ಇತ್ತೀಚಿನ ಸುದ್ದಿ
ಕಾಫಿನಾಡಿನಲ್ಲಿ ಮುಂದುವರಿದ ಕಾಡಾನೆ ದಾಂಧಲೆ: ಒಂಟಿ ಸಲಗದ ದಾಳಿಗೆ ಮಹಿಳೆ ದಾರುಣ ಸಾವು
08/02/2025, 19:58

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಾಡಾನೆ ಮತ್ತು ಕಾಡುಕೋಣದ ದಾಳಿ ಮುಂದುವರಿದಿದ್ದು, ಇದೀಗ ಕಾಡಾನೆಯ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಎನ್.ಆರ್.ಪುರ ತಾಲೂಕಿನ ಕತ್ತಲೇಖಾನ್ ಎಸ್ಟೇಟ್ ನಲ್ಲಿ ಈ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಕೂಲಿ ಕಾರ್ಮಿಕೆ ವಿನೋದಾ (39) ಎಂದು ಗುರುತಿಸಲಾಗಿದೆ.
ಇವರು ವಿಜಯನಗರ ಜಿಲ್ಲೆಯ ಹರಪನಹಳ್ಳಿ ಮೂಲದ ವಿನೋದಾ ಬಾಯಿ ಆಗಿದ್ದಾರೆ.
ಕೂಲಿಗಾಗಿ ವಿಜಯನಗರ ಜಿಲ್ಲೆಯಿಂದ ಕುಟುಂಬ ಬಂದಿತ್ತು. ಇಂದು ಬೆಳಗ್ಗೆ ಕಾಫಿ ಹಣ್ಣು ಕೊಯ್ಯುವಾಗ ಏಕಾಏಕಿ ಕಾಡಾನೆ ದಾಳಿ ಮಾಡಿ ಕೊಂದು ಹಾಕಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ಭೇಟಿ, ಪರಿಶೀಲನೆ ನಡೆಸಿದ್ದಾರೆ.