10:35 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಾಂಪಿಯನ್ ಗಳಾಗಿ ಬನ್ನಿ: ಕರ್ನಾಟಕ‌ ಪೊಲೀಸರಿಗೆ ಗೃಹ ಸಚಿವ ಡಾ. ಜಿ.ಪರಮೇಶ್ವರ ಕಿವಿಮಾತು

29/06/2025, 23:34

ಬೆಂಗಳೂರು (reporterkarnataka.com): ರಾಷ್ಟ್ರೀಯ ಮಟ್ಟದ ಪೊಲೀಸ್ ಕ್ರೀಡಾಕೂಟದಲ್ಲಿ ಕರ್ನಾಟಕ‌ ಪೊಲೀಸ್ ಚಾಂಪಿಯನ್ ಆಗಿ ಹೊರ ಹೊಮ್ಮಬೇಕು. ಈ ನಿಟ್ಟಿನಲ್ಲಿ ಎಲ್ಲ ರೀತಿಯ ಉತ್ತೇಜನವನ್ನು ನೀಡಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದರು.
ಅವರು ಇಂದು ಕೋಮಂಗಲದ ಕೆಎಸ್‌ಆರ್‌ಪಿ ಕ್ರೀಡಾಂಗಣದಲ್ಲಿ ನಡೆದ ‘ಕರ್ನಾಟಕ ರಾಜ್ಯ ಪೊಲೀಸ್ ವಾರ್ಷಿಕ ಕ್ರೀಡಾಕೂಟ-2024 ಸಮಾರೋಪ ಸಮಾರಂಭ’ದಲ್ಲಿ ಭಾಗವಹಿಸಿ, ವಿಜೇತ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು.


ಕ್ರೀಡೆಯಲ್ಲಿ ಭಾಗವಹಿಸುವವರಿಗೆ ತಯಾರಿ ಬಹಳ‌ ಮುಖ್ಯವಾಗುತ್ತದೆ ಅದಕ್ಕಾಗಿ ವಿಶೇಷ ತರಬೇತಿಯನ್ನು ನೀಡುವಂತೆ ಇಲಾಖೆಯ ಮುಖ್ಯಸ್ಥರಿಗೆ ಸೂಚಿಸುತ್ತೇನೆ. ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಚಾಂಪಿಯನ್ ಗಳಾಗಬೇಕು. ತನಿಖೆಯಲ್ಲಿ ಕರ್ನಾಟಕ ಪೊಲೀಸ್ ಬೆಸ್ಟ್‌ ಪೊಲೀಸ್ ಎಂದು ಹೇಳುತ್ತಾರೆ. ಕ್ರೀಡೆಯಲ್ಲಿಯೂ ಕೂಡ ಕರ್ನಾಟಕ ಪೊಲೀಸ್ ಬೆಸ್ಟ್ ಎಂದು ಹೇಳುವಂತಾಗಬೇಕು ಎಂದರು.
ಮುಖ್ಯಮಂತ್ರಿಯವರು ಪೊಲೀಸ್ ಇಲಾಖೆಯ ನೇಮಕಾತಿಯಲ್ಲಿ ಶೇ. 3ರಷ್ಟು ಮೀಸಲಾತಿಯನ್ನು ಕಲ್ಪಿಸಿ ಕ್ರೀಡಾಪಟುಗಳಿಗೆ ಉತ್ತೇಜನ ನೀಡಲಾಗುತ್ತಿದೆ. ಬೇರೆ ಯಾವ ರಾಜ್ಯಗಳು ಸಹ ಇಷ್ಟೊಂದು ಮೀಸಲಾತಿಯನ್ನು ನೀಡಿಲ್ಲ‌‌. ಕೆಎಸ್‌ಆರ್‌ಪಿ ಕ್ರೀಡಾಂಗಣ ನವೀಕರಣಗೊಳಿಸಲು 3 ಕೋಟಿ ರೂ‌. ಅನುದಾನ ನೀಡಲಾಗಿದೆ. ಮುಂದಿನ ವರ್ಷದ ಕ್ರೀಡಾಕೂಟದ ವೇಳೆಗೆ ಸಿಂಥೆಟಿಕ್ ಟ್ರ್ಯಾಕ್ ಸಿದ್ಧವಾಗಲಿದೆ ಎಂದು ಹೇಳಿದರು.
ಪೊಲೀಸ್ ಇಲಾಖೆಗೆ ಕ್ರೀಡಾ ಚಟುವಟಿಕೆಗಳು ಬಹಳ‌ ಮುಖ್ಯ. ಆತ್ಮಸ್ಥೈರ್ಯ, ದೈಹಿಕ ಸದೃಢತೆಯನ್ನು ಹೆಚ್ಚಿಸುತ್ತದೆ. ನಮ್ಮ ಜೀವನದಲ್ಲಿ ಸೋಲು-ಗೆಲುವುಗಳನ್ನು ಸರಿಸಮಾನವಾಗಿ ತೆಗೆದುಕೊಳ್ಳಲು ಕ್ರೀಡೆ ಸ್ಪೂರ್ತಿಯಾಗುತ್ತದೆ. ಕ್ರೀಡಾಕೂಟ ನಿಮ್ಮೆಲ್ಲರ ಆತ್ಮಸ್ಥೈರ್ಯ ಹೆಚ್ಚಿಸಲಿ ಎಂದು ಪೊಲೀಸ್ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.
ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಎಂ.ಎ. ಸಲೀಂ ಅವರು ರಾಜ್ಯದಲ್ಲಿ ಸಮರ್ಥವಾದ ಪೊಲೀಸ್ ಪಡೆ ಕಟ್ಟಬೇಕು ಎಂಬ ಇಚ್ಛೆ ಹೊಂದಿದ್ದಾರೆ. ಕಳೆದ ಎರಡು ದಿನದಿಂದ‌ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ‌ ಸಮಾವೇಶದಲ್ಲಿ ಪೊಲೀಸ್ ದೂರದೃಷ್ಟಿಯ ಬಗ್ಗೆ ಚರ್ಚಿಸಲಾಯಿತು. ಎಲ್ಲ ಹಿರಿಯ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು. ಪೊಲೀಸ್ ಇಲಾಖೆ ಜನಸಮುದಾಯದ ಜೊತೆ ಹೇಗೆ ಕೆಲಸ ಮಾಡಬೇಕು ಎಂಬುದು ಸೇರಿದಂತೆ ಹಲವು ಮಹತ್ವದ ವಿಚಾರಗಳು ಕುರಿತು ಚರ್ಚಿಸಲಾಗಿದೆ ಎಂದು ತಿಳಿಸಿದರು.
ಸಮಾರಂಭದಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಡಾ. ಎಂ.ಎ.ಸಲೀಂ, ಕೆಎಸ್‌ಆರ್‌ಪಿ ಎಡಿಜಿಪಿ‌ ಉಮೇಶ್ ಕುಮಾರ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಕೆಎಸ್‌ಆರ್‌ಪಿ ಐಜಿಪಿ ಸಂದೀಪ್ ಪಾಟೀಲ್ ಮುಂತಾದ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು