11:35 PM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ಕಾಫಿನಾಡಲ್ಲಿ ದತ್ತಜಯಂತಿಗೆ ಚಾಲನೆ: ಸಿ.ಟಿ. ರವಿ ಸಹಿತ 4 ಸಾವಿರಕ್ಕೂ ಹೆಚ್ಚು ದತ್ತ ಭಕ್ತರಿಂದ ಮಾಲಾಧಾರಣೆ; 25ರಂದು ಶೋಭಾಯಾತ್ರೆ

17/12/2023, 16:59

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterKarnataka@gmail.com

ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ವಿಶ್ವ ಹಿಂದೂ ಪರಿಷತ್, ಬಜರಂಗದಳ ನೇತೃತ್ವದಲ್ಲಿ
ಕಾಫಿನಾಡ ದತ್ತಜಯಂತಿಗೆ ಮಾಲಾಧಾರಣೆ ಮೂಲಕ ಭಾನುವಾರ ಅಧಿಕೃತ ಚಾಲನೆ ನೀಡಲಾಯಿತು.
ಚಿಕ್ಕಮಗಳೂರಿನ ಕಾಮಧೇನು ಗಣಪತಿ ದೇಗುಲದಲ್ಲಿ ನೂರಾರು ಮಂದಿ ಮಾಲಾಧಾರಣೆ ಮಾಡಿದರು. ಮಾಜಿ ಶಾಸಕ ಸಿ.ಟಿ.ರವಿ ಅವರು ಈ ಸಂದರ್ಭದಲ್ಲಿ ಮಾಲಾಧಾರಣೆ ಮಾಡಿದರು.
ಜಿಲ್ಲಾದ್ಯಂತ 4 ಸಾವಿರಕ್ಕೂ ಅಧಿಕ ದತ್ತ ಭಕ್ತರು ಮಾಲಾಧಾರಣೆ ಮಾಡಿದರು.


ಇಂದಿನಿಂದ 10 ದಿನಗಳ ಕಾಲ ದತ್ತಜಯಂತಿ ಉತ್ಸವ ನಡೆಯಲಿದೆ. 24ರಂದು ಅನುಸೂಯ ಜಯಂತಿ, 25ಕ್ಕೆ ಚಿಕ್ಕಮಗಳೂರು ನಗರದಲ್ಲಿ ಬೃಹತ್ ಶೋಭಾಯಾತ್ರೆ ನಡೆಯಲಿದೆ. 26ರಂದು 20 ಸಾವಿರಕ್ಕೂ ಅಧಿಕ ಭಕ್ತರಿಂದ ದತ್ತಪಾದುಕೆ ದರ್ಶನ ನಡೆಯಲಿದೆ. ಮುಂಜಾಗೃತ ಕ್ರಮವಾಗಿ 22 ರಿಂದ 26ರವರೆಗೆ ಪ್ರವಾಸಿಗರಿಗೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ.

ಇತ್ತೀಚಿನ ಸುದ್ದಿ

ಜಾಹೀರಾತು