2:09 PM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಕಾಫಿನಾಡ ಬರಕ್ಕೆ ಮತ್ತೊಬ್ಬ ಬಲಿ: ಮಳೆ ಇಲ್ಲದೆ ಬೆಳೆ ನಾಶಕ್ಕೆ ಮನನೊಂದು ಅಜ್ಜಂಪುರ ರೈತ ಆತ್ಮಹತ್ಯೆ

01/09/2023, 15:01

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಎರಡು ದಿನದಲ್ಲಿ ಇಬ್ಬರು ರೈತರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಳೆ ಇಲ್ಲದೆ ಬೆಳೆನಾಶವಾಗಿ ಸಾಲದ ಶೂಲಕ್ಕೆ ಸಿಲುಕಿದ ಅಜ್ಜಂಪುರ ತಾಲೂಕಿನ ರೈತರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ನಹತ್ಯೆ ಮಾಡಿಕೊಂಡ ರೈತನನ್ನು ಅಜ್ಜಂಪುರ ತಾಲೂಕಿನ ಚಿಕ್ಕನಲ್ಲೂರು ಗ್ರಾಮದ ಪರಮೇಶ್ವರಪ್ಪ (52) ಎಂದು ಗುರುತಿಸಲಾಗಿದೆ.

ಪರಮೇಶ್ವರ ಅವರು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರು 3 ಎಕರೆ ಜಮೀನನಲ್ಲಿ ಹಾಕಿದ್ದ ಈರುಳ್ಳಿ ಬೆಳೆ ಸಂಪೂರ್ಣ ನಾಶವಾಗಿದೆ. ಅವರು ಬ್ಯಾಂಕ್, ಬಡ್ಡಿ ಹಾಗೂ ಕೈಸಾಲ ಸೇರಿ 5 ಲಕ್ಷ ಸಾಲ ಮಾಡಿದ್ದರು.ಸಾಲ ತೀರಿಸಲಾಗದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಿನ್ನೆ ಗಿರಿಯಾಪುರದ ರೈತ ಸತೀಶ್ ಆತ್ಮಹತ್ಯೆಗೆ ಶರಣಾಗಿದ್ದರು. ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು