3:36 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕಾಫಿನಾಡಿನಲ್ಲಿ ಮುಂದುವರಿದ ವ್ಯಾಘ್ರ ಆರ್ಭಟ: ಹುಲಿ ದಾಳಿಗೆ ಬಣಕಲ್ ಸಮೀಪ ಹಸು ಸಾವು

06/04/2022, 09:55

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ತಾಲೂಕಿನ ಬಣಕಲ್ ಸಮೀಪದ ಬಿ.ಹೊಸಳ್ಳಿಯಲ್ಲಿ ಹುಲಿ ದಾಳಿ ಮುಂದುವರೆದಿದ್ದು ಹಸು ಸಾವನ್ನಪ್ಪಿದ ಘಟನೆ ನಡೆದಿದೆ

ಕಳೆದ ಎರಡು ವರ್ಷಗಳಿಂದ ಬಿ.ಹೊಸಳ್ಳಿಯಲ್ಲಿ ನಿರಂತರ ಹುಲಿ ದಾಳಿ ಮಾಡಿ ಅನೇಕ ಹಸುಗಳನ್ನು ಕೊಂದು ಹಾಕಿದೆ. ಸೋಮವಾರ ಗ್ರಾಮದ ಗೋಪಾಲ್ ಅವರ ಹಸು ಮೇಯಲು ಬಿಟ್ಟಿದ್ದಾಗ ಹುಲಿ ದಾಳಿ ಮಾಡಿ ಸಾಯಿಸಿದೆ. ಸ್ಥಳಕ್ಕೆ ಅರಣ್ಯ ರಕ್ಷಕ ಮೊಹಸಿನ್, ಜಾನುವಾರು ಅಧಿಕಾರಿ ಅಜೀಜ್ ಅಹಮ್ಮದ್  ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದ್ದಾರೆ.

ಹುಲಿ ಸ್ಥಳಾಂತರಿಸಲು ಒತ್ತಾಯ: ಬಿ.ಹೊಸಳ್ಳಿ,ಭಾರತೀಬೈಲ್,ಬಾನಳ್ಳಿ ಭಾಗದಲ್ಲಿ ಕಳೆದ ಹಲವು ವರ್ಷಗಳಿಂದ ಹುಲಿ ದಾಳಿ ಸತತವಾಗಿ ನಡೆಯುತ್ತಿದೆ.ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೂ ತಂದು ಸಿಸಿ ಕ್ಯಾಮೆರಾ ಅಳವಡಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.ಗ್ರಾಮದ ಸುತ್ತಮುತ್ತ ಹುಲಿ ಸಂಚಾರದಿಂದ ಶಾಲಾ ಮಕ್ಕಳು, ಕೂಲಿ ಕಾರ್ಮಿಕರು, ಗ್ರಾಮಸ್ಥರು ಓಡಾಡಲು ಭಯ ಪಡುವಂತಾಗಿದೆ. ಸಂಬಂಧಿಸಿದ ಅಧಿಕಾರಿಗಳು ಶೀಘ್ರವೇ ಹುಲಿ ಸ್ಥಳಾಂತರಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು