ಇತ್ತೀಚಿನ ಸುದ್ದಿ
ಕಾಫಿನಾಡ ಬಯಲು ಸೀಮೆಯಲ್ಲಿ ಭಾರಿ ಮಳೆ ಅಬ್ಬರ: ತರೀಕೆರೆ ರಾಷ್ಟ್ರೀಯ ಹೆದ್ದಾರಿಯಲ್ಲಿ 2 ಅಡಿ ನೀರು; ವಾಹನ ಸಂಚಾರಕ್ಕೆ ತೊಂದರೆ
17/05/2022, 07:56
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಕಾಫಿನಾಡ ಬಯಲು ಸೀಮೆ ಭಾಗದಲ್ಲಿ ಮಳೆ ಅಬ್ಬರ ಜೋರಾಗಿದ್ದು,ಭಾರೀ ಮಳೆಗೆ ರಾಷ್ಟ್ರೀಯ ಹೆದ್ದಾರಿ ಜಲಾವೃತವಾಗಿದೆ.
ತರೀಕೆರೆ ಪಟ್ಟಣದ ರಸ್ತೆಗಳು ನೀರಿನಿಂದ ಮುಳುಗಿವೆ. ರಾಷ್ಟ್ರೀಯ ಹೆದ್ದಾರಿಯಲ್ಲಿ 2 ಅಡಿಗಳಷ್ಟು ಮಳೆ ನೀರು ನಿಂತಿವೆ.
ಸಾರ್ವಜನಿಕರು ಹಾಗೂ ವಾಹನ ಸವಾರ ಇದರಿಂದ ಸಂಕಷ್ಟ ಎದುರಿಸುವಂತಾಗಿದೆ.
ತರೀಕೆರೆಯ ಬಿ.ಹೆಚ್.ರಸ್ತೆ ಸಂಪೂರ್ಣ ನೀರಿನಿಂದ ಜಲಾವೃತವಾಗಿದೆ. ಶಿವಮೊಗ್ಗ – ಬೆಂಗಳೂರು ಮಾರ್ಗದ ರಾ.ಹೆ. 206 ರಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ.