8:15 PM Tuesday18 - February 2025
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ ಮಾಜಿ ಶಾಸಕರಿಂದ ಗೂಂಡಾಗಿರಿ?: ವೀರಣ್ಣ ಚರಂತಿಮಠ ಸಹಿತ 4 ಮಂದಿ ವಿರುದ್ದ… ನೈತಿಕ ಅಧಃಪತನದತ್ತ ಸಾಗಿದೆಯೇ ಕನ್ನಡ ವಿಶ್ವವಿದ್ಯಾಲಯ?: ಇದು ಎಂ.ಫಿಲ್, ಪಿಎಚ್‌ಡಿ ಮಾರಾಟಕ್ಕಿಟ್ಟ ಅಂಗಡಿಯಾಗುವುದು… Accident | ಮೂಡಿಗೆರೆ: ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಸವಾರ ಗಂಭೀರ… Chikkamagaluru | ಮುಳ್ಳಯ್ಯನಗಿರಿ ಮತ್ತು ದತ್ತಪೀಠದ ಗಿರಿಶ್ರೇಣಿಯಲ್ಲಿ ಕಾಡ್ಗಿಚ್ಚು; ಶೋಲಾರಣ್ಯ ನಾಶ ಭೀತಿ BBMP | ಎಲ್ಲ ಶುದ್ದ ಕುಡಿಯುವ ನೀರಿನ ಘಟಕಗಳ ವರದಿ ವಾರದೊಳಗೆ ಕೊಡಿ:… State Budget | ವಿಧಾನ ಮಂಡಲದ ಅಧಿವೇಶನ ಮಾರ್ಚ್ 3ರಿಂದ ಆರಂಭ: 7ರಂದು… ಎನ್.ಆರ್.ಪುರ: ಭದ್ರಾ ನದಿಯಲ್ಲಿ ಈಜಲು ಹೋದ ಯುವಕ ನೀರುಪಾಲು; ಶವಕ್ಕಾಗಿ ಶೋಧ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಶಾಶ್ವತ ರಸ್ತೆಗಾಗಿ ವೈಟ್ ಟ್ಯಾಪಿಂಗ್ 1700 ಕೋಟಿ ವೆಚ್ಚದ… ನಂಜನಗೂಡು: 1 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ದರ್ಶನ್… ಮೆಟ್ರೊ ದರ ಏರಿಕೆಗೆ ರಾಜ್ಯ ಸರಕಾರವೇ ಶಿಫಾರಸ್ಸು ಮಾಡಿದೆ: ಮಾಜಿ ಸಿಎಂ ಬಸವರಾಜ…

ಇತ್ತೀಚಿನ ಸುದ್ದಿ

ಸಿಎಂ ವಿರುದ್ದದ ವಿರೋಧ ಪಕ್ಷಗಳ ರಾಜಕೀಯ ಷಡ್ಯಂತ್ರಕ್ಕೆ ಸೋಲು: ಸಚಿವ ಎನ್‌. ಎಸ್‌. ಭೋಸರಾಜು

07/02/2025, 21:28

ಬೆಂಗಳೂರು(reporterkarnataka.com): ಮುಡಾ ಎಂಬ ಸುಳ್ಳು ಪ್ರಕರಣವನ್ನು ಮುಂದಿಟ್ಟುಕೊಂಡು ಸಿಎಂ ಸಿದ್ದರಾಮಯ್ಯನವರ ಹೆಸರಿಗೆ ಮಸಿ ಬಳಿಯುವ ಹಾಗೂ ಜನಪರ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ವಿರೋಧ ಪಕ್ಷಗಳ ರಾಜಕೀಯ ಷಡ್ಯಂತ್ರಕ್ಕೆ ಸೋಲಾಗಿದೆ. ಲೋಕಾಯುಕ್ತ ಸಂಸ್ಥೆ ಕಾನೂನು ಬದ್ದವಾಗಿ ತನಿಖೆ ನಡೆಸಲಿದ್ದು ಸದ್ಯದಲ್ಲೇ ಸತ್ಯ ಹೊರಬೀಳಲಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ಪ್ರತಿಕ್ರಿಯಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ಇಂದು ಹೈಕೋರ್ಟ್‌ ನೀಡಿರುವ ತೀರ್ಪು ಬಹಳ ಮಹತ್ವದ್ದಾಗಿದೆ.
ಸಿಬಿಐ ಹಾಗೂ ಇಡಿಯಂತಹ ಸಂಸ್ಥೆಗಳನ್ನು ಮುಂದಿಟ್ಟುಕೊಂಡು ರಾಜಕೀಯ ಎದುರಾಳಿಗಳನ್ನು ಹಣಿಯಬಹುದು ಎಂಬ ಬಿಜೆಪಿ ಲೆಕ್ಕಾಚಾರಕ್ಕೆ ಹೈಕೋರ್ಟ್‌ನ ಈ ತೀರ್ಪು ಎಚ್ಚರಿಕೆಯಾಗಿದೆ. ತಡವಾದರೂ ಸತ್ಯಕ್ಕೆ ಜಯ ಸಿಗುತ್ತದೆ ಎಂಬುದು ರುಜುವಾತಾಗಿದೆ.
ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದಾಗ ಅಸಾಧ್ಯವೆಂದು ಅಣಕವಾಡಿದ್ದ ಬಿಜೆಪಿ ಮತ್ತು ಜೆಡಿಎಸ್‌ ನಾಯಕರಿಗೆ ಈಗ ಸಿದ್ದರಾಮಯ್ಯನವರು ನುಡಿದಂತೆ ನಡೆಯುತ್ತಿರುವುದನ್ನು ಸಹಿಸಲು ಸಾಧ್ಯವಾಗುತ್ತಿಲ್ಲ. ಬಡವರು ಹಾಗೂ ಮಧ್ಯಮ ವರ್ಗದ ಪಾಲಿಗೆ ಉತ್ತಮ ಆಡಳಿತ ನೀಡುತ್ತಿರುವುದನ್ನು ನೋಡಲು ಸಾಧ್ಯವಾಗುತ್ತಿಲ್ಲ. ಹೇಗಾದರು ಮಾಡಿ ಸಿದ್ದರಾಮಯ್ಯನವರ ಹೆಸರಿಗೆ ಮಸಿ ಬಳಿಯಬೇಕು, ಜನಪರ ಸರ್ಕಾರಕ್ಕೆ ಕೆಟ್ಟ ಹೆಸರು ತರಬೇಕು ಎಂದು ಪ್ರಯತ್ನಿಸುತ್ತಿದ್ದಾರೆ. ಆ ಪ್ರಯತ್ನಗಳ ಪೈಕಿ ಮುಡಾ ಪ್ರಕರಣ ಕೂಡ ಒಂದಾಗಿದೆ.
ಇಡಿ ನೋಟೀಸ್ ಕೊಡಬೇಕಾಗಿರುವುದು, 2021ರಲ್ಲಿ ಸಿದ್ದರಾಮಯ್ಯನವರ ಕುಟುಂಬಕ್ಕೆ 14 ಸೈಟ್‌ ಕೊಟ್ಟ ಬಸವರಾಜ ಬೊಮ್ಮಾಯಿ ಅವರಿಗೆ? ಮುಡಾಗೆ ಸಂಬಂಧಿಸಿ ಜಮೀನಿನ ನೋಂದಣಿ, 50:50 ನೀಡಿಕೆ ರೂಲ್ಸ್‌, ಸೈಟ್‌ ನೀಡಿದ್ದು ಎಲ್ಲವೂ ಬಿಜೆಪಿ ಸರ್ಕಾರದ ಅವಧಿಯಲ್ಲೇ ನಡೆದಿರುವಾಗ ಸಿದ್ದರಾಮಯ್ಯನವರನ್ನು ಗುರಿಯಾಗಿಸಿಕೊಂಡಿರುವುದು ರಾಜಕೀಯ ದುರುದ್ದೇಶವಲ್ಲದೆ ಮತ್ತೇನು? ಎಂದು ಪ್ರಶ್ನಿಸಿದ್ದಾರೆ.
ರಾಜ್ಯ ಬಿಜೆಪಿಯ ಸ್ಥಿತಿ ಮನೆಯೊಂದು ನೂರು ಬಾಗಿಲು ಎಂಬಂತಾಗಿದೆ. ಬಿಜೆಪಿ ಆಂತರಿಕ ಕಲಹವನ್ನು ಮುಚ್ಚಿಹಾಕಲು ಮುಡಾ ವಿಚಾರವನ್ನು ಮುಂದಿಟ್ಟು ಸುಖಾಸುಮ್ಮನೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತ ಜನರನ್ನು ದಿಕ್ಕು ತಪ್ಪಿಸುವ ಪ್ರಯತ್ನದಲ್ಲಿ ವಿರೋಧ ಪಕ್ಷಗಳು ಸಫಲರಾಗುವುದಿಲ್ಲ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು