6:12 AM Wednesday5 - November 2025
ಬ್ರೇಕಿಂಗ್ ನ್ಯೂಸ್
ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ…

ಇತ್ತೀಚಿನ ಸುದ್ದಿ

7 ಬಿಲ್ ಗಳನ್ನು ಅನುಮೋದಿಸಲು ರಾಷ್ಟ್ರಪತಿಗಳಲ್ಲಿ ಮನವಿ: ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ

24/06/2025, 22:56

ನವದೆಹಲಿ(reporterkarnataka.com): ರಾಷ್ಟ್ರಪತಿಗಳಿಂದ ಅನುಮೋದನೆಯಾಗದಿರುವ ಏಳು ಬಿಲ್ ಗಳ ಬಗ್ಗೆ ರಾಷ್ಟ್ರಪತಿಗಳನ್ನು ಇಂದು ಭೇಟಿ ಮಾಡಿ ಚರ್ಚಿಸಲಾಗಿದೆ. ಬಿಲ್ಲುಗಳನ್ನು ಸಂಬಂಧಪಟ್ಟ ಇಲಾಖೆಗಳಿಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದು, ಅವುಗಳನ್ನು ತರಿಸಿ ಅನುಮೋದನೆ ನೀಡಬೇಕೆಂದು ರಾಷ್ಟ್ರಪತಿಗಳಿಗೆ ಮನವಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.


ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, ವಾರದ ಹಿಂದೆ 16ನೇ ಹಣಕಾಸು ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರನ್ನು ಭೇಟಿ ಮಾಡಿದ್ದು, ಎರಡನೇ ಹೆಚ್ಚುವರಿ ಮನವಿಯನ್ನು ಕೊಟ್ಟು, 14ನೇ ಹಣಕಾಸು ಆಯೋಗದಲ್ಲಿ 4.7% ಅಡ್ಡವಾಗಿ ತೆರಿಗೆ ಹಂಚಿಕೆಯಾಗಿತ್ತು. 15ನೇ ಹಣಕಾಸು ಆಯೋಗದಲ್ಲಿ 3.6% ಆಗಿದೆ. ಶೇಕಡಾ 1.1% ಕಡಿಮೆಯಾಗಿದ್ದು, ಇದು ಒಟ್ಟಾರೆ ಅನುದಾನ ಹಂಚಿಕೆಯಲ್ಲಿ ಶೇ. 23% ಗಿಂತಲೂ ಕಡಿಮೆಯಾಗಿದೆ. 5 ವರ್ಷಗಳಲ್ಲಿ ಒಟ್ಟು 80000 ಕೋಟಿ ಕಡಿಮೆಯಾಗಿದೆ ಎಂದರು.

*ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ:*
ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ 63 ಸಾವಿರ ಕೋಟಿ, ಅನ್ಯಾಯವಾಗಿದೆ. ರಾಜ್ಯಕ್ಕೆ ವಿಶೇಷ ಅನುದಾನ 5495 ಕೋಟಿ ಮೀಸಲಿಡಿಲಾಗಿತ್ತು. ಪೆರಿಫೆರಲ್ ರಿಂಗ್ ರೋಡ್ ಗೆ 3000 ಕೋಟಿ, ಬೆಂಗಳೂರಿನ ಕೆರೆಗಳ ಅಭಿವೃದ್ಧಿಗಾಗಿ 3000ಕೋಟಿ ಸೇರಿದಂತೆ ಒಟ್ಟು 11495 ಕೋಟಿ ಅನುದಾನ ಘೋಷಣೆ ಮಾಡಲಾಗಿತ್ತು. ಒಟ್ಟಾರೆಯಾಗಿ 80000 ಕೋಟಿ ನಮಗೆ ಕಡಿಮೆಯಾಗಿದೆ. ಇದು ಬಹಳ ದೊಡ್ಡ ಮೊತ್ತವಾಗಿದೆ ಎಂಡ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

*ರಾಜ್ಯ ದೇಶದ ಆರ್ಥಿಕ ಬೆಳವಣಿಗೆಗೆ ಹೆಚ್ಚಿನ ಕೊಡುಗೆ ನೀಡುತ್ತಿದೆ:*
ದೇಶದ ಜನಸಂಖ್ಯೆಯಲ್ಲಿ ಕರ್ನಾಟಕದ ಜನಸಂಖ್ಯೆ 5% ರಷ್ಟಿದೆ. ಕರ್ನಾಟಕ 8.7% ಜಿಡಿಪಿಗೆ ಕೊಡುಗೆ ನೀಡುತ್ತಿದ್ದೇವೆ. 2011-12ರಲ್ಲಿ 7.6% ಇದ್ದದ್ದು, ಈಗ 8.7% ಕೊಡುಗೆ ನೀಡುತ್ತಿದೆ. ದೇಶಕ್ಕೆ ಜಿಎಸ್ ಟಿ ಕೊಡುಗೆ ನೀಡುವುದರಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ. ಜಿ.ಡಿ. ಪಿ ನಲ್ಲಿ ನಮ್ಮ ರಾಜ್ಯ ದೇಶದಲ್ಲಿ ಮೂರನೇ ಸ್ಥಾನದಲ್ಲಿದೆ. ಹಾಗಾಗಿ ಯಾವ ರಾಜ್ಯ ಹೆಚ್ಚು ಆರ್ಥಿಕ ಬೆಳವಣಿಗೆಗೆ ಕೊಡುಗೆ ನೀಡುತ್ತಿದೆ ಎನ್ನುವುದನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಕೋರಲಾಗಿದೆ ಎಂದರು.

*ಹಣಕಾಸಿನ ಕಾರ್ಯಕ್ಷಮತೆ ತೋರದ ರಾಜ್ಯಗಳಿಗೆ ವಿತ್ತೀಯ ಕೊರತೆ ಅನುದಾನ-ಕೇಂದ್ರದ ಕ್ರಮ ಸರಿಯಿಲ್ಲ:*
ತಲಾವಾರು ಆದಾಯವನ್ನು ಪರಿಗಣಿಸುವ ಮಾನದಂಡವನ್ನು ಶೇ.45 ರಿಂದ ಶೇ. 20 ಕ್ಕೆ ಇಳಿಸಬೇಕೆಂದು ಕೋರಲಾಗಿದೆ. ಕೇರಳ, ಆಂಧ್ರ, ತಮಿಳುನಾಡು ರಾಜ್ಯಗಳಿಗೆ ನೀಡಿದಂತೆ ಆದಾಯ ಕೊರತೆ ಅನುದಾನವನ್ನು ಕರ್ನಾಟಕಕ್ಕೂ ನೀಡಬೇಕು. ಇಲ್ಲವೇ ಯಾವುದೇ ರಾಜ್ಯಗಳಿಗೆ ನೀಡಬಾರದು. ರಾಜಸ್ವ ಹೆಚ್ಚಳದಲ್ಲಿ ಖರ್ಚಿಗಿಂತ ಆದಾಯ ಹೆಚ್ಚಿದ್ದು, ವಿತ್ತೀಯ ಕೊರತೆಯಲ್ಲಿ ಆದಾಯಕ್ಕಿಂತ ಖರ್ಚು ಹೆಚ್ಚಿರುತ್ತದೆ. ರಾಜಸ್ವ ಹೆಚ್ಚಳದಲ್ಲಿದ್ದ ಕರ್ನಾಟಕ ಕಳೆದ ವರ್ಷದಿಂದ ವಿತ್ತೀಯ ಕೊರತೆ ಎದುರಿಸುತ್ತಿದ್ದು, ಮುಂದಿನ ವರ್ಷಕ್ಕೆ ಈ ಪರಿಸ್ಥಿತಿ ಸುಧಾರಿಸಲಿದೆ. ನಿರಂತರವಾಗಿ ವಿತ್ತೀಯ ಕೊರತೆಯಲ್ಲಿರುವ ರಾಜ್ಯಗಳಿಗೆ ವಿತ್ತೀಯ ಕೊರತೆ ಅನುದಾನವನ್ಹು ನೀಡಲಾಗುತ್ತದೆ. ಹಣಕಾಸಿನ ಕಾರ್ಯಕ್ಷಮತೆ ತೋರದಿರುವ ರಾಜ್ಯಗಳಿಗೆ ವಿತ್ತೀಯ ಕೊರತೆ ಅನುದಾನವನ್ನು ನೀಡುತ್ತಿರುವ ಕೇಂದ್ರದ ಕ್ರಮ ಸರಿಯಾದುದಲ್ಲ ಎಂದರು.

*ವಿಶೇಷ ಅನುದಾನಕ್ಕೆ ಮನವಿ:*
ಬೆಂಗಳೂರು ಜಾಗತಿಕ ನಗರವಾಗಿದ್ದು, ನಗರದ ಬಂಡವಾಳ ಕಾರ್ಯಗಳಿಗೆ 1.15 ಲಕ್ಷ ಕೋಟಿ ಬೇಕಾಗಿದ್ದು, ಇದಕ್ಕಾಗಿ ವಿಶೇಷ ಅನುದಾನ ನೀಡುವಂತೆ ಕೋರಲಾಗಿದೆ. ಮಲೆನಾಡು ಮತ್ತು ಪಶ್ಚಿಮ ಘಟ್ಟಗಳ ಪ್ರದೇಶಗಳಲ್ಲಿ ಪ್ರವಾಹದಿಂದಾಗುವ ಅನಾಹುತಗಳನ್ನು ನಿಭಾಯಿಸಲು ವಿಶೇಷ ಅನುದಾನ, ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಅನುದಾನ ನೀಡುವಂತೆ ಕೋರಲಾಗಿದೆ.

*ರಾಜ್ಯದ ಮನವಿಯನ್ನು ಪರಿಶೀಲಿಸುವ ಕೇಂದ್ರ ವಿತ್ತಸಚಿವರ ಭರವಸೆ:*
ರಾಜ್ಯದ ಮನವಿಗೆ ಕೇಂದ್ರ ವಿತ್ತ ಸಚಿವರು ಸ್ಪಂದಿಸಿದರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ರಾಜ್ಯಕ್ಕೆ ಅಗತ್ಯವಿರುವ ವಿಶೇಷ ಅನುದಾನ ನೀಡುವಂತೆ ಮನವಿ ಮಾಡಲಾಗಿದೆಯೇ ಹೊರತು ಆರೋಪ ಮಾಡಿಲ್ಲ. ರಾಜ್ಯಕ್ಕೆ ಅನ್ಯಾಯವಾಗಿದ್ದರೆ, ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂಬ ಭರವಸೆಯನ್ನು ಕೇಂದ್ರ ವಿತ್ತಸಚಿವರು ನೀಡಿರುವುದಾಗಿ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು