್ನೇ ಧ್ವನಿಸಿದ್ದಾರೆ. ಇವರೆಲ್ಲರ ಆಶಯಗಳ ಮುಂದುವರಿಕೆಯಾಗಿ ಬಾನು ಮುಷ್ತಾಕ್ ಕೆಲಸ ಮಾಡಿದ್ದಾರೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು