ಇತ್ತೀಚಿನ ಸುದ್ದಿ
ಕಾಫಿನಾಡು ಬಯಲುಸೀಮೆಯಲ್ಲಿ ಮಳೆ ಅಬ್ಬರ: ಉಕ್ಕಿ ಹರಿದ ಹಳ್ಳ- ಕೊಳ್ಳ, ಜಲಪಾತ
03/06/2022, 22:09
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail
ಕಾಫಿನಾಡ ಚಿಕ್ಕಮಗಳೂರಿನ ಬಯಲುಸೀಮೆ ಭಾಗದಲ್ಲಿ ಮಳೆ ಅಬ್ಬರ ಜೋರಾಗಿದೆ. ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ.
ಮಧ್ಯಾಹ್ನದಿಂದ ಆರಂಭವಾಗಿರುವ ಧಾರಾಕಾರ ಮಳೆಯಿಂದ ಸಾಮಾನ್ಯ ಜನಜೀವನಕ್ಕೆ ತೊಂದರೆಯಾಗಿದೆ. ಚಿಕ್ಕಮಗಳೂರು ತಾಲೂಕಿನ ಸಿಂದಿಗೆರೆಯಲ್ಲಿ ಭಾರೀ ಮಳೆಯಾಗಿದೆ. ಮಳೆ ಅಬ್ಬರಕ್ಕೆ ಹಳ್ಳ- ಕೊಳ್ಳ, ಕಿರು ಜಲಪಾತಗಳು ಧುಮ್ಮಿಕ್ಕಿ ಹರಿಯುತ್ತಿದೆ. ಇಳಿಜಾರು ಪ್ರದೇಶಕ್ಕೆ ಮಳೆ ನೀರು ನುಗ್ಗಿದೆ.