2:34 PM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

Tamilnadu | ಯೋಗ ದಿನಾಚರಣೆ: ಸೇಲಂ ಉಕ್ಕು ಸ್ಥಾವರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಯೋಗಾಭ್ಯಾಸ

22/06/2025, 00:10

ಸೇಲಂ(ತಮಿಳುನಾಡು): ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಸೇಲಂ ಉಕ್ಕು ಸ್ಥಾವರದಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಕಾರ್ಖಾನೆಯ ಸಿಬ್ಬಂದಿ, ಅವರ ಕುಟುಂಬ ಸದಸ್ಯರು, ಹಿರಿಯ ಅಧಿಕಾರಿಗಳು, ಭಾರತೀಯ ಉಕ್ಕು ಪ್ರಾಧಿಕಾರ ಹಾಗೂ ಉಕ್ಕು ಸಚಿವಾಲಯದ ಉನ್ನತ ಅಧಿಕಾರಿಗಳ ಜೊತೆಯಲ್ಲಿ ಸಚಿವರು ಯೋಗಾಭ್ಯಾಸ ನಡೆಸಿದರು.


ಸೇಲಂ ಟೌನ್‌ಶಿಪ್‌ನಲ್ಲಿರುವ ಹಿಲ್ ವ್ಯೂ ಕ್ರೀಡಾಂಗಣದಲ್ಲಿ ಯೋಗ ಶಿಕ್ಷಕರ ಮಾರ್ಗದರ್ಶನದಲ್ಲಿ ಸಚಿವರು ಕೆಲ ಪ್ರಮುಖ, ಸರಳ ಆಸನಗಳನ್ನು ಹಾಗೂ ಪ್ರಾಣಾಯಾಮವನ್ನು ಹಾಗೂ ಪ್ರಾಣಾಯಾಮವನ್ನೂ ಅಭ್ಯಾಸ ಮಾಡಿದರು.

*ಮೋದಿ ಅವರನ್ನು ಅಭಿನಂದಿಸಿದ ಸಚಿವರು:*
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಕುಮಾರಸ್ವಾಮಿ ಅವರು; ಯೋಗ ಎನ್ನುವುದು ನಮ್ಮ ಭಾರತದಲ್ಲಿ ಪ್ರಾಚೀನ ಕಾಲದಿಂದ ಬೆಳೆದುಬಂದ ಜೀವನಶೈಲಿಯಾಗಿದೆ. ಭಾರತಕ್ಕಷ್ಟೇ ಸೀಮಿತವಾಗಿದ್ದ ಯೋಗವನ್ನು ಹನ್ನೊಂದು ವರ್ಷಗಳ ಹಿಂದೆ ಪ್ರಧಾನಿಗಳಾಗಿ ಅಧಿಕಾರ ವಹಸಿಕೊಂಡ ನರೇಂದ್ರ ಮೋದಿ ಅವರು ಇಡೀ ಜಗತ್ತಿನ ವೇದಿಕೆಗೆ ತೆಗೆದುಕೊಂಡು ಹೋದರು. ಅದರ ಪರಿಣಾಮವಾಗಿ ಜಗತ್ತಿನ ಎಲ್ಲೆಡೆ ಜೂನ್‌ ೨೧ನೇ ದಿನವನ್ನು ಅಂತಾರಾಷ್ಟ್ರೀಯ ಯೋಗ ದಿನ ಎಂದು ಆಚರಿಸಲಾಗುತ್ತಿದೆ. ಇದರ ಸಂಪೂರ್ಣ ಹೆಗ್ಗಳಿಕೆ ಮೋದಿ ಅವರಿಗೆ ಸಲ್ಲಬೇಕು ಎಂದರು.
ಸೇಲಂ ಉಕ್ಕು ಸ್ಥಾವರದ ಸಿಬ್ಬಂದಿ, ಅಧಿಕಾರಿಗಳು, ಅವರ ಕುಟುಂಬ ಸದಸ್ಯರ ಜತೆ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಅವಕಾಶ ನನಗೆ ಸಿಕ್ಕಿದೆ. ಇದು ನನಗೆ ಬಹಳ ಸಂತೋಷ ಉಂಟು ಮಾಡಿದೆ. ರಾಷ್ಟ್ರದ ಬೆನ್ನೆಲುಬಾಗಿರುವ ಉಕ್ಕು ಕ್ಷೇತ್ರದ ಕುಟುಂಬದೊಂದಿಗೆ ಯೋಗದ ಅನನ್ಯತೆ, ಅವಿಸ್ಮರಣೆಯ ಕ್ಷಣಗಳನ್ನು ಅನುಭವಿಸುವ ಭಾಗ್ಯ ನನ್ನದಾಯಿತು ಎಂದು ಸಚಿವರು ಹೇಳಿದರು.
ಯೋಗವು ಕೇವಲ ದೈಹಿಕ ವ್ಯಾಯಾಮವಲ್ಲ. ಇದು ಮಾನಸಿಕ ಶಾಂತಿ, ಮಾನಸಿಕ ಸ್ಪಷ್ಟತೆ, ದೈಹಿಕ ಸ್ವಾಸ್ತ್ಯತೆ ಮತ್ತು ಸಾಮೂಹಿಕ ಯೋಗಕ್ಷೇಮಕ್ಕೆ ಪರಿಣಾಮಕಾರಿ ಮಾರ್ಗವಾಗಿದೆ. ಪ್ರಧಾನಿಗಳಾದ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಯೋಗವು ಜಗತ್ತನ್ನೇ ಒಗ್ಗೂಡಿಸಿದೆ. ಜಗತ್ತಿನ ಯೋಗಕ್ಷೇಮಕ್ಕೆ ನಮ್ಮ ಪಾರಂಪರಿಕ ಯೋಗವು ಮಹೋನ್ನತ ಕೊಡುಗೆ ನೀಡುತ್ತಿದೆ ಎಂದು ಸಚಿವ ಕುಮಾರಸ್ವಾಮಿ ಅವರು ಹೇಳಿದರು.
ಭಾರತೀಯ ಉಕ್ಕು ಪ್ರಾಧಿಕಾರದ (ಸೈಲ್‌) ಅಧ್ಯಕ್ಷ ಅಮರೇಂದು ಪ್ರಕಾಶ್‌, ಉಕ್ಕು ಸಚಿವ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಭಿಜಿತ್‌ ನರೇಂದ್ರ ಸೇರಿದಂತೆ ಸೇಲಂ ಉಕ್ಕು ಸ್ಥಾವರದ ಹಿರಿಯ ಅಧಿಕಾರಗಳು ಕೂಡ ಯೋಗಾಭ್ಯಾಸದಲ್ಲಿ ಭಾಗಿ ಆಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು