8:12 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಸ್ಮಾರ್ಟ್ ಮೀಟರ್ ನಲ್ಲಿ ಕಮಿಷನ್ ಹುನ್ನಾರ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪ

16/07/2025, 22:24

ಹಾವೇರಿ(reporterkarnataka.com): ರಾಜ್ಯಕ್ಕೆ ಹೆಚ್ಚಿನ ರಸಗೊಬ್ಬರ ಬೇಡಿಕೆ ಇದ್ದರೆ ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿದರೆ ಕೇಂದ್ರ ಅಗತ್ಯ ರಸಗೊಬ್ಬರ ಸರಬರಾಜು ಮಾಡುತ್ತದೆ. ಕೇಂದದಿಂದ ರಸಗೊಬ್ಬರ ಕೊಡಿಸಲು ಪಯತ್ನಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೆಚ್ಚಿನ ರಸಗೊಬ್ಬರಕ್ಕೆ ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿದರೆ ಕೇಂದ್ರ ಸರ್ಕಾರ ರಸಗೊಬ್ಬರ ಪೂರೈಕೆ ಮಾಡುತ್ತದೆ. ಆ ಕೆಲಸ ಮಾಡುವುದು ಕೃಷಿ ಇಲಾಖೆಯ ಕರ್ತವ್ಯ ಎಂದು ಹೇಳಿದರು.
ಮನೆಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಾರ್ಟ್ ಮೀಟರ್ ವಿಚಾರ ಕೋರ್ಟ್‌ನಲ್ಲಿ ಇದೆ. ಇದಕ್ಕೆ ಕೋರ್ಟ್ ತಡೆಯಾಜ್ಞೆ ನೀಡಿದೆ. ಲೋಕಾಯುಕ್ತಕ್ಕೂ ದೂರು ಹೋಗಿದೆ. ಬೇರೆ ರಾಜ್ಯಗಳಲ್ಲಿ ಕಡಿಮೆ ದರದಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆ ಆಗಿದೆ. ಕೆಲವು ಕಡೆಗಳಲ್ಲಿ ಲೀಜ್ ಮೇಲೆ ನೀಡಲಾಗಿದೆ. ರಾಜ್ಯ ಸರ್ಕಾರ ಗ್ರಾಹಕರಿಂದ ಹೆಚ್ಚಿನ ದರ ಪಡೆದು ಅದರಲ್ಲಿಯೂ ಕಮಿಷನ್ ಪಡೆಯುವ ಹುನ್ನಾರ ಇದೆ ಎಂದು ಜನರಿಗೆ ಸಂಶಯ ಬರುತ್ತಿದೆ. ಈ ಬಗ್ಗೆ ತನಿಖೆಯಾಗಬೇಕು. ಪ್ರಕರಣ ಕೋರ್ಟ್‌ನಲ್ಲಿ ಇದೆ ಎಂದರು.
ಹಾವೇರಿ ಮೆಡಿಕಲ್ ಕಾಲೇಜು ಉದ್ಘಾಟನೆ ಮಾಡುವ ಕುರಿತು ಕೇಳಿದ ಪ್ರಶ್ನೆಗೆ ಕೇಂದ್ರ ಆರೋಗ್ಯ ಸಚಿವರು ಹಾಗೂ ಮುಖ್ಯಮಂತಿಯವನ್ನು ಕರೆಯಿಸಿ ಉದ್ಘಾಟನೆ ಮಾಡಿಸಲು ಕ್ರಮ ವಹಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವರಿಗೆ ತಿಳಿಸಿದ್ದೇನೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು