6:08 PM Wednesday2 - September 2026
ಬ್ರೇಕಿಂಗ್ ನ್ಯೂಸ್
ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ

ಇತ್ತೀಚಿನ ಸುದ್ದಿ

ಭಾರೀ ಮಳೆಗೆ ತಡೆ ಗೋಡೆ ಕುಸಿತ: ಮೂವರು ಮೃತ್ಯು, ಮೂವರಿಗೆ ಗಾಯ

01/07/2026, 09:16

ಮಂಗಳೂರು(reporterkarnataka.com): ಮಂಗಳವಾರ ರಾತ್ರಿಯಿಂದ ನಿತಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಅಬ್ಬರಕ್ಕೆ ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆಯ ಹಿಂಭಾಗದ ಗರೋಡಿ ಪ್ರದೇಶದಲ್ಲಿ ಇಂದು ಮುಂಜಾನೆ ತಡೆ ಗೋಡೆ ಕುಸಿದು,ವಾಸದ ಮನೆಯೊಂದು ಸಂಪೂರ್ಣ ಕುಸಿದು ಬಿದ್ದಿದ್ದು,ಮನೆಯಲ್ಲಿ ವಾಸವಿದ್ದ ಓರ್ವ ಮಹಿಳೆ,ಇಬ್ಬರು ಮಕ್ಕಳು ಮೃತಪಟ್ಟಿದ್ದು, ಮೂವರಿಗೆ ಗಾಯಗಳಾಗಿರುವ ಘಟನೆ ವರದಿಯಾಗಿದೆ.


ಮೃತರನ್ನು ಬಿಹಾರ ಮೂಲದ ಶಾಂತ (46),ಮಕ್ಕಳಾದ ಅನಾಮಿಕ ಚೌರಾಸಿಯ (8), ಪರಿ (4) ಎಂದು ತಿಳಿದು‌ಬಂದಿದೆ.
ಗಾಯಗೊಂಡ ಬಾಲಕೃಷ್ಣ 48), ಅಲ್ಕಾ (14) ಹಾಗೂ ಅನುಷಾ (14) ಎಂಬುವವರನ್ನು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಎನ್.ಡಿ.ಆರ್.ಎಫ್. ತಂಡವೂ ಸ್ಥಳಕ್ಕೆ ಧಾವಿಸಿದ್ದು, ಶೋಧಕಾರ್ಯ ನಡೆಸುತ್ತಿದೆ.
ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ನಿರಂತರ ಮಳೆಯ ಹಿನ್ನೆಲೆಯಲ್ಲಿ ಗುಡ್ಡ ಪ್ರದೇಶಗಳಲ್ಲಿ ಭೂಕುಸಿತದ ಭೀತಿ ಮುಂದುವರಿದಿದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.
ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿ ತ್ವರಿತ ಪರಿಹಾರ ನೀಡುವಂತೆ ಹಾಗೂ ಸರ್ಕಾರದಿಂದಲೇ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ.
ಇವರು ಮೂಲತ ಬಿಹಾರ ರಾಜ್ಯದವರಾಗಿದ್ದು, ಪ್ರಸ್ತುತ ಕಂಕನಾಡಿ ಗ್ರಾಮದ, ಕಂಕನಾಡಿ ಪೊಲೀಸ್ ಠಾಣಾ ಹಿಂಬಾಗದಲ್ಲಿ ಕಳೆದ 20 ವರ್ಷಗಳಿಂದ ವಾಸ ಮಾಡುತ್ತಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು