8:05 PM Sunday8 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಸಿಎಂ ತವರಿನಲ್ಲೇ ಚುನಾವಣಾ ಬಹಿಷ್ಕಾರದ ಎಚ್ಚರಿಕೆ: ಪ್ರಚಾರದ ವೇಳೆ ಯತೀಂದ್ರ ಸಿದ್ದರಾಮಯ್ಯರ ತರಾಟೆಗೆ ತೆಗೆದುಕೊಂಡ ಪ್ರತಿಭಟನಾಕಾರರು

08/04/2024, 12:06

*ನಮ್ಮ ಬೇಡಿಕೆ ಈಡೇರದಿದ್ದರೆ ನಮ್ಮ ಮೂರು ಗ್ರಾಮಗಳಲ್ಲಿ ಚುನಾವಣೆ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ ನೂರಾರು ಪ್ರತಿಭಟನಾಕಾರರು*

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಚಾಮರಾಜನಗರ ಲೋಕಸಭಾ ಚುನಾವಣಾ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಪರ ಚುನಾವಣಾ ಪ್ರಚಾರ ಕೈಗೊಂಡಿದ್ದ ಮಾಜಿ ಶಾಸಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ನಂಜನಗೂಡು ತಾಲೂಕು ಮಲ್ಲುಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪ್ರಚಾರ ಮುಗಿಸಿ ಅದೇ ಗ್ರಾಮದಲ್ಲಿರುವ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯ ಮುಂಭಾಗ ಕಳೆದ ಎರಡು ತಿಂಗಳುಗಳಿಂದ ತಮ್ಮ ಬೇಡಿಕೆಗಾಗಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಪ್ರತಿಭಟನಾಕಾರರನ್ನು ಭೇಟಿ ಮಾಡಿದ ಸಂದರ್ಭ ಪ್ರತಿಭಟನಾಕಾರರು ಅವರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.


ಪ್ರತಿಭಟನಾಕಾರರನ್ನು ಭೇಟಿ ಮಾಡಿ ಓಲೈಸಲು ಮುಂದಾದ ಯತೀಂದ್ರ ಅವರಿಗೆ ಹಿಗ್ಗಾ ಮಗ್ಗಾ ತರಾಟೆಗೆ ತೆಗೆದುಕೊಂಡ ಪ್ರತಿಭಟನಾಕಾರರು,ಚುನಾವಣೆಗೋಸ್ಕರ ಇಲ್ಲಿಗೆ ಬಂದಿದ್ದೀರಿ. ಇಲ್ಲದಿದ್ದರೆ ನೀವು ಯಾವುದೇ ಕಾರಣಕ್ಕೂ ಬರುತ್ತಿರಲಿಲ್ಲ ಎಂದು ಛೇಡಿಸಿದರು.
ಕಾರ್ಖಾನೆಯವರು ನಮ್ಮ ಮಾತನ್ನು ಕೇಳುತ್ತಿಲ್ಲ. ಇದನ್ನು ನಮ್ಮ ತಂದೆ ಯವರ ಗಮನಕ್ಕೆ ತರುವುದಾಗಿ ಎಂದು ಹೇಳುತ್ತಿದ್ದಂತೆ ಕುಪಿತಗೊಂಡ ಪ್ರತಿಭಟನಾಕಾರರು ಇನ್ನೂ ಈ ವಿಚಾರವನ್ನು ನಿಮ್ಮ ತಂದೆಯವರ ಗಮನಕ್ಕೆ ತಂದಿಲ್ಲವಾ ಎಂದು ಅವರ ವಿರುದ್ಧ ವಾಗ್ದಾಳಿ ನಡೆಸಿದರು.
ಇದನ್ನು ಖಂಡಿಸಿ ನಮ್ಮ ಮೂರು ಗ್ರಾಮಗಳಲ್ಲಿ ಚುನಾವಣೆ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದರು. ಪ್ರತಿಭಟನಕಾರರ ವಾಗ್ದಾಳಿಗೆ ತತ್ತರಿಸಿದ ಯತೀಂದ್ರ ಸಿದ್ದರಾಮಯ್ಯ ಬಂದ ದಾರಿಗೆ ಸುಂಕವಿಲ್ಲದಂತೆ ಅಲ್ಲಿಂದ ತರಾತುರಿಯಲ್ಲಿ ಕಾಲ್ಕಿತ್ತರು.

ಇತ್ತೀಚಿನ ಸುದ್ದಿ

ಜಾಹೀರಾತು