7:56 PM Friday3 - October 2025
ಬ್ರೇಕಿಂಗ್ ನ್ಯೂಸ್
Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ… ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ಪಟ್ಟದ ಆನೆ, ಕುದುರೆ, ಒಂಟೆಗೂ ಪೂಜೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಸರಾ ಸಂಭ್ರಮ: ದೇಶ – ವಿದೇಶಗಳ ಪ್ರಯಾಣಿಕರಿಗೆ…

ಇತ್ತೀಚಿನ ಸುದ್ದಿ

ಕಾಂಗ್ರೆಸ್‌ ಶಾಸಕರ ಖರೀದಿಗೆ ಕಾಂಗ್ರೆನಲ್ಲೇ ಪೈಪೋಟಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲೇವಡಿ

22/06/2025, 00:07

ಬಾಗಲಕೋಟೆ(reporterkarnataka.com): ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆ ಚರ್ಚೆ ಜೋರಾಗಿದ್ದು, ಕಾಂಗ್ರೆಸ್ಸಿನಿಂದ ಕಾಂಗ್ರೆಸ್‌ ಶಾಸಕರ ಖರೀದಿಗೇ ಪೈಪೋಟಿ ನಡೆದಂತಿದೆ. ಅದರ ಪರಿಣಾಮವಾಗಿಯೇ ಶಾಸಕರ ಆಡಿಯೋ ವೈರಲ್‌ ಆಗುತ್ತಿವೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಚಾಟಿ ಬೀಸಿದರು.
ಬಾಗಲಕೋಟೆ ಜಿಲ್ಲೆ ಪಟ್ಟದಕಲ್‌ನಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಬಹುಶಃ ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಆಗಬಹುದು ಎಂಬ ಚರ್ಚೆ ಕಾಂಗ್ರೆಸ್‌ ಶಾಸಕರಲ್ಲಿ ಹರಿದಾಡುತ್ತಿದೆ. ಸಿಎಂ ಸ್ಥಾನಕ್ಕಾಗಿ ಕಾಂಗ್ರೆಸ್‌ನ ಉಭಯ ಗುಂಪಿನವರು ಬಹುಶಃ ಶಾಸಕರ ಖರೀದಿಗೆ ಪ್ರಯತ್ನ ನಡೆಸಿರಬೇಕು ಎಂದು ಹೇಳಿದರು.
ಆ ಪಕ್ಷದಲ್ಲಿ ನವೆಂಬರ್‌ ನಲ್ಲಿ ಸಿಎಂ ಬದಲಾವಣೆ ಎಂಬ ವದಂತಿ ಇರುವುದರಿಂದ ಸಿಎಂ ಕುರ್ಚಿಗಾಗಿ ಸಿಎಂ-ಡಿಸಿಎಂ ಗುಂಪಿನಲ್ಲಿ ಹಗ್ಗ-ಜಗ್ಗಾಟ ನಡೆದಂತಿದೆ. ತಮ್ಮ ಬಲ ಪ್ರದರ್ಶನಕ್ಕಾಗಿ ಶಾಸಕರ ಖರೀದಿಗೆ ಮುಂದಾಗಿರುವ ಉಭಯ ಗುಂಪಿನವರು ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ವೈಯಕ್ತಿಕ ಲಾಭಕ್ಕಾಗಿ ಶಾಸಕರಾದವರಿಗೆ ಇದೊಂದು ʼಗೋಲ್ಡನ್‌ ಅಪಾರ್ಚ್ಯುನಿಟಿʼ ಆಗಿದೆ ಎಂದು ಸಚಿವ ಜೋಶಿ ಟೀಕಿಸಿದರು.
ʼರಾಜೀವ್‌ ಗಾಂಧಿ ವಸತಿ ನಿಗಮದ ಅನುದಾನ ಬಿಡುಗಡೆಗೆ ಲಂಚ ಅನಿವಾರ್ಯʼವಾಗಿರುವ ಬಗ್ಗೆ ವಸತಿ ಸಚಿವ ಜಮೀರ್‌ ಅಹ್ಮದ್‌ ಆಪ್ತ ಕಾರ್ಯದರ್ಶಿ ಜತೆ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್‌.ಪಾಟೀಲ್‌ ಮಾತನಾಡಿರುವ ಆಡಿಯೋ ವೈರಲ್‌ ಆಗಿದೆ. ಅಲ್ಲದೇ, ʼಈ ಆಡಿಯೋದಲ್ಲಿರುವ ಧ್ವನಿ ಸಹ ತಮ್ಮದೇʼ ಎಂದು ಪಾಟೀಲ್‌ ಒಪ್ಪಿಕೊಂಡಿದ್ದಾರೆ.
ಬೆಂಗಳೂರು ನಗರ ಜಿಲ್ಲೆಯ ತಾಲೂಕು ಕಚೇರಿಗಳಿಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ದಿಢೀರ್‌ ಭೇಟಿ ನೀಡಿದ ವೇಳೆ ʼಯಾವುದಕ್ಕೆ ಎಷ್ಟು ರೇಟ್‌?ʼ ಬೋರ್ಡ್‌ ಹಾಕಿಬಿಡಿʼ ಎಂದು ಅಧಿಕಾರಿಗಳ ವಿರುದ್ಧ ಹರಿಹಾಯ್ದ ವಿಡಿಯೋ ಸಹ ವೈರಲ್‌ ಆಗಿವೆ. ಇನ್ನು, ಗುತ್ತಿಗೆದಾರರು ಇದು 60 ಪರ್ಸೆಂಟ್‌ ಸರ್ಕಾರ ಏನ್ನುತ್ತಿದ್ದಾರೆ. ರಾಜ್ಯ ಕಾಂಗ್ರೆಸ್‌ ಸರ್ಕಾರ ಭ್ರಷ್ಟಾಚಾರ ಪೀಡಿತ ಎಂಬುದಕ್ಕೆ ಇಷ್ಟು ಸಾಕಲ್ಲವೇ ನಿದರ್ಶನ ಎಂದು ರಾಜ್ಯ ಸರ್ಕಾರದ ವಿರುದ್ಧ ಪ್ರಲ್ಹಾದ ಜೋಶಿ ಕಿಡಿ ಕಾರಿದರು.
ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಹಿಂದೆ ಬಸವರಾಜ ರಾಯರೆಡ್ಡಿ ಅವರು ʼಅತಿ ಹೆಚ್ಚು ಭ್ರಷ್ಟಾಚಾರ ಇರುವುದು ತಮ್ಮ ಸರ್ಕಾರದಲ್ಲಿʼ ಎಂದಿದ್ದರು. ಈಗ ದುಡ್ಡು ಕೊಡದೆ ಬಡವರಿಗೆ ಮನೆ ಸಿಗುವುದಿಲ್ಲ ಎಂಬ ಬಿ.ಆರ್‌.ಪಾಟೀಲರ ಆಡಿಯೋ ವೈರಲ್‌ ಆಗಿದೆ. ಅವರೂ ಆ ಹೇಳಿಕೆಯನ್ನು ಒಪ್ಪಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರೇ ಈಗೇನು ಹೇಳುತ್ತೀರಿ? ಎಂದು ಸಚಿವ ಜೋಶಿ ಪ್ರಶ್ನಿಸಿದರು.

*ಭ್ರಷ್ಟಾಚಾರದ ಮೊಟ್ಟೆಯಿಟ್ಟು ಮರಿ ಬೆಳೆಸಿದ್ದೇ ಕಾಂಗ್ರೆಸ್‌:*
ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ವರ್ಗಾವಣೆ ದಂಧೆ, ಹಗರಣವೇ ನಡೆಯುತ್ತಿದೆ ಎಂದು ಸ್ವತಃ ಕಾಂಗ್ರೆಸ್‌ ಶಾಸಕರೇ ಹೇಳುತ್ತಿದ್ದಾರೆ. ಭ್ರಷ್ಟಾಚಾರದ ಮೊಟ್ಟೆಯಿಟ್ಟು ಮರಿ ಬೆಳೆಸಿದ್ದೇ ಕಾಂಗ್ರೆಸ್‌ ಪಕ್ಷ. ಯುಪಿಎ ಸರ್ಕಾರದಲ್ಲಿ ₹12 ಲಕ್ಷ ಕೋಟಿ ಭ್ರಷ್ಟಾಚಾರ ನಡೆದಿತ್ತು. ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಬೇಲ್‌ ಮೇಲಿದ್ದಾರೆ. ಹೀಗಾಗಿ ರಾಜ್ಯ ಕಾಂಗ್ರೆಸ್ಸಿಗರಿಗೆ ಹೇಳೋರು-ಕೇಳೋರು ಯಾರೂ ಇಲ್ಲವೆಂದು ವಾಗ್ದಾಳಿ ನಡೆಸಿದರು.

*ಗೃಹಲಕ್ಷ್ಮಿ ವಿಳಂಬಕ್ಕೆ ಕೇಂದ್ರ ಕಾರಣ ಎನ್ನುವುದು ಹಾಸ್ಯಾಸ್ಪದ:*
ರಾಜ್ಯದಲ್ಲಿ ಗೃಹಲಕ್ಷ್ಮಿ ಹಣ ಜನರಿಗೆ ಸರಿಯಾಗಿ ತಲುಪುತ್ತಿಲ್ಲ. ಇದಕ್ಕೆ ಕೇಂದ್ರ ಸರ್ಕಾರವೇ ಕಾರಣ ಎಂದಿದ್ದಾರೆ. ಇದು ಶೋಭೆ ತರದು. ಪುಣ್ಯಕ್ಕೆ ಇಲ್ಲಿ ಹೆಚ್ಚು ಮಳೆಯಾಗಿದೆ. ಇದಕ್ಕೂ ಕೇಂದ್ರ ಕಾರಣವೆಂದಿಲ್ಲ ಎಂದು ಜೋಶಿ ಲೇವಡಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು