2:44 AM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿಗಳಿಗೆ ನೋಟೀಸ್ ರಾಜ್ಯಪಾಲರ ಅಧಿಕಾರ ದುರುಪಯೋಗ: ಸಿಪಿಎಂ

04/08/2024, 16:02

ಗಣೇಶ ಇನಾಂದಾರ ಬಳ್ಳಾರಿ

info.reporterkarnataka@gmail.com

ಆರ್ ಟಿಐ ಕಾರ್ಯಕರ್ತರೊಬ್ಬರ ಕೋರಿಕೆಯ ಮೇರೆಗೆ
ರಾಜ್ಯಪಾಲರು ಧಿಡೀರನೆ ಅಂದೇ ಮುಖ್ಯಮಂತ್ರಿಗಳಿಗೆ ಶೋಕಾಸ್ ನೋಟೀಸ್ ನೀಡುವ ಆಶ್ಚರ್ಯಕರ ಬೆಳವಣಿಗೆ ದೇಶದ ಗಮನ ಸೆಳೆದಿದೆ ಎಂದು ಬಳ್ಳಾರಿ ಜಿಲ್ಲಾ ಸಿಪಿಎಂ ಸಮಿತಿಯ ಕಾರ್ಯದರ್ಶಿ ಜೆ. ಸತ್ಯಬಾಬು ಕಾರ್ಯದರ್ಶಿ ಪ್ರತಿಪಾದಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು,ರಾಜ್ಯಪಾಲರೊಬ್ಬರು ಸಾಮಾನ್ಯ ಪ್ರಜೆಯೊಬ್ಬರ ಮನವಿ ಮೇರೆಗೆ ಮುಖ್ಯಮಂತ್ರಿಗಳಿಗೆ ಶೋಕಾಸ್ ನೀಡಿರುವ ಬೆಳವಣಿಗೆ ಎಲ್ಲ ಪ್ರಜಾಸತ್ತಾತ್ಮಕ ಶಕ್ತಿಗಳಲ್ಲಿ ಆತಂಕ ಮೂಡಿಸಿದೆ.
ರಾಜ್ಯಪಾಲರು ಮುಡಾ ಪ್ರಕರಣಕ್ಕೆ ಸಂಬಂಧಿಸಿ ವಿಧಾನ ಸಭೆಯಲ್ಲಿ ಹಾಗೂ ನೇರ ರಾಜ್ಯಪಾಲರಿಗೂ ವಿವರವಾದ ಮಾಹಿತಿ ನೀಡಿದಾಗಲೂ ಮತ್ತು ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಂಗ ತನಿಖೆಗೆ ಕ್ರಮವಹಿಸಿದಾಗಲೂ, ರಾಜ್ಯಪಾಲರು ತಮ್ಮ ವಿವೇಚನಾಧಿಕಾರವನ್ನು ಇಷ್ಠೊಂದು ಅವಸರದಲ್ಲಿ ಬಳಸಿ, ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಸರಕಾರದ ಮುಖ್ಯಮಂತ್ರಿಗೆ, ಆ ಸರಕಾರವನ್ನು ಪ್ರತಿನಿಧಿಸುವ ರಾಜ್ಯಪಾಲರು ಶೋಕಾಸ್ ನೋಟೀಸ್ ನೀಡಿರುವುದು ರಾಜ್ಯಪಾಲರ ಘನತೆಗೆ ತಕ್ಕುದಾಗಿ ಕಂಡು ಬರುತ್ತಿಲ್ಲ.ಬದಲಿಗೆ, ಸ್ಪಷ್ಟವಾಗಿ ಇದೊಂದು ಅಧಿಕಾರ ದುರುಪಯೋಗವಾಗಿದೆ ಎಂದು ಆರೋಪಿಸಿದ್ದಾರೆ.
ರಾಜ್ಯಪಾಲರ ಕಚೇರಿಗಳನ್ನು ದುರುಪಯೋಗ ಮಾಡುವ ಬಿಜೆಪಿ ಹಾಗೂ ಒಕ್ಕೂಟ ಸರಕಾರದ ಮುಂದುವರಿದ ದುರ್ನಡೆಯ ಭಾಗವಾಗಿದೆಯೆಂದು ಬಲವಾಗಿ ಖಂಡಿಸಿರು ಅವರು, ಬಿಜೆಪಿ ಮತ್ತು ಅದರ ಒಕ್ಕೂಟ ಸರಕಾರ ವಿರೋಧ ಪಕ್ಷಗಳ ಸರಕಾರಗಳನ್ನು ದುರ್ಬಲಗೊಳಿಸಲು ಇಲ್ಲವೆ ಅಗತ್ಯ ಬಹುಮತವಿಲ್ಲದಿದ್ದರೂ ಬಲವಂತವಾಗಿ ಬಿಜೆಪಿಯ ಸರಕಾರ ಸ್ಥಾಪನೆಗೆ ಕ್ರಮವಹಿಸಲು ರಾಜ್ಯಪಾಲರ ಕಛೇರಿ ಹಾಗೂ ಅವರ ವಿವೇಚನಾಧಿಕಾರವನ್ನು ದುರ್ಬಳಕೆ ಮಾಡಿಕೊಂಡಿರುವುದು ಇದೇ ಮೊದಲ ಸಲವೇನಲ್ಲ ಎಂಬುದನ್ನು ರಾಜ್ಯದ ಜನತೆ ಗಮನಿಸಬೇಕೆಂದು ವಿವರಿಸಿದ್ದಾರೆ.
ಬಿಜೆಪಿ ಹಾಗೂ ಒಕ್ಕೂಟ ಸರಕಾರಗಳು ರಾಜ್ಯ ಸರಕಾರದ ಮೇಲೆ ನಡೆಸುತ್ತಿರುವ ಪ್ರಜಾಪ್ರಭುತ್ವ ಹಾಗೂ ಜನವಿರೋದಿ ಈ ದುರ್ಧಾಳಿಗಳನ್ನು ಈ ಕೂಡಲೆ ನಿಲ್ಲಿಸುವಂತೆ ಆಗ್ರಹಿಸಿ ಅವರು, ಎಲ್ಲ ಪ್ರಜಾಪ್ರಭುತ್ವ ಪ್ರೇಮಿಗಳು ಬಿಜೆಪಿಯ ಇಂತಹ ಪ್ರಜಾಪ್ರಭುತ್ವ ವಿರೋಧಿ ದುರ್ನಡೆಯನ್ನು ಪ್ರತಿರೋದಿಸಲು ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು