ಇತ್ತೀಚಿನ ಸುದ್ದಿ
ಮೇ ಅಂತ್ಯದೊಳಗೆ ಬಹುಗ್ರಾಮ ಕುಡಿಯುವ ನೀರಿನ ಕಾಮಗಾರಿ ಪೂರ್ಣಗೊಳಿಸಿ: ಸಂಸದ ಬಸವರಾಜ ಬೊಮ್ಮಾಯಿ ಸೂಚನೆ
25/02/2025, 21:53

ಹಾವೇರಿ(reporter Karnataka.com): ಜಿಲ್ಲೆಯ ತಡಸ, ಆನೂರ ಹಾಗೂ ಹಂಸಭಾವಿ ಈ ಮೂರು ಬಹುಗ್ರಾಮ ಕುಡಿಯುವ ನೀರಿನ ಕಾಮಗಾರಿಗಳನ್ನು ಬರುವ ಮೇ ಅಂತ್ಯದೊಳಗೆ ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಮಾಜಿ ಮುಖ್ಯ ಮಂತ್ರಿಗಳು ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಕೇಂದ್ರ ಪುರಸ್ಕøತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಮತ್ತು ಉಸ್ತುವಾರಿ ಸಮಿತಿಯ ದಿಶಾ ಸಭೆಯಯಲ್ಲಿ, ಜಲಜೀವನ್ ಕಾಮಗಾರಿ ಪ್ರಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಕಾಮಗಾರಿ ಆರಂಭವಾಗಿ ಎರುವರೇ ವರ್ಷ ಆಗಿದೆರೆ, ಕುಡಿಯುವ ನೀರಿನ ಕಾಮಗಾರಿ ಪ್ರಗತಿ ಬಗ್ಗೆ ಕಾಳಜಿ, ಜವಾಬ್ದಾರಿ ಇಲ್ಲ ಅಂದರೆ ಏನ ಕೆಲಸ ಮಾಡ್ತೀರಿ, ಕೆಲಸಮಾಡಲು ಮನಸ್ಸಿ ಇಲ್ಲಾ ಅಂದರೆ ವರ್ಗಾವಣೆ ತಗೆದುಕೊಂಡು ಬೇರೆ ಕೆಡೆ ಹೋಗಿ ಎಂದು ಸಂಬಂಧಪಟ್ಟ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು.
*ಪ್ರತಿ 15ಕ್ಕೆ ವರದಿ ನೀಡಿ:* ಜಲಜೀವನ್ ಮೀಷನ್ ಯೋಜನೆಗೆ ಕೋಟಿಗಂಟಲೆ ಅನುದಾನ ವೆಚ್ಚ ಮಾಡಲಾಗುತ್ತಿದೆ. ಆದರೆ ಜನರಿಗೆ ನೀರು ಸಿಗುತ್ತಿಲ್ಲ. ಬರೆ ನಳ ಅಳಡಿಸಿದರೆ ಸಾಲದು, ಅತ್ಯಂತ ಜವಾಬ್ದಾರಿಯಿಂದ ಗುಣಮಟ್ಟದ ಕಾಮಗಾರಿ ಮಾಡಬೇಕು. ಕುಂಟು ನೆಪ ಹೇಳುವುದನ್ನು ಮೊದಲು ಬಿಡಿ, ಕಚೇರಿಯಲ್ಲಿ ಕುಳಿತುಕೊಳ್ಳದೇ ಕಾಮಗಾರಿ ಸ್ಥಳಗಳಿಗೆ ಭೇಟಿ ಪರಿಶೀಲನೆ ನಡೆಸಿ, ಸಮಸ್ಯೆ ಇದ್ದರೆ ಪರಿಹರಿಸಿ ಜನರಿಗೆ ನೀರು ಕೊಡುವ ಕೆಲಸಮಾಡಬೇಕು. ಯಾವುದೇ ಹಳ್ಳಿಗೆ ನೀರು ಬಂದಿಲ್ಲ ಎಂಬು ದೂರು ಬಾರದು. ಪ್ರತಿ 15 ದಿನಗಳಿಗೆ ನನಗೆ ಕಾಮಗಾರಿ ವರದಿ ನೀಡಬೇಕು ಎಂದು ಸೂಚನೆ ನೀಡಿದರು.
ದೊಡ್ಡ ಪ್ರಮಾಣದ ಯೋಜನೆ: ಗ್ರಾಮೀಣ ಪ್ರದೇಶದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಲು ದೊಡ್ಡ ಪ್ರಮಾಣದ ಯೋಜನೆ ರೂಪಿಸಲಾಗಿದೆ. ಹಾಗಾಗಿ ಸಮರ್ಪಕವಾಗಿ ನೀರು ಪೂರೈಸುವ ಕೆಸಲವಾಗಬೇಕು. ಕಾರಣಬೇಡ, ಪರಿಣಾಮಕಾರಿ ಕೆಲಸವಾಗಬೇಕು ಎಂದು ಸೂಚನೆ ನೀಡಿದರು.
*ಅನಿರೀಕ್ಷಿತ ಭೇಟಿ ನೀಡಿ:* ಕಾಮಗಾರಿ ಸ್ಥಳಗಳಿಗೆ ಅನೀರಿಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
*ಜನರು ಓಡಾಡುವಲ್ಲಿ ರಸ್ತೆ ನಿರ್ಮಾಣ ಮಾಡಿ:* ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ರೂ.20 ಕೋಟಿ ವೆಚ್ಚದಲ್ಲಿ ರಸ್ತೆ ನಿರ್ಮಾಣ ಮಾಡಲಾಗಿದೆ. ಅಲ್ಲಿ ಜನರು ಓಡಾಡುವುದಿಲ್ಲ ಹಾಗೂ ಸಂಪೂರ್ಣ ಅವೈಜ್ಞಾನಿಕವಾಗಿದೆ, ಸಾರ್ವಜನಿಕರು ಓಡಾಡುವಲ್ಲಿ ಕಾಮಗಾರಿ ಮಾಡಿ. ರಸ್ತೆ ಮಾಡುವ ಮೊದಲು ಅಲ್ಲಿಯ ಸ್ಥಳೀಯ ಜನ ಪ್ರತಿನಿಧಿಗಳನ್ನು ಸಂಪರ್ಕಿಸಬೇಕು ಎಂದು ಸೂಚನೆ ನೀಡಿದರು.
ಸರ್ವೇಮಾಡಿ: ಪ್ರಧಾನಮಂತ್ರಿ ಗ್ರಾಮ ಸಡಕ್ ಗ್ರಾಮ ಸಡಕ್ ಯೋಜನೆಯಡಿ ಒಂದರಿಂದ ನಾಲ್ಕು ಹಂತದಲ್ಲಿ ಕಾಮಗಾರಿಗಳಿಗೆ ಅನುದಾನ ಮಂಜೂರು ಮಾಡಲಾಗುವುದು. ಮೊದಲನೇ ಹಂತ ಕಾಮಗಾರಿ ಮುಗಿದರೆ ನಂತರ ಹಂತಗಳಿಗೆ ಅನುದಾನ ಮಂಜೂರು ಮಾಡಲಾಗುತ್ತದೆ. ಹಾಗಾಗಿ ಐದು ಸಾವಿರ ಜನಸಂಖ್ಯೆ ಇದ್ದು, ಒಂದು ಗ್ರಾಮದಿಂದ ಇನ್ನೊಂದು ಗ್ರಾಮಕ್ಕೆ ಸಂಪರ್ಕ ಇಲ್ಲದ ಜಿಲ್ಲೆಯ ಗ್ರಾಮಗಳ ಸರ್ವೇ ಮಾಡಿ, ಆ ಗ್ರಾಮಗಳ ಮಾಹಿತಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
*ಹೆಚ್ಚಿನ ಬೆಡ್‍ಗಳಿಗೆ ಪ್ರಸ್ತಾವನೆ ಸಲ್ಲಿಸಿ:* ತಾಯಿ ಹಾಗೂ ಶಿಶು ಮರಣದ ಕುರಿತು ಜಿಲ್ಲಾ ಆರೋಗ್ಯಾಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, ಐಸಿಯು ಬೆಡ್ ಸಮಸ್ಯೆ ಇದ್ದರೆ, ಜಿಲ್ಲಾ ಆಸ್ಪತ್ರೆಗೆ ಹೆಚ್ಚುವರಿ 30 ಹಾಗೂ ತಾಲೂಕು ಆಸ್ಪತ್ರೆಗಳಿಗೆ ತಲಾ ಐದು ಐಡಿಯು ಬೆಡ್‍ಗಳಿಗೆ ಪ್ರಸ್ತಾವನೆ ಸಲ್ಲಿಸಿ, ಜಿಲ್ಲೆಯಲ್ಲಿ ತಾಯಿ ಹಾಗೂ ಶಿಶು ಮರಣ ಸಂಭವಿಸಿದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಯವಂತೆ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
ವಸತಿ ಯೋಜನೆ, ಸ್ವಚ್ಛಭಾರತ ಮಿಷನ್, ನರೇಗಾ ಯೋಜನೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ಕಾಲಮಿತಿಯೊಳಗೆ ಗುರಿಸಾಧನೆ ಮಾಡಬೇಕು. ಕೆಲಸಮಾಡದಿರಲು ನೂರು ಕಾರಣಗಳು ಸಿಗುತ್ತವೆ. ಆದರೆ ಕೆಲಸ ಮಾಡಲು ಯಾವುದೇ ಕಾರಣಬೇಕಿಲ್ಲ. ಗುರಿ ಸಾಧನೆಗೆ ಮನಸ್ಸು ಮಾಡಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಿಸುವ ಗುರುತರ ಜವಾಬ್ದಾರಿ ಅಧಿಕಾರಿಗಳ ಮೇಲಿದೆ. ಇದನ್ನು ಅರಿತುಕೊಂಡು ಸಕಾರಾತ್ಮವಾಗಿ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದರು.
ಜಿಲ್ಲೆ ಯಾವುದೇ ಕ್ಷೇತ್ರದಲ್ಲಿ ಹಿಂದೆ ಉಳಿಯಬಾರದು. ರೈತರು, ಆರೋಗ್ಯ, ಶಿಕ್ಷಣ, ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಕಲ್ಯಾಣ, ಹಿಂದುಳಿದ ವರ್ಗಗಳ ಸೇರಿದಂತೆ ಜಿಲ್ಲೆಯ ಅಭಿವೃದ್ಧಿಗೆ ಎಲ್ಲರೂ ಆಸಕ್ತಯಿಂದ ಕೆಲಸಮಾಡಬೇಕು ಎಂದರು.
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಾ.ರಂಗಸ್ವಾಮಿ ಅವರು, ವಿವಿಧ ವಸತಿ ಯೋಜನೆ, ಸ್ವಚ್ಛಭಾರತ ಯೋಜನೆ, ನರೇಗಾ ಯೋಜನೆ ಪ್ರಗತಿ ಕುರಿತು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ರುಚಿ ಜಿಂದಾಲ್ ಉಪಸ್ಥಿತರಿದ್ದರು.