1:13 AM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಕಾಫಿನಾಡಿನಲ್ಲಿ ದಶಕದ ಬಳಿಕ ಮತ್ತೆ ನಕ್ಸಲ್ ಸದ್ದು:? ಇಬ್ಬರು ಶಂಕಿತ ವ್ಯಕ್ತಿಗಳ ಬಂಧನ; ನಾಡ ಬಂದೂಕು ವಶ

11/11/2024, 20:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ದಶಕಗಳ ಬಳಿಕ ಕಾಫಿನಾಡಿನ‌ ಮಲೆನಾಡು ಭಾಗದಲ್ಲಿ ಮತ್ತೆ ನಕ್ಸಲರ ಸದ್ದು ಕೇಳಲಾರಂಭಿಸಿದೆ. ಇಬ್ಬರು ಶಂಕಿತ ವ್ಯಕ್ತಿಗಳನ್ನು ನಕ್ಸಲ್ ನಿಗ್ರಹ ಪಡೆ (ಎಎನ್ ಎಫ್) ತೀವ್ರ ವಿಚಾರಣೆಗೊಳಪಡಿಸಿದ್ದು, ನಾಡ ಬಂದೂಕು ವಶಪಡಿಸಿಕೊಳ್ಳಲಾಗಿದೆ.
2014ರ ನಂತರ ಮಲೆನಾಡಲ್ಲಿ ಮೊದಲ ಬಾರಿಗೆ ಶಂಕಿತ ನಕ್ಸಲರು ಕಾಣಿಸಿಕೊಂಡಿದ್ದಾರೆ.
ಮಲೆನಾಡಿಗೆ ಆವರಿಸಿದ ಒತ್ತುವರಿ ತೆರೆವು ಹಾಗೂ ಕಸ್ತೂರಿ ರಂಗನ್ ವರದಿ ಭಯದ ಹಿನ್ನೆಲೆಯಲ್ಲಿ ನಕ್ಸಲ್ ಚಟುವಟಿಕೆಗೆ ಮತ್ತೆ ಜೀವ ಬಂದಿದೆ ಎನ್ನಲಾಗಿದೆ. ಈ ಎಲ್ಲ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಶಂಕಿತ ನಕ್ಸಲರು ಗ್ರಾಮಸ್ಥರ ಸಂಪರ್ಕ ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ.
ನಕ್ಸಲ್ ನಿಗ್ರಹ ಪಡೆ ಕೊಪ್ಪ ತಾಲೂಕಿನ ಗಡಿ ಭಾಗದ ಗ್ರಾಮದ ಈ ಇಬ್ಬರು ವ್ಯಕ್ತಿಗಳನ್ನು ವಿಚಾರಣೆಗೊಳಪಡಿಸಿದ್ದಾರೆ. ಕೊಪ್ಪ ತಾಲೂಕಿನ ಯಡಗುಂದ ಮೂಲದ ವ್ಯಕ್ತಿಗಳು ಇವರಾಗಿದ್ದಾರೆ. ಇಬ್ಬರಿಗೆ ಸಂಬಂಧಿಸಿದ ಸ್ಥಳದಲ್ಲಿ ಎಎನ್ ಎಫ್ ಟೀಂ ಶೋಧ ನಡೆಸಿದೆ. ನಾಡ ಬಂದೂಕು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಶೃಂಗೇರಿ ಪೊಲೀಸ್ ಠಾಣೆಗೆ ಕರೆತಂದು ಇಬ್ಬರ ವಿಚಾರಣೆ ನಡೆಸಲಾಗಿದೆ. ನಕ್ಸಲ್ ನಿಗ್ರಹ ಪಡೆಯಿಂದ ಮಲೆನಾಡಲ್ಲಿ ತೀವ್ರ ಶೋಧ ಕಾರ್ಯ ಆರಂಭವಾಗಿದೆ. ಎಎನ್ ಎಫ್ ಎಸ್ಪಿ ಸ್ಥಳದಲ್ಲಿ ಮೊಕ್ಕಂ ಹೂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು