5:43 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಪ್ರಧಾನಿ ಜತೆ ಸಭೆಗೆ ಸಿಎಂ ಗೈರು ಆಗಿರುವುದು ಕಾಂಗ್ರೆಸ್ ಯೋಗ್ಯತೆ ಸಾಬೀತುಪಡಿಸಿದೆ: ವಿಜಯೇಂದ್ರ

31/03/2026, 19:54

ಬೆಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಜತೆ ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗೈರು ಆಗಿರುವುದು ಕಾಂಗ್ರೆಸ್ ಯೋಗ್ಯತೆ ಸಾಬೀತುಪಡಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಭಿಪ್ರಾಯಪಟ್ಟಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ದೇಶದ ಎಲ್ಲ ಸಿಎಂ ಜತೆ ಆನ್‌ಲೈನ್ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಯುದ್ಧದ ಬಗ್ಗೆ ಮಾತುಕತೆ ನಡೆದಿತ್ತು. ಆದರೆ ಸಿಎಂ ಸಿದ್ದರಾಮಯ್ಯ ಈ ಸಭೆಗೆ ಗೈರಾಗಿದ್ದರು.
ಈ ಬಗ್ಗೆ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಯುದ್ಧದ ಸಂದರ್ಭದಲ್ಲಿ ರಾಷ್ಟ್ರದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಹತ್ವದ ವಿಡಿಯೋ ಸಂವಾದ ಏರ್ಪಡಿಸಿದ್ದು, ಸಂಕಷ್ಟದ ಸಂದರ್ಭವನ್ನು ಹೇಗೆ ಎದುರಿಸಬೇಕೆಂಬ ಮಹತ್ವದ ಮಾತುಕತೆ ನಡೆಸುತ್ತಿದ್ದಾರೆ. ಆದರೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂತಹ ಮಹತ್ವದ ಸಂವಾದದಿಂದ ದೂರ ಉಳಿದು ಕರ್ನಾಟಕದ ಜನತೆಗೆ ದ್ರೋಹ ಬಗೆದಿದ್ದಾರೆ ಎನ್ನದೇ ವಿಧಿಯಿಲ್ಲ! ಎಂದು ವಿಜಯೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿಧಾನ ಮಂಡಲದಲ್ಲಿ ಭಾಷಣ ಮಾಡುವ ವೇಳೆ ಹಾಗೂ ಮಾಧ್ಯಮಗಳ ಮುಂದೆ ಕೇಂದ್ರ ಸರಕಾರದ ವಿರುದ್ಧ ಪುಂಖಾನುಪುಂಖವಾಗಿ ಟೀಕೆ ಮಾಡುವ ಮುಖ್ಯಮಂತ್ರಿಗಳು ನಿಜವಾಗಿಯೂ ಜನಪರ ಕಾಳಜಿ ಇದ್ದರೆ ಪ್ರಧಾನಿಗಳ ಜತೆ ಸಂವಾದದಲ್ಲಿ ಭಾಗಿ ಆಗಬೇಕಿತ್ತು. ಯುದ್ಧದ ಸಂದರ್ಭದಲ್ಲಿ ಕರ್ನಾಟಕದ ಜನರಿಗೆ ತೊಂದರೆ ಆಗದಂತೆ ಯಾವ ರೀತಿ ಕ್ರಮ ಅನುಸರಿಸಬಹುದು ಎಂಬ ಸಲಹೆಗಳನ್ನೂ ನೀಡಬಹುದಿತ್ತು. ಅಲ್ಲದೇ ಕೇಂದ್ರ ಸರಕಾರ ಕೈಗೊಂಡಿರುವ ಕ್ರಮಗಳಿಗೆ ಪೂಕರವಾಗಿ ರಾಜ್ಯದಲ್ಲಿ ಯಾವ ರೀತಿ ಕ್ರಮ ಕೈಗೊಳ್ಳಬಹುದು ಎಂಬ ವಿಷಯದ ಕುರಿತು ಚರ್ಚೆ ಮಾಡಬಹುದಿತ್ತು ಎಂದು ವಿಜಯೇಂದ್ರ ಹೇಳಿದ್ದಾರೆ.
ಆದರೆ ಉತ್ತರಕುಮಾರನ ಪೌರುಷ ತೋರುವ ಮುಖ್ಯಮಂತ್ರಿಗಳು ಪ್ರಧಾನಿಗಳ ಜತೆ ಮುಖಾಮುಖಿ ಆಗದೇ ಸಂವಾದದಿಂದ ದೂರ ಉಳಿದಿರುವುದು ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷದ ಯೋಗ್ಯತೆಯನ್ನು ಮತ್ತೊಮ್ಮೆ ಸಾಬೀತು ಮಾಡಿದೆ. ಸಿದ್ದರಾಮಯ್ಯ ಅವರು ೭ ಕೋಟಿ ಕನ್ನಡಿಗರ ಪ್ರತಿನಿಧಿ ಎಂಬುದನ್ನು ಮರೆತು ಕೇವಲ ಕಾಂಗ್ರೆಸ್ ಕಚೇರಿ, ಸರಕಾರಿ ಬಂಗಲೆಗೆ ಸೀಮಿತ ಆಗಿರುವುದು ಕನ್ನಡಿಗರ ದುರಾದೃಷ್ಟ! ಎಂದು ವಿಜಯೇಂದ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು