1:43 AM Tuesday22 - July 2025
ಬ್ರೇಕಿಂಗ್ ನ್ಯೂಸ್
Davanagere | ವೀರಶೈವ ಲಿಂಗಾಯತ ಎಲ್ಲ ಗುರು ಭಕ್ತರು ಒಂದಾದರೆ ನಮ್ಮನ್ನು ತಡೆಯುವವರು… Chikkamagaluru | ಬಣಕಲ್ ಪ್ರೌಢ ಶಾಲೆಯಲ್ಲಿ ಲಾಸ್ಟ್ ಬೆಂಚ್ ಸ್ಟೂಡೆಂಟ್ಸ್ ಪರಿಕಲ್ಪನೆಗೆ ಮಂಗಳ:… Kodagu | ಮಹಿಳೆಗೆ ಹಲ್ಲೆ ನಡೆಸಿ ಸರ ಅಪಹರಣ: ಗ್ರಾಮಸ್ಥರ ಕೈಗೆ ಸಿಕ್ಕಿ… ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ… ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ದವಾಗಿ ನಡೆಯಲಿ: ಮಾಜಿ… ಧರ್ಮಸ್ಥಳ ಪ್ರಕರಣ; ಎಸ್‌ಐಟಿ ರಚನೆ ಸ್ವಾಗತಾರ್ಹ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ… ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: ಮುಖ್ಯಮಂತ್ರಿಯಾಗಿ ಆಯ್ಕೆ ವಿಷಯ ಹೈಕಮಾಂಡ್ ಅಂಗಳಕ್ಕೆ

14/05/2023, 21:08

ಬೆಂಗಳೂರು(reporterkarnataka.com): ಒಗ್ಗಟ್ಟಿನಿಂದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ್ದೇವೆ. ಇನ್ನು ಅಧಿಕಾರಕ್ಕಾಗಿ ಒಗ್ಗಟ್ಟು ಮುರಿಯುವುದು ಬೇಡ. ಬಣ ರಾಜಕೀಯ ಮಾಡುವುದು ಬೇಡ. ಶಾಸಕರ ಅಭಿಪ್ರಾಯ ಸಂಗ್ರಹಿಸಿ ಮುಖ್ಯಮಂತ್ರಿ ಆಯ್ಕೆ ಅಧಿಕಾರವನ್ನು ಹೈಕಮಾಂಡಿಗೆ ಬಿಟ್ಟು ಬಿಡೋಣ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಅಭಿಪ್ರಾಯಪಟ್ಟರು.
ಮುಖ್ಯಮಂತ್ರಿ ಆಯ್ಕೆ ಸಂಬಂಧಿ ಸಿದಂತೆ ಬೆಂಗಳೂರಿ ಖಾಸಗಿ ಹೊಟೇಲ್ ನಲ್ಲಿ ಭಾನುವಾರ ನಡೆಯುತ್ತಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರು ಮಾತನಾಡಿದರು.
ಮುಂದಿನ ಮುಖ್ಯಮಂತ್ರಿ ಆಯ್ಕೆ ಕುರಿತಂತೆ ಕಾಂಗ್ರೆಸ್ ನಲ್ಲಿ ತೀವ್ರ ಪೈಪೋಟಿ ನಡೆದಿದೆ. ಸಿದ್ದರಾಮಯ್ಯ ಅವರ ಬೆಂಬಲಿಗರು ಸಿದ್ದರಾಮಯ್ಯ ಅವರಿಗೆ ಸಿಎಂ ಸ್ಥಾನ ಕೊಡಬೇಕೆಂದು ಪಟ್ಟು ಹಿಡಿದರೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕಾರದ ಚುಕ್ಕಾಣಿ ನೀಡುವಂತೆ ಒಕ್ಕಲಿಗರು ಹಕ್ಕೊತ್ತಾಯ ಮಾಡುತ್ತಿದ್ದಾರೆ. ಇವೆಲ್ಲದರ ನಡುವೆ ದಲಿತ ಸಿಎಂ ಕೂಗು ಕೂಡ ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಸಿಎಂ ಅಭ್ಯರ್ಥಿ ಆಯ್ಕೆ ಕಬ್ಬಿಣದ ಕಡಲೆಕಾಯಿ ಆಗಿ ಪರಿಣಮಿಸಿದೆ.

ನಾಯಕನಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಯ್ಕೆಗೊಳ್ಳುವ ಮೂಲಕ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗುವ ಹಾದಿ ಸುಗಮವಾಗಿದೆ.
ಬೆಂಗಳೂರಿನ ಖಾಸಗಿ ಹೊಟೇಲೊಂದರಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಯಿತು. ಆ ಮೂಲಕ ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿ ಯಾಗುವ ಅವಕಾಶ ಒದಗಿ ಬಂದಿದೆ. ರಾಜ್ಯ ವಿಧಾನಸಭೆಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ನಿಚ್ಚಳ ಬಹುಮತ ಸಾಧಿಸಿತ್ತು. ಆಡಳಿತರೂಢ ಬಿಜೆಪಿಗೆ ಹೀನಾಯ ಸೋಲು ಉಂಟಾಗಿತ್ತು. 2013ರಲ್ಲಿ ಸಿದ್ದರಾಮಯ್ಯ ಅವರು ಪ್ರಥಮ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. 5 ವರ್ಷ ಆಡಳಿತ ನಡೆಸಿದ ಅವರ ಕಾಂಗ್ರೆಸ್ ಪಕ್ಷ 2018ರ ಚುನಾವಣೆಯಲ್ಲಿ ಸೋಲು ಅನುಭವಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು