7:09 AM Thursday13 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ಕಾಲೇಜಿನಿಂದ ವಿದ್ಯಾರ್ಥಿನಿ ಅಪಹರಿಸಿ ಸಾಮೂಹಿಕ ಅತ್ಯಾಚಾರ: ಒಬ್ಬನ ಬಂಧನ; ಉಳಿದವರಿಗೆ ಶೋಧ

15/10/2023, 12:56

ಬಳ್ಳಾರಿ(reporterkarnataka.com): ಕಾಲೇಜೊಂದರಲ್ಲಿ ಪದವಿ ಶಿಕ್ಷಣ ಮಾಡುತ್ತಿರುವ ವಿದ್ಯಾರ್ಥಿನಿಯೊಬ್ಬಳನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದ್ದು, ಪ್ರಕರಣ ಸಂಬಂಧಿಸಿದಂತೆ ಒಬ್ಬನ ಬಂಧಿಸಲಾಗಿದೆ. ಉಳಿದ ಆರೋಪಿಗಳ ಪತ್ತೆಗಾಗಿ ಬಲೆ ಬೀಸಲಾಗಿದೆ.
ಪ್ರಮುಖ ಆರೋಪಿ ನವೀನ್ ಎಂಬಾತನನ್ನು ಪೊಲೀಸರು
ಬಂಧಿಸಿದ್ದಾರೆ. ತಲೆ ಮರೆಸಿಕೊಂಡಿರುವ
ಉಳಿದ ಮೂವರು ಆರೋಪಿಗಳಿಗೆ ಬಲೆ ಬೀಸಲಾಗಿದೆ. ಈ ಸಂಬಂಧ ಬಳ್ಳಾರಿ ಮಹಿಳಾ ಠಾಣೆಯಲ್ಲಿ ನಾಲ್ವರ ವಿರುದ್ಧ ಸಂತ್ರಸ್ತ ಯುವತಿಯ ತಂದೆ ದೂರು ದಾಖಲಿಸಿದ್ದಾರೆ. ಬಳ್ಳಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು
ಸಂತ್ರಸ್ತ ಯುವತಿ ಬಳ್ಳಾರಿ ಕಾಲೇಜೊಂದರಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದಾರೆ. ಅಕ್ಟೋಬರ್ 11 ರಂದು ಕಾಲೇಜಿನಲ್ಲಿ ಪರೀಕ್ಷೆ ಬರೆಯುತ್ತಿದ್ದ ವೇಳೆ ನಿಮ್ಮ ಅಣ್ಣ ಬಂದಿದ್ದಾನೆ ಎಂದು ಸುಳ್ಳು ಹೇಳಿ ಪರೀಕ್ಷಾ ಕೊಠಡಿಯಿಂದ ಯುವತಿಯನ್ನು ಹೊರಗೆ ಕರೆಯಿಸಿ ಬಳಿಕ ಆಟೋದಲ್ಲಿ ನಾಲ್ವರು ಯುವಕರು ಅಪಹರಿಸಿದ್ದರು. ನಂತರ ಆಟೋದಲ್ಲೇ ಯುವತಿಗೆ ಮದ್ಯ ಕುಡಿಸಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಣಾಪುರ ಬಳಿಯ ಹೋಟೆಲ್ವೊಂದಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು