9:32 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

CMTI | ಬೆಂಗಳೂರಿನ ಕೇಂದ್ರೀಯ ಉತ್ಪಾದನಾ ತಂತ್ರಜ್ಞಾನ ಸಂಸ್ಥೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ

28/06/2025, 22:09

ಬೆಂಗಳೂರು(reporterkarnataka.com): ದೇಶೀಯ ವಿಜ್ಞಾನಿಗಳು, ತಂತ್ರಜ್ಞರ ಸಾಧನೆ, ಹೆಗ್ಗಳಿಕೆ ಏನು ಎಂಬುದು ಆಪರೇಶನ್ ಸಿಂಧೂರದ ಮೂಲಕ ಜಗತ್ತಿಗೆ ಗೊತ್ತಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಬೆಂಗಳೂರಿನ ತುಮಕೂರು ರಸ್ತೆಯಲ್ಲಿ ಕೇಂದ್ರೀಯ ಉತ್ಪಾದನಾ ತಂತ್ರಜ್ಞಾನ ಸಂಸ್ಥೆಯ 64ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬರುವ ಮೊದಲು ಅನೇಕ ವಿಷಯಗಳಲ್ಲಿ ನಾವು ವಿದೇಶಗಳನ್ನು ಅವಲಂಬಿಸಬೇಕಾಗಿತ್ತು. ಆ ನಂತರ ಅಂತಹ ಪರಿಸ್ಥಿತಿ ಬದಲಾಗಿದ್ದು, ಪ್ರತಿಯೊಂದು ಸ್ವದೇಶಿಯವಾಗಿಯೇ ಉತ್ಪಾದನೆ ಮಾಡಲಾಗುತ್ತಿದೆ ಎಂದರು.
ರಕ್ಷಣಾ ಪಡೆಗಳಿಗೆ ಅಗತ್ಯವಾದ ಅನೇಕ ಶಸ್ತ್ರಾಸ್ತ್ರಗಳನ್ನು ಮೇಕ್ ಇನ್ ಇಂಡಿಯಾ, ಆತ್ಮನಿರ್ಭರ್ ಭಾರತ ಕಾರ್ಯಕ್ರಮಗಳ ಮೂಲಕ ತಯಾರು ಮಾಡಲಾಗುತ್ತಿದೆ. ಭಾರತ ಇಂದು ರಕ್ಷಣಾ ವಲಯದಲ್ಲಿ ಸಶಕ್ತ, ಬಲಿಷ್ಠ ದೇಶವಾಗಿ ಹೊರಹೊಮ್ಮಿದೆ. ಅದಕ್ಕೆ ಮೋದಿ ಅವರ ದೂರದೃಷ್ಟಿ ಹಾಗೂ ನಮ್ಮ ವಿಜ್ಞಾನಿಗಳು, ತಂತ್ರಜ್ಞರು ಕಾರಣ ಎಂದು ಸಚಿವರು ಹೇಳಿದರು.
ಪ್ರತಿಭಾವಂತ ಯುವಕರು, ಯುವತಿಯರ ದುಡಿಮೆಯ ಫಲದಿಂದ ನಮ್ಮ ದೇಶದಲ್ಲಿ ತಯಾರು ಮಾಡಿರುವ ಯುದ್ಧದ ಉಪಕರಣಗಳು ಜಗತ್ತಿನ ಬೇರೆ ಯಾವ ದೇಶಕ್ಕೂ ಕಡಿಮೆ ಇಲ್ಲ. ಎಲ್ಲರಿಗೂ ಸರಿಸಾಟಿ ಆಗುವಂತಹ ಅಸ್ತ್ರಗಳು ನಮ್ಮ ಬತ್ತಳಿಕೆಯಲ್ಲಿ ಇವೆ ಎಂದರೆ ಅದಕ್ಕೆ ನಿಮ್ಮೆಲ್ಲರ ಶ್ರಮವೇ ಕಾರಣ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.
ನಮ್ಮ ಶಸ್ತ್ರಾಸ್ತ್ರಗಳ ಶಕ್ತಿ ಏನು ಎಂಬುದು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಅಪಪರೇಶನ್ ಸಿಂಧೂರ ಜಗತ್ತಿಗೆ ತೋರಿಸಿಕೊಟ್ಟಿದೆ ಎಂದು ಸಚಿವರು ನುಡಿದರು.
ಸೆಮಿಕಂಡಕ್ಟರ್ ಕ್ಷೇತ್ರಕ್ಕೆ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ದೊಡ್ಡ ಮಟ್ಟದಲ್ಲಿ ಸಂಶೋಧನೆ ನಡೆಸುತ್ತಿದೆ. ಸೆಮಿಕಂಡಕ್ಟರ್ ಹಾಗೂ ಕೃತಕ ಬುದ್ಧಿಮತ್ತೆ ಕ್ಷೇತ್ರಗಳಿಗೆ ಬೆಂಗಳೂರು ನೆಚ್ಚಿನ ತಾಣವಾಗಿದೆ. ಸಮರ್ಪಕ ಮಾನವ ಸಂಪನ್ಮೂಲ ಹಾಗೂ ಅದಕ್ಕೆ ಬೇಕಾದ ಪೂರಕ ವ್ಯವಸ್ಥೆ ಇರುವುದರಿಂದ ಈ ಕ್ಷೇತ್ರಗಳಿಗೆ ಬೆಂಗಳೂರಿನಲ್ಲಿ ಭಾರೀ ಅವಕಾಶಗಳು ಇವೆ ಎಂದು ಇದೇ ಸಂದರ್ಭದಲ್ಲಿ ಸಚಿವರು ಹೇಳಿದರು.


ಕೇಂದ್ರೀಯ ಉತ್ಪಾದನಾ ತಂತ್ರಜ್ಞಾನ ಸಂಸ್ಥೆ ಕೇಂದ್ರದ ಸರ್ಕಾರದ ಬೃಹತ್ ಕೈಗಾರಿಕೆ ಸಚಿವಾಲಯದ ಅಧೀನದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಸಂಸ್ಥೆ ಆಗಿದೆ. ರಕ್ಷಣೆ, ಬಾಹ್ಯಾಕಾಶ ಸೇರಿದಂತೆ ವಿವಿಧ ಕೈಗಾರಿಕೆ ಅಗತ್ಯಗಳಿಗೆ ತಕ್ಕಂತೆ ಇಲ್ಲಿ ಉತ್ಪಾದನೆ ನಡೆಯುತ್ತಿದೆ. ಅನೇಕ ಯುವ ವಿಜ್ಞಾನಿಗಳು, ತಂತ್ರಜ್ಞರು ಇಲ್ಲಿ ರಾಷ್ಟ್ರ ನಿರ್ಮಾಣಕ್ಕಾಗಿ ಕೆಲಸ ಮಾಡುತ್ತಿರುವುದು ನನಗೆ ಸಂತೋಷ ಉಂಟು ಮಾಡಿದೆ ಎಂದು ಅವರು ತಿಳಿಸಿದರು.
ಸಿಎಂಟಿಐ ಆಡಳಿತ ಮಂಡಳಿ ಅಧ್ಯಕ್ಷ ಕ್ರಿಸ್ ಗೋಪಾಲಕೃಷ್ಣನ್, ನಿರ್ದೇಶಕ ಡಾ. ನಾಗಹನುಮಯ್ಯ ಮುಂತಾದವರು ವೇದಿಕೆಯಲ್ಲಿದ್ದರು.
ಸಮಾರಂಭದ ನಂತರ ಕೇಂದ್ರ ಸಚಿವರು ‘ ಪ್ರಮಾಣೀಕೃತ ಉಲ್ಲೇಖ ಧಾತು ಸೌಲಭ್ಯ’ ಕೇಂದ್ರವನ್ನು ಉದ್ಘಾಟಿಸಿದರು. ಇದಾದ ಮೇಲೆ ಏರೋಸ್ಪೇಸ್ ಪ್ರಯೋಗಾಲಯ, ಸಂವೇದಕ ತಂತ್ರಜ್ಞಾನ ಅಭಿವೃದ್ಧಿ ಕೇಂದ್ರ ಸೇರಿ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು