ಇತ್ತೀಚಿನ ಸುದ್ದಿ
ಕಾಫಿನಾಡಿನಲ್ಲಿ ಹೆಚ್ಚುತ್ತಿರುವ ಹುಲಿ ದಾಳಿ: ಸಾರ್ವಜನಿಕರಲ್ಲಿ ಭಯದ ವಾತಾವರಣ
14/11/2021, 13:19
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಹುಲಿ ದಾಳಿಗೆ ಮತ್ತೊಂದು ಕರು ಬಲಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಹೆಗ್ಗುಡ್ಲು ನಲ್ಲಿ ನಡೆದಿದೆ.ಹೆಗ್ಗುಡ್ಲು ಗ್ರಾಮದ ರತ್ನಮ್ಮ ಎಂಬ ಮಹಿಳೆಗೆ ಸೇರಿದ್ದ ಕರುವಾಗಿದೆ. ಜಮೀನಿನಲ್ಲಿದ್ದ ಕರುವಿನ ಮೇಲೆ ಹುಲಿ ದಾಳಿ ಮಾಡಿದೆ.
ಕಳೆದ ಎರಡು ಮೂರು ವರ್ಷ ಗಳಿಂದ ಮೂಡಿಗೆರೆ ತಾಲೂಕಿನ ಬಿ.ಹೊಸಹಳ್ಳಿ, ಹೆಗ್ಗುಡ್ಲು, ಭಾರತಿ ಬೈಲ್, ಹೊಕ್ಕಳ್ಳಿ, ಕುಂದೂರು, ಮತ್ತಿಕಟ್ಟೆ,ಸುತ್ತಾ ಮುತ್ತಾ ಗ್ರಾಮಗಳಲ್ಲಿ ಹಸುಗಳ ಮೇಲೆ ದಾಳಿ ಮಾಡುತ್ತಿದ್ದ ಘಟನೆ ನಡೆಯುತ್ತಿದೆ. ಕಳೆದ ಮೂರು ನಾಲ್ಕು ವರ್ಷಗಳಿಂದ ಹಲವಾರು ಹಸುಗಳು ಹುಲಿಗೆ ಆಹಾರವಾಗಿವೆ.
ಸುತ್ತಮುತ್ತಲಿನ ಗ್ರಾಮಗಳಲ್ಲಿ ಭಯದ ವಾತಾವರಣ ನಿರ್ಮಾಣ ಮಾಡಿದೆ.
ಆದಷ್ಟು ಬೇಗ ಅರಣ್ಯ ಅಧಿಕಾರಿಗಳು ಹುಲಿ ಸೆರೆ ಹಿಡಿಯದಿದ್ದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಬಣಕಲ್ ಗ್ರಾಮ ಪಂಚಾಯಿತಿ ಅಧ್ಯಕ್ಷ ಸತೀಶ್ ಎಚ್ಚರಿಕೆ ನೀಡಿದ್ದಾರೆ














