ಇತ್ತೀಚಿನ ಸುದ್ದಿ
ಕಾಫಿನಾಡಿಗೆ ಇಂದು ಮುಖ್ಯಮಂತ್ರಿ ಬೊಮ್ಮಾಯಿ: ಸಂಜೆ 6 ಗಂಟೆಗೆ ಚಿಕ್ಕಮಗಳೂರು ಹಬ್ಬಕ್ಕೆ ಸಿಎಂ ಚಾಲನೆ
18/01/2023, 11:40
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka.com
ಕಾಫಿನಾಡು ಚಿಕ್ಕಮಗಳೂರಿಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಲಿದ್ದಾರೆ. ಸಂಜೆ 6 ಗಂಟೆಗೆ ಚಿಕ್ಕಮಗಳೂರು ಹಬ್ಬಕ್ಕೆ ಚಾಲನೆ ನೀಡಲಿದ್ದಾರೆ.
ಬೆಳಗ್ಗೆ 11ಕ್ಕೆ ಹೆಲಿಕ್ಯಾಪ್ಟರ್ ಮೂಲಕ ಬೀರೂರಿಗೆ ಆಗಮಿಸುವ ಸಿಎಂ ನಂತರ ಬೀರೂರಿನಲ್ಲಿ ಶಾಸಕ ಬೆಳ್ಳಿ ಪ್ರಕಾಶ್ ಮಗಳ ಮದುವೆಯಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ ಚಿಕ್ಕಮಗಳೂರು ನಗರಕ್ಕೆ ಆಗಮಿಸಲಿರುವರು. 3.30ಕ್ಕೆ ಚಿಕ್ಕಮಗಳೂರು ಹಬ್ಬದ ಉತ್ಸವದ ಮೆರವಣಿಗೆ ವೀಕ್ಷಣೆ ಮಾಡಲಿದ್ದಾರೆ. ಸಿಎಂ ಅವರು
ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಲಿರುವರು.
ಕೃಷಿ ಮೇಳೆ ಸೇರಿದಂತೆ ವಿವಿಧ ಮೇಳಕ್ಕೆ ಚಾಲನೆ ನೀಡಲಿದ್ದಾರೆ.


ಸಂಜೆ 6ಕ್ಕೆ ಚಂದ್ರದ್ರೋಣ ವೇದಿಕೆಯಲ್ಲಿ ಚಿಕ್ಕಮಗಳೂರು ಹಬ್ಬಕ್ಕೆ ಚಾಲನೆ ನೀಡುವರು. ನಗರದ ಸುಭಾಷ್ ಚಂದ್ರ ಬೋಸ್ ಆಟದ ಮೈದಾನದಲ್ಲಿರುವ ಚಂದ್ರದ್ರೋಣ ವೇದಿಕೆ ನಿರ್ಮಿಸಲಾಗಿದೆ. ಕಾರ್ಯಕ್ರಮದ ನಂತರ ಸಿಎಂ
ಬೆಂಗಳೂರು ತೆರಳುವರು.














