ಇತ್ತೀಚಿನ ಸುದ್ದಿ
ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮೊಳಗಿದ ಚುನಾವಣೆ ಬಹಿಷ್ಕಾರದ ಮೊದಲ ಕೂಗು
19/12/2022, 21:14

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಕಾಫಿ ನಾಡು ಎಂದೇ ಖ್ಯಾತಿ ಪಡೆದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಮೊದಲ ಚುನಾವಣಾ ಬಹಿಷ್ಕಾರದ ಕೂಗು ಮೊಳಗಿದೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹಾಡುಗಾರ ಗ್ರಾಮದಲ್ಲಿ ಗ್ರಾಮಸ್ಥರು ಚುನಾವಣೆ ಬಹಿಷ್ಕಾರದ ಎಚ್ಚರಿಕೆ ರವಾನಿಸಿದ್ದಾರೆ.
ವಾರದ ಹಿಂದೆ ಗ್ರಾಮಸ್ಥರು ಬಹಿಷ್ಕಾರದ ಎಚ್ಚರಿಕೆ ನೀಡಿದ್ದರು.
ರಾಜಕೀಯ ಪಕ್ಷದ ಜವಾಬ್ದಾರಿ ಹುದ್ದೆಗಳಿಗೂ ರಾಜೀನಾಮೆ ನೀಡಿದ್ದರು.
ರಾಜೀನಾಮೆ ನೀಡಿದ್ರೂ ಪರಿಹಾರ ಸಿಗದಿರುವ ಹಿನ್ನೆಲೆಯಲ್ಲಿ ರಸ್ತೆಗಾಗಿ ಆಗ್ರಹಿಸಿದ್ದ ಗ್ರಾಮಸ್ಥರು ಚುನಾವಣೆ ಬಹಿಷ್ಕಾರದ ಅಸ್ತ್ರ ಕೈಗೆತ್ತಿಕೊಂಡಿದ್ದಾರೆ.
ಗಡುವು ನೀಡಿದರೂ ರಸ್ತೆ ಮಾಡಲು ಮುಂದಾಗದ ಹಿನ್ನೆಲೆಯಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಹೊತ್ತು ಗ್ರಾಮಸ್ಥರು ಮೆರವಣಿಗೆ ನಡೆಸಿದರು. ಮೂಲಭೂತ ಸೌಲಭ್ಯಗಳಾದ ರಸ್ತೆ, ಸೇತುವೆಗೆ ಆಗ್ರಹಿಸಿದ್ದರು ಇಲ್ಲಿನ ನಿವಾಸಿಗಳು. ಬಿಜೆಪಿ, ಕಾಂಗ್ರೆಸ್ ಬೂತ್ ಸಮಿತಿಯ ಸದಸ್ಯತ್ವಕ್ಕೆ ರಾಜೀನಾಮೆ ಕೂಡ ನೀಡಿದ್ದಾರೆ.