ಇತ್ತೀಚಿನ ಸುದ್ದಿ
ಸಿಎಂ ತವರು ವರುಣ ಕ್ಷೇತ್ರದಲ್ಲಿ ಶಾಸಕರು, ಸಂಸದರ ಸಮಾಗಮ: ರೈತರ ಸಮಸ್ಯೆ ಆಲಿಸಿದ ಜನಪ್ರತಿನಿಧಿಗಳು
24/01/2025, 23:47
ಮೋಹನ್ ನಂಜನಗೂಡು ಮೈಸೂರು
info.reporterkarnataka@gmail.com
ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದ ತಾಂಡವಪುರ ಗ್ರಾಮದಲ್ಲಿ ಜನಪ್ರತಿನಿಧಿಗಳು ಮತ್ತು ರೈತರ ಮುಖಾಮುಖಿ ಕಾರ್ಯಕ್ರಮ ರಾಜ್ಯಕ್ಕೆ ಮಾದರಿಯಾಗಿದೆ.
ಏಕೀಕರಣದ ಹಾದಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಆಯೋಜಿಸಿದ್ದ ಜನಪ್ರತಿನಿಧಿಗಳು ಮತ್ತು ರೈತರ ಮುಖಾಮುಖಿ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ, ಸಂಸದ ಸುನೀಲ್ ಬೋಸ್, ಶಾಸಕರಾದ ದರ್ಶನ್ ಧ್ರುವನಾರಾಯಣ್, ಗಣೇಶ್ ಪ್ರಸಾದ್ ಸೇರಿದಂತೆ ಅಧಿಕಾರಿಗಳು ಮುಖಾಮುಖಿಯಾಗಿ ರೈತರ ಸಮಸ್ಯೆಗಳನ್ನು ಬಗೆಹರಿಸಲು ಪಣ ತೊಟ್ಟಿದ್ದಾರೆ.
ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾಧ್ಯಕ್ಷ ವಿದ್ಯಾಸಾಗರ್, ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಏಕೀಕರಣ ಸಮಿತಿಯ ರಾಜ್ಯ ಮುಖಂಡ ಪಚ್ಚೆ ನಂಜುಂಡಸ್ವಾಮಿ ನೇತೃತ್ವದಲ್ಲಿ ಬೃಹತ್ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.
ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ರೈತರೊಂದಿಗೆ ಸುದೀರ್ಘವಾಗಿ ಚರ್ಚೆ ನಡೆಸಲಾಯಿತು. ತಮ್ಮ ಸಮಸ್ಯೆ ಹಾಗೂ ಹಾಕ್ಕೊತ್ತಾಯಗಳನ್ನು ಶಾಸಕರು ಮತ್ತು ಸಂಸದರ ಮುಂದಿಟ್ಟರು. ಕ್ಷೇತ್ರದ ಜನರ ಸಮಸ್ಯೆಗಳಿಗೆ ಆದಷ್ಟು ಬೇಗ ಸೂಕ್ತ ಪರಿಹಾರ ಒದಗಿಸಿಕೊಡಲಾಗುವುದು ಎಂದು ಜನಪ್ರತಿನಿಧಿಗಳು ರೈತರಿಗೆ ಭರವಸೆ ನೀಡಿದ್ದಾರೆ.
ಕಾರ್ಯಕ್ರಮದಲ್ಲಿ ಸಂಸದ ಸುನೀಲ್ ಬೋಸ್, ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ, ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಏಕೀಕರಣ ಸಮಿತಿಯ ರಾಜ್ಯ ಮುಖಂಡ ಪಚ್ಚೆ ನಂಜುಂಡಸ್ವಾಮಿ, ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾಧ್ಯಕ್ಷ ವಿದ್ಯಾಸಾಗರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಮ್ಮಾವು ರಘು, ತಾಲ್ಲೂಕು ಅಧ್ಯಕ್ಷ ಸತೀಶ್ ರಾವ್, ರಂಗಸ್ವಾಮಿ, ಉಪ್ಪನಹಳ್ಳಿ ದೇವರಾಜ್, ಶ್ವೇತಾ, ಮಹದೇವನಾಯಕ, ಶಂಕರನಾಯಕ, ಮೋಹನ್, ಸೇರಿದಂತೆ ಹಲವರು ಭಾಗವಹಿಸಿದ್ದರು.