ಇತ್ತೀಚಿನ ಸುದ್ದಿ
ಕಾಫಿನಾಡಿನಲ್ಲಿ ವಿದ್ಯುತ್ ಶಾಕ್ ತಗುಲಿ ಕಾಡಾನೆ ಸಾವು; ಮೆಸ್ಕಾಂನ ಮೂವರು ಅಧಿಕಾರಿಗಳ ವಿರುದ್ದ ಪ್ರಕರಣ ದಾಖಲು
12/11/2024, 12:42

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಆಲ್ದೂರು ಸಮೀಪ
ಬೀಟಮ್ಮ ಗ್ಯಾಂಗಿನ ಸಲಗ ಸಾವನ್ನಪ್ಪಿದ ಪ್ರಕರಣ ಸಂಬಂಧಿಸಿದಂತೆ ಮೆಸ್ಕಾಂನ ಮೂವರು ಅಧಿಕಾರಿಗಳ ವಿರುದ್ದ ಪ್ರಕರಣ ದಾಖಲಿಸಲಾಗಿದೆ.
ವಿದ್ಯುತ್ ತಂತಿ ತಗುಲಿ ಕಾಡಾನೆ ಮೃತಪಟ್ಟಿತ್ತು.
ಅರಣ್ಯಾಧಿಕಾರಿ ಹರೀಶ್ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಲಾಗಿದೆ.
ಮೆಸ್ಕಾಂನ ಜ್ಯೂನಿಯರ್ ಎಂಜಿನಿಯರ್, ಅಸಿಸ್ಟೆಂಟ್ ಎಂಜಿನಿಯರ್, ಎಕ್ಸಿಕ್ಯೂಟಿವ್ ಎಂಜಿನಿಯರ್ ವಿರುದ್ದ ಪ್ರಕರಣ ದಾಖಲಾಗಿದೆ.
ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಈ ಮೂವರ ವಿರುದ್ದ ಪ್ರಕರಣ ದಾಖಲಾಗಿದೆ.