ಇತ್ತೀಚಿನ ಸುದ್ದಿ
ಸಿಎಂ ಸಿದ್ಧರಾಮಯ್ಯ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
18/11/2025, 11:56
ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಪಾರ್ವತಿ ಅವರಿಗೆ ಶ್ವಾಸಕೋಶ ಸಂಬಂಧಿತ ತೊಂದರೆ ಕಾಣಿಸಿಕೊಂಡಿದ್ದು, ವೈದ್ಯರು ತಕ್ಷಣ ಚಿಕಿತ್ಸೆ ನೀಡುತ್ತಿದ್ದಾರೆ. ಈಗಾಗಲೇ ತಜ್ಞರ ತಂಡ ಚಿಕಿತ್ಸೆ ನೀಡುತ್ತಿದ್ದು, ಅವರ ಸ್ಥಿತಿ ಮೇಲ್ವಿಚಾರಣೆಯಲ್ಲಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಈ ಮಾಹಿತಿ ತಿಳಿದ ಕೂಡಲೇ ದೆಹಲಿಯಲ್ಲಿ ಅಧಿಕೃತ ಕಾರ್ಯಕ್ರಮದಲ್ಲಿದ್ದ ಸಿಎಂ ಸಿದ್ದರಾಮಯ್ಯ ತುರ್ತುವಾಗಿ ರಾಜ್ಯಕ್ಕೆ ಪ್ರಯಾಣ ಬೆಳೆಸಿದ್ದಾರೆ. ಅವರು ಇನ್ನೂ ಕೆಲವು ಗಂಟೆಗಳಲ್ಲಿ ಬೆಂಗಳೂರಿಗೆ ತಲುಪುವ ನಿರೀಕ್ಷೆಯಿದ್ದು, ತಲುಪಿದ ತಕ್ಷಣ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ ಎಂಬ ಮಾಹಿತಿ ದೊರಕಿದೆ.
ಪಾರ್ವತಿ ಸಿದ್ದರಾಮಯ್ಯ ಅವರ ಆರೋಗ್ಯ ಸ್ಥಿತಿ ಕುರಿತಾಗಿ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.












