11:24 PM Friday18 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

Co- Operative | ಕಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ನೂತನ ಅಧ್ಯಕ್ಷ ಕೆ.ಎಂ. ನಾಗರಾಜು, ಉಪಾಧ್ಯಕ್ಷ ಎಂ. ನಂಜುಂಡಸ್ವಾಮಿ

03/03/2025, 22:32

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕಿನ ಕಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಕೆಎಂ ನಾಗರಾಜು ಹಾಗೂ ಉಪಾಧ್ಯಕ್ಷರಾಗಿ ಎಂ ನಂಜುಂಡಸ್ವಾಮಿ ಅವಿರೋಧ ಆಯ್ಕೆಯಾಗಿದ್ದಾರೆ.
ಅವಧಿ ಮುಗಿದು ತೆರವಾಗಿದ್ದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನ ಗಳಿಗೆ ಇಂದು ಚುನಾವಣೆ ನಡೆಯಿತು. ಒಟ್ಟು 12 ಮಂದಿ ಸದಸ್ಯರಿರುವ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ 9 ಮಂದಿ ನಿರ್ದೇಶಕರು ಹಾಜರಾಗಿದ್ದು ಮೂರು ಮಂದಿ ಗೈರು ಹಾಜರಾಗಿದ್ದರು. ತಾಲೂಕು ಸಹಕಾರ ಇಲಾಖೆ ಅಭಿವೃದ್ಧಿ ಅಧಿಕಾರಿ ಪ್ರಸಾದ್ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿರುತ್ತಾರೆ.
ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕೆ.ಎಂ. ನಾಗರಾಜು ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಎಂ. ನಂಜುಂಡಸ್ವಾಮಿ ನಾಮಪತ್ರ ಸಲ್ಲಿಸಿದ್ದು ಬೇರೆ ಯಾರೊಬ್ಬರೂ ನಾಮಪತ್ರ ಸಲ್ಲಿಸದೆ ಇದ್ದ ಕಾರಣ ಇವರನ್ನು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಗಳು ಘೋಷಣೆ ಮಾಡಿದರು.
ಚುನಾವಣಾ ಅಧಿಕಾರಿ ಪ್ರಸಾದ್ ಮಾತನಾಡಿ ಚುನಾವಣಾ ಪ್ರಕ್ರಿಯೆ ಬಗ್ಗೆ ವಿವರಿಸಿ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ಮಾಲಾರ್ಪಣೆ ಮಾಡಿ ಅಭಿನಂದಿಸಿದರು. ಇದೇ ಸಂದರ್ಭ ಸಹಕಾರ ಸಂಘದ ವತಿಯಿಂದ ನೂತನ ಅಧ್ಯಕ್ಷರು ಹಾಗು ಉಪಾಧ್ಯಕ್ಷರಿಗೆ ಮತ್ತು ನಿರ್ದೇಶಕರುಗಳಿಗೆ ಮಾಲಾಪಣೆ ಮಾಡಿ ಅಭಿನಂದಿಸಲಾಯಿತು.

ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಮಾತನಾಡಿ ಎಲ್ಲಾ ನಿರ್ದೇಶಕರ ಮತ್ತು ಮುಖಂಡರ ಸಹಕಾರದೊಂದಿಗೆ ಸರ್ಕಾರದಿಂದ ಸಾಲ ಸೌಲಭ್ಯಗಳನ್ನು ಕೊಡಿಸುವ ಮೂಲಕ ರೈತರ ಹಾಗೂ ಸಹಕಾರ ಸಂಘದ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿ ನಮ್ಮ ಆಯ್ಕೆಗೆ ಸಹಕರಿಸಿದ ಎಲ್ಲಾ ನಿರ್ದೇಶಕರು, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಹೇಶ್ ಮುಖಂಡರಾದ ಕೆ.ಡಿ ಮಂಜು ಚೋಳ ರಾಜ್ ಅವರನ್ನು ಅಭಿನಂದಿಸುವುದಾಗಿ ತಿಳಿಸಿದರು.
ಬ್ಯಾಂಕ್ ಪ್ರತಿನಿಧಿ ನಿರಂಜನ್, ನಿರ್ದೇಶಕರುಗಳಾದ ಚೋಳ ರಾಜ್, ಮಸಗೆ ರಾಜು, ಪ್ರಭಾಕರ್,ಲೋಕೇಶ್
ಕುಮಾರ್,ಲೀಲಾಕುಮಾರಿ,ದೇವಮ್ಮ ಸೇರಿದಂತೆ ಸಂಘದ ಕಾರ್ಯದರ್ಶಿ ಸಿದ್ಧನಾಯಕ, ಸಹ ಕಾರ್ಯದರ್ಶಿ ಸಾಕಮ್ಮ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು