8:19 PM Tuesday17 - February 2026
ಬ್ರೇಕಿಂಗ್ ನ್ಯೂಸ್
ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡದಲ್ಲಿ ಕೋಮುವಾದದ ಕಾರಣ ಹೂಡಿಕೆಗೆ ಅಡ್ಡಿ: ಪ್ರಿಯಾಂಕ್ ಹೇಳಿಕೆಗೆ ದಿನೇಶ್ ಗುಂಡೂರಾವ್ ಸಮರ್ಥನೆ

17/02/2026, 20:06

ಬೆಳಗಾವಿ(reporterkarnataka.com): ಕೋಮುವಾದದ ಕಾರಣ ಕರಾವಳಿಯಲ್ಲಿ ಐಟಿ-ಬಿಟಿ ಕಂಪನಿಗಳು ಬಂಡವಾಳ ಹಾಕಲು ಹೆದರುತ್ತಿವೆ ಎಂಬ ಪ್ರಿಯಾಂಕ್ ಖರ್ಗೆ ಅವರ ಅಭಿಪ್ರಾಯವನ್ನು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬೆಳಗಾವಿಯಲ್ಲಿ ಸಮರ್ಥಿಸಿಕೊಂಡಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಕೋಮು ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ರಾಜ್ಯ ಸರ್ಕಾರದ ಹಲವು ಕ್ರಮಗಳ ನಂತರ ಪರಿಸ್ಥಿತಿ ಸುಧಾರಿಸಿದೆ. ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದು ಸರಿಯಿದೆ. ಪರಿಸ್ಥಿತಿ ಸುಧಾರಿಸಿದರೆ ದಕ್ಷಿಣ ಕನ್ನಡ ಜಿಲ್ಲೆಗೆ ಹೆಚ್ಚು ಜನ ಬರುತ್ತಾರೆ ಎಂದರು.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುವಾದ ಪರಿಸ್ಥಿತಿ ಕಾರಣ ಹೂಡಿಕೆಗೆ ಅಡ್ಡಿಯಾಗಿದೆ ಎಂದು ಹೇಳಿದ್ದರು. ಅಲ್ಲಿನ ಪರಿಸ್ಥಿತಿಯನ್ನು ಸುಧಾರಿಸಲು ಸರ್ಕಾರದಿದ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಅಲ್ಲಿ ಶಾಂತಿಯುತ ವಾತಾವರಣವಿದೆ. ಜಿಲ್ಲೆಯಲ್ಲಿ ಹೆಚ್ಚಿನ ಹೂಡಿಕೆ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತಿದ್ದೇವೆ ಎಂದು ಹೇಳಿದರು.
ನಮ್ಮ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುತ್ತಿದೆ. ಯಾರ ಪರವಾಗಿಯೂ ಇಲ್ಲ, ಯಾರ ವಿರುದ್ಧವೂ ಇಲ್ಲ. ಯಾರೇ ಕಾನೂನು ಉಲ್ಲಂಘಿಸಿದರೂ ಕ್ರಮ ಜರುಗಿಸಲಾಗುವುದು. ಹೀಗಾಗಿ ಹಲವು ಸುಧಾರಣೆಗಳು ಆಗಿವೆ. ಪ್ರವಾಸೋದ್ಯಮಕ್ಕೆ ರಾಜ್ಯ ಸರ್ಕಾರ ಒತ್ತು ನೀಡುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರಾವಳಿ ಕರ್ನಾಟಕಕ್ಕೆ ಭೇಟಿ ನೀಡಿ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿದ್ದರು. ಮಂಗಳೂರಿನಲ್ಲಿ ಫೈವ್ ಸ್ಟಾರ್ ಹೋಟೆಲ್ ನಿರ್ಮಾಣಕ್ಕೆ ಅನುಮತಿ ನೀಡಲಾಗಿದೆ ಎಂದು ತಿಳಿಸಿದರು.
“ಮಂಗಳೂರಿನಲ್ಲಿ ಹೂಡಿಕೆಗಳನ್ನು ಆಕರ್ಷಿಸಲು ಸಾಕಷ್ಟು ಅವಕಾಶಗಳಿವೆ. ಆದರೆ ಕೋಮು ವಾತಾವರಣದಿಂದ ಈ ಪ್ರದೇಶವು ಹಿಂದುಳಿದಿದೆ. ಈ ಬಗ್ಗೆ ಜನರಲ್ಲಿ ಅರಿವು ಮೂಡಿಸುತ್ತಿದ್ದೇವೆ. ಕೆಲವು ಸಂಘಟನೆಗಳು ದ್ವೇಷ ಭಾಷಣಗಳ ಮೂಲಕ ವಾತಾವರಣವನ್ನು ಹಾಳು ಮಾಡುತ್ತಿವೆ ಎಂದು ಆರೋಪಿಸಿದ ರಾವ್, ತಮ್ಮ ಮಿತಿಯಲ್ಲಿ ಇರಲು ಅಂತಹ ಸಂಘಟನೆಗಳ ವಿರುದ್ಧ ಪೊಲೀಸರು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು.
ನಾಯಕತ್ವ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ವದಂತಿಗಳನ್ನು ತಳ್ಳಿಹಾಕಿದ ಸಚಿವರು, ಪಕ್ಷವು ಒಗ್ಗಟ್ಟಾಗಿದೆ. ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಅಥವಾ ಎಲ್ಲಿಯೂ ಭಿನ್ನಾಭಿಪ್ರಾಯಗಳಿಲ್ಲ. ಹಾಗೆಯೇ ಪಕ್ಷದಲ್ಲಿಯೂ ಯಾವುದೇ ಗೊಂದಲವಿಲ್ಲ ಎಂದರು. ಕೆಲವು ಕಾಂಗ್ರೆಸ್ ಶಾಸಕರು ರೆಸಾರ್ಟ್‌ ಕಾಯ್ದಿರಿಸುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾವ್, ಶಾಸಕರಿಗೆ ರಜೆಗೆ ಅವಕಾಶವಿಲ್ಲವೇ ಎಂದು ಕೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು