3:25 AM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ

08/11/2025, 11:46

ಮೈಸೂರು(reporterkarnataka.com): ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲಾಗದ ಮುಖ್ಯಮಂತ್ರಿಗಳು ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿದ್ದಾರೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು.
ಮೈಸೂರಿನಲ್ಲಿ ಶುಕ್ರವಾರ ದಿಶಾ ಸಮಿತಿ ಸಭೆ ಆರಂಭಕ್ಕೆ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು; ರೈತರ ಕಷ್ಟಕ್ಕೆ ಸ್ಪಂದಿಸಬೇಕು ಎನ್ನುವ ಇರಾದೆ ಈ ಸರ್ಕಾರಕ್ಕೆ ಇಲ್ಲ. ಪ್ರತಿಯೊಂದು ವಿಷಯವನ್ನೂ ಕೇಂದ್ರದ ಮೇಲೆ ಹಾಕಿ ನುಣಚಿಕೊಳ್ಳುವ ಕೆಲಸ ಮಾಡುತ್ತಿದೆ ಎಂದರು.
ಮುಖ್ಯಮಂತ್ರಿಗಳು ಮನಸು ಮಾಡಿದರೆ ಇದು ಅತ್ಯಂತ ಚಿಕ್ಕ‌ ವಿಚಾರ. ಕೆಲವು ನಿಮಿಷಗಳಲ್ಲಿ ಬಗೆಹರಿಸಬಹುದಾದ ವಿಷಯ ಇದಾಗಿದೆ. ಆದರೆ, ಸಿಎಂ ಅವರು ಪ್ರತಿಯೊಂದಕ್ಕೂ ರಾಜಕೀಯ ಮಾಡುತ್ತಿದ್ದಾರೆ. ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನ ಮಂತ್ರಿಗೆ ಪತ್ರ ಬರೆದಿದ್ದಾರೆ. ದೇಶದ ಯಾವ ರಾಜ್ಯದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲು ಪ್ರಧಾನಮಂತ್ರಿ ಮಧ್ಯಸ್ಥಿಕೆ ವಹಿಸಿದ್ದಾರೆ ಹೇಳಿ? ಎಂದು ಕೇಂದ್ರ ಸಚಿವರು ಪ್ರಶ್ನಿಸಿದರು.
ಈ ಸಮಸ್ಯೆ ವಿಚಾರದಲ್ಲಿ ಜನ ಪ್ರತಿನಿಧಿಗಳನ್ನು ಕರೆದು ಮಾತನಾಡುವುದು ಏನಿದೆ? ಮುಖ್ಯಮಂತ್ರಿಗಳೇ ನೇರವಾಗಿ ನಿರ್ಧಾರ ಕೈಗೊಳ್ಳಬಹುದು. ನೇರವಾಗಿ ಬೆಳೆಗಾರರ ಜತೆ ಮಾತನಾಡಿ ಬಿಕ್ಕಟ್ಟನ್ನು ಬಗೆಹರಿಸಬಹುದು. ಅದನ್ನು ಮಾಡದೇ ಕೇವಲ ರಾಜಕೀಯ ಮಾಡುವುದರಲ್ಲಿ ಈ ಸರಕಾರ ಮುಳುಗಿದೆ ಎಂದು ಅವರು ಟೀಕಿಸಿದರು.
ಸಿಎಂ ನೇರವಾಗಿ, ಮುಕ್ತವಾಗಿ ಕಬ್ಬು ಬೆಳೆಗಾರರ ಪರವಾಗಿ ನಿರ್ಧಾರ ತೆಗೆದುಕೊಳ್ಳಬಹುದು. ಸಿಎಂ ಅವರು ಆ ಕೆಲಸ ಮಾಡುವುದು ಬಿಟ್ಟು ಕೇಂದ್ರದ ಮೇಲೆ ಆರೋಪ ಮಾಡುತ್ತಿದ್ದಾರೆ. ಬೆಳಗಾವಿಯ ಸ್ಥಳೀಯ ಜನಪ್ರತಿನಿಧಿಗಳು ಮತ್ತು ಸಕ್ಕರೆ ಲಾಬಿಯ ಒತ್ತಡಕ್ಕೆ ಅವರು ಮಣಿದಿರುವ ಸಾಧ್ಯತೆ ಇದೆ. ಅಂತಹ ಒತ್ತಡಕ್ಕೆ ಮಣಿಯದೆ ಮೊದಲು ಬೆಳೆಗಾರರ ಹಿತ ಕಾಯುವ ಕೆಲಸ ಮಾಡಬೇಕು ಎಂದು ಸಚಿವ ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.

*ಜೆಡಿಎಸ್ ನಾಯಕರು ಸಕ್ಕರೆ ಕಾರ್ಖಾನೆ ಹೊಂದಿಲ್ಲ:*
ಬೆಳಗಾವಿಯ ಜಿಲ್ಲೆಯಲ್ಲಿ ಎಲ್ಲಾ ಪಕ್ಷಗಳ ನಾಯಕರು ಸಕ್ಕರೆ ಕಾರ್ಖಾನೆಗಳನ್ನು ಹೊಂದಿದ್ದಾರೆ ಎಂದು ಕೆಲ ಮಾಧ್ಯಮಗಳಲ್ಲಿ ವರದಿ ಆಗಿದ್ದನ್ನು ಗಮನಿಸಿದ್ದೇನೆ. ಜೆಡಿಎಸ್ ಪಕ್ಷದ ಯಾವ ನಾಯಕ ಕೂಡ ಕಬ್ಬು ಕಾರ್ಖಾನೆ ಹೊಂದಿಲ್ಲ. ಆ ಪೈಕಿ ಬಂಡೆಪ್ಪ ಕಾಶಂಪೂರ ಅವರ ಕಾರ್ಖಾನೆ ಒಂದಿತ್ತು. ಕೆಲವು ದಿನಗಳ ಹಿಂದೆ ಅವರು ಅದನ್ನು ಕೂಡ ಮಾರಿದ್ದಾರೆ. ಹೀಗಾಗಿ ನಮ್ಮ ಪಕ್ಷದಲ್ಲಿ ಯಾರೊಬ್ಬರ ಬಳಿಯೂ ಸಕ್ಕರೆ ಕಾರ್ಖಾನೆ ಇಲ್ಲ ಎಂದು ಕೇಂದ್ರ ಸಚಿವರು ಹೇಳಿದರು.

*ನವೆಂಬರ್ ನಲ್ಲಿ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ:*
ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆ ಹಾಗೂ ನವೆಂಬರ್ ಕ್ರಾಂತಿ ಬಗ್ಗೆ ಕೇಂದ್ರ ಸಚಿವರ ಗಮನ ಸೆಳೆದಾಗ ಅವರು ಹೇಳಿದ್ದಿಷ್ಟು; ನವೆಂಬರ್ ನಲ್ಲಿ ಯಾವ ಕ್ರಾಂತಿಯೂ ಆಗಲ್ಲ ವಾಂತಿಯೂ ಆಗಲ್ಲ. ನನಗೆ ಸಿದ್ದರಾಮಯ್ಯನವರ ಗುಣ ಗೊತ್ತಿದೆ. ಅವರು ನಮ್ಮ ಪಕ್ಷದಲ್ಲೇ ಇದ್ದಾಗಲೇ ಅವರ ಗುಣ ತಿಳಿದುಕೊಂಡಿದ್ದೇನೆ. ಹೀಗಾಗಿ ಯಾವ ಬದಲಾವಣೆಯೂ ಅಗುವುದಿಲ್ಲ ಎಂದರು.
ಡಿ.ಕೆ ಶಿವಕುಮಾರ್ ಯಾವಾಗಲೂ ದೇವರ ಜೊತೆ ಮಾತನಾಡುತ್ತಾರೆ. ದೇವರು ಅವರಿಗೆ ಏನೇನು ಹೇಳಿದ್ದಾನೋ ನಮಗೇನು ಗೊತ್ತು? ಅದೇನಿದ್ದರೂ ಡಿ.ಕೆ. ಶಿವಕುಮಾರ್ ಹಾಗೂ ದೇವರಿಗೆ ಸಂಬಂಧಪಟ್ಟ ವಿಚಾರ. ಹಾಗಂತ ಡಿಕೆಶಿ ಅವವ್ರೇ ಹೇಳಿದ್ದಾರೆ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
2028ಕ್ಕೆ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಡಿ.ಕೆ. ಶಿವಕುಮಾರ್ ಹೇಳಿಕೆ ವಿಚಾರ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವರು:
20, 10 ವರ್ಷ ನಾವೇ ಎಂದು ಹೇಳಿದವರು ಏನಾಗಿದ್ದಾರೆ ಎಂಬುದು ನನಗೆ ಗೊತ್ತಿದೆ. 2028ಕ್ಕೆ ಏನೇನಾಗುತ್ತೊ ಯಾರಿಗೆ ಗೊತ್ತು ಬಿಡಿ ಎಂದು ಲೇವಡಿ ಮಾಡಿದರು.
ಸಿಎಂ ಸಿದ್ದರಾಮಯ್ಯ ಅವರು ಮೈಸೂರು ನಗರವನ್ನು ಗ್ರೇಟರ್ ಮೈಸೂರು ಮಾಡುತ್ತಾರೆ ಎಂದು ಹೇಳಿದ್ದಾರೆ ಎಂಬ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವರು; ಇದು ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನಡುವಿನ ಪೈಪೋಟಿ. ಡಿಕೆಶಿ ಮೇಲಿನ ಪೈಪೋಟಿಗಾಗಿ ಸಿದ್ದರಾಮಯ್ಯ ಅವರು ಗ್ರೇಟರ್ ಮೈಸೂರು ಘೋಷಣೆ ಮಾಡಿದ್ದಾರೆ. ಅಲ್ಲಿ ಡಿ.ಕೆ. ಶಿವಕುಮಾರ್ ಅವರು ಗ್ರೇಟರ್ ಬೆಂಗಳೂರು ಘೋಷಣೆ ಮಾಡಿದ್ದಾರೆ. ಅದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಅವರು ಗ್ರೇಟರ್ ಮೈಸೂರು ಎನ್ನುತ್ತಿದ್ದಾರೆ. ಯಾವ ಗ್ರೇಟರ್ ಕೂಡಾ ಆಗುವುದಿಲ್ಲ. ಇವರು ಸುಮ್ಮನೆ ಕಾಲಹರಣ ಮಾಡಿಕೊಂಡು ಹೋಗುತ್ತಿದ್ದಾರೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು