6:20 AM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಕಾಫಿನಾಡಿನಲ್ಲಿ ಭಾರೀ ವಾಮಾಚಾರ?: ಹೆಬ್ಬಾಳೆ ಸೇತುವೆ ಬಳಿ ರುಂಡ-ಮುಂಡ ಬೇರ್ಪಟ್ಟ ಕುರಿ-ಮೇಕೆ ಮೃತದೇಹ ಪತ್ತೆ: ಸ್ಥಳಕ್ಕೆ ಪೊಲೀಸರ ಭೇಟಿ

08/02/2024, 10:08

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡಲ್ಲಿ ಭದ್ರಾ ನದಿ ಬಳಿಯೇ ಬೃಹತ್ ವಾಮಾಚಾರ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ವಾಮಾಚಾರಕ್ಕೆ ಕಪ್ಪು ಬಣ್ಣದ ಕುರಿ, ಮೇಕೆಗಳ ಬಲಿ ಕೊಡಲಾಗಿದೆ.


[/video/>
ಕಳಸ ತಾಲೂಕಿನ ಭದ್ರಾ ನದಿಯ ಹೆಬ್ಬಾಳೆ ಸೇತುವೆ ಬಳಿ ನದಿಯಲ್ಲಿ ರುಂಡ-ಮುಂಡ ಬೇರ್ಪಟ್ಟ ಕುರಿ-ಮೇಕೆ ಕಂಡು ಬಂದಿದೆ. ವಾಮಾಚಾರಕ್ಕೆ ಇದನ್ನು ಬಳಸಲಾಗಿದೆ ಎಂದು ಶಂಕಿಸಲಾಗಿದೆ. ಸತ್ತ ಕುರಿ- ಮೇಕೆಯನ್ನು ಕಂಡು ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ.
ಭದ್ರಾ ನದಿಯಲ್ಲಿ ತೇಲುತ್ತಿರುವ ಐದಾರು ಕುರಿ-ಮೇಕೆಗಳ ಶವ ಪತ್ತೆಯಾಗಿದೆ. ನದಿ ದಡದಲ್ಲಿ ವಾಮಾಚಾರಕ್ಕೆ ಬಳಸಿರುವ ವಸ್ತುಗಳಾದ ಕೂದಲು, ಉಗುರು, ಮಣ್ಣಿನ ಬೊಂಬೆಗಳು, ರಕ್ತ ಕಂಡು ಬಂದಿದೆ. ರಾತ್ರಿ ವೇಳೆ ನಡೆದಿರುವ ವಾಮಾಚಾರ, ಸ್ಥಳೀಯ ನಿವಾಸಿಗಳಲ್ಲಿ ಆತಂಕ ಹೆಚ್ಚಿಸಿದೆ. ಹೊರನಾಡಿಗೆ ಹೋಗುವ ಮುಖ್ಯರಸ್ತೆ ಬಳಿಯೇ ಈ ಕೃತ್ಯ ಎಸಗಲಾಗಿದೆ. ಸ್ಥಳಕ್ಕೆ ಕಳಸ ಪೊಲೀಸರು ಭೇಟಿ ನೀಡಿ, ನದಿಯಿಂದ ಕುರಿ ಮೇಕೆಗಳ ಶವ ಹೊರಕ್ಕೆ ತೆಗೆದಿದ್ದಾರೆ. ವಾಮಾಚಾರದ ರಹಸ್ಯ ಭೇದಿಸಲು ಪೊಲೀಸರು ಮುಂದಾಗಿದ್ದಾರೆ.
(ರಿಪೋರ್ಟರ್ ಕರ್ನಾಟಕ ಮೌಢ್ಯ, ಮೂಡನಂಬಿಕೆ, ಕಂದಾಚಾರ, ಮಾಟ- ಮಂತ್ರವನ್ನು ವಿರೋಧಿಸುತ್ತದೆ)

ಇತ್ತೀಚಿನ ಸುದ್ದಿ

ಜಾಹೀರಾತು